ಟ್ರೆಂಡಿ ಕಿಸ್‌ ಯೂತ್‌ಫ‌ುಲ್‌ ಲವ್‌ಸ್ಟೋರಿ

Team Udayavani, Jan 11, 2019, 12:30 AM IST

q-24.jpg

ಎ.ಪಿ.ಅರ್ಜುನ್‌ “ಕಿಸ್‌’ ಎಂಬ ಸಿನಿಮಾ ನಿರ್ದೇಶಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಆ ಸಿನಿಮಾ ಏನಾಯಿತು ಎಂದು ಕೇಳುತ್ತಿರುವ ಹೊತ್ತಿಗೆ ಚಿತ್ರದ ಹಾಡೊಂದು ಸದ್ದು ಮಾಡುತ್ತಿದೆ. ಅದು “ಶೀಲಾ ಸುಶೀಲಾ …’. “ಕಿಸ್‌’ ಚಿತ್ರದ “ಶೀಲಾ ಸುಶೀಲಾ’ ಹಾಡು ಬಿಡುಗಡೆಯಾಗಿದ್ದು, ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಖುಷಿಯಲ್ಲೇ ಚಿತ್ರತಂಡ ಮಾಧ್ಯಮದ ಮುಂದೆ ಬಂದಿದೆ. ನಿರ್ದೇಶಕ ಅರ್ಜುನ್‌ ಖುಷಿಯಾಗಿದ್ದರು. ಸಿನಿಮಾ ತಡವಾದರೂ ಚೆನ್ನಾಗಿ ಮೂಡಿಬಂದ ಖುಷಿ ಅವರಲ್ಲಿತ್ತು. “ಸಿನಿಮಾ ತಡವಾಗಲು ನಾನಾ ಕಾರಣ, ನಾಯಕಿಯ ಎಕ್ಸಾಂ, ಲೊಕೇಶನ್‌, ನಾಯಕ ಕಾಲಿಗೆ ಏಟು ಜೊತೆಗೆ ನಿರ್ಮಾಪಕರ ಚುನಾವಣಾ ಓಡಾಟ. ಜೊತೆಗೆ ನಾವು ಹೊಸಬರನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿರುವುದರಿಂದ ರಿಹರ್ಸಲ್‌ ಮಾಡಿಯೇ ಶೂಟಿಂಗ್‌ಗೆ ಹೋಗುತ್ತಿದ್ದೆವು. ಆದರೆ ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಇವತ್ತಿನ ಟ್ರೆಂಡ್‌ಗೆ ತಕ್ಕಂತಹ ಸಿನಿಮಾ’ ಎನ್ನುವುದು ಅರ್ಜುನ್‌ ಮಾತು. ಚಿತ್ರದ ಕಥೆಯ ಬಗ್ಗೆ ಮಾತನಾಡುವ ಅರ್ಜುನ್‌,  “”ಕಿಸ್‌’ ಒಂದು ಕಲರ್‌ಫ‌ುಲ್‌ ಜರ್ನಿ. 18ರ ಹುಡುಗಿ 21ರ ಹುಡುಗರು ಲವ್‌ ಬಗ್ಗೆ ಹೇಗಿರುತ್ತಾರೆ, ಅವರ ನಡುವಿನ ಸಣ್ಣ ಸಣ್ಣ ಕಿತ್ತಾಟ, ಮುನಿಸು, ಎಕ್ಸೆ„ಟ್‌ಮೆಂಟ್‌, ಬ್ರೇಕಪ್‌, ಚಾಟಿಂಗ್‌ … ಇಂತಹ ಅಂಶಗಳೊಂದಿಗೆ ಈ ಸಿನಿಮಾ ಸಾಗುತ್ತದೆ. ಹಿಂದೆಲ್ಲಾ ಲವ್‌ ಎಂದರೆ ಹುಡುಗಿ ಹಿಂದೆ ತಿಂಗಳುಗಟ್ಟಲೇ ಸುತ್ತಾಡಿ, ಅವಳ ಗೆಳತಿಯನ್ನು ಫ್ರೆಂಡ್‌ ಮಾಡಿಕೊಂಡು, ಅವಳ ಕೈಯಲ್ಲಿ ಲವ್‌ಲೆಟರ್‌ ಕೊಡಬೇಕಿತ್ತು. ಆದರೆ, ಈಗ ಎಲ್ಲವೂ ಬದಲಾಗಿದೆ. ಬೆಳಗ್ಗೆ ಫ್ರೆಂಡ್‌ ರಿಕ್ವೆಸ್ಟ್‌. ಮಧ್ಯಾಹ್ನ ಫ್ರೆಂಡ್ಸ್‌. ಒಂದೆರಡು ದಿನ ಬಿಟ್ಟರೆ ಲವರ್ …. ಫೇಸ್‌ಬುಕ್‌, ವಾಟ್ಸಾಪ್‌ ಬಂದ ಮೇಲೆ ಎಲ್ಲವೂ ವೇಗವಾಗಿದೆ. ಇವತ್ತಿನ ಟ್ರೆಂಡಿ ಲವ್‌ಸ್ಟೋರಿಯಲ್ಲೂ ಒಂದಷ್ಟು ಮಂದಿ ಒಳ್ಳೆಯವರು ಇದ್ದಾರೆ. ಆ ತರಹದ ಲವ್‌ಸ್ಟೋರಿಯನ್ನು ಇಲ್ಲಿ ಹೇಳಿದ್ದೇನೆ’ ಎಂದು ಸಿನಿಮಾ ಬಗ್ಗೆ ವಿವರ ಕೊಡುತ್ತಾರೆ.

ಚಿತ್ರವನ್ನು ರಾಷ್ಟ್ರಕೂಟ ಪಿಕ್ಚರ್ನಡಿ ರವಿಕುಮಾರ್‌ ನಿರ್ಮಿಸಿದ್ದಾರೆ. ಕನ್ನಡದಲ್ಲಿ ಒಳ್ಳೆಯ ಸಿನಿಮಾ ಮಾಡಬೇಕೆಂಬ ಉದ್ದೇಶದಿಂದ “ಕಿಸ್‌’ ಮಾಡಿದ್ದಾಗಿ ಹೇಳಿಕೊಂಡರು. ಚಿತ್ರದಲ್ಲಿ ನಾಯಕರಾಗಿ ನಟಿಸಿರುವ ವಿರಾಟ್‌, ಮೊದಲ ಸಿನಿಮಾದ ಖುಷಿಯನ್ನು ಹಂಚಿಕೊಳ್ಳುವ ಜೊತೆಗೆ ಶ್ರೀಮಂತ ಹುಡುಗನಾಗಿ ನಟಿಸಿದ್ದಾಗಿ ಹೇಳಿದರು. ನಾಯಕಿ ಶ್ರೀಲೀಲಾ ಇಲ್ಲಿ ನಂದಿನಿ ಎಂಬ ಪಾತ್ರ ಮಾಡಿದ್ದಾರೆ. ಎಲ್ಲರೂ ಇಷ್ಟಪಡುವಂತಹ ಪಾತ್ರವಂತೆ. ಉಳಿದಂತೆ ಹಿರಿಯ ನಟರಾದ ದತ್ತಣ್ಣ, ಸುಂದರ್‌ ನಟಿಸಿದ್ದಾರೆ. ಚಿತ್ರಕ್ಕೆ ಇಮ್ರಾನ್‌ ಸರ್ದಾರಿಯಾ ನೃತ್ಯ ನಿರ್ದೇಶನವಿದೆ. ಅರ್ಜುನ್‌ ಶೆಟ್ಟಿ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.