ರಾಜಕೀಯದಲ್ಲಿ ವೈಯಕ್ತಿಕ ಮೌಲ್ಯಗಳೇ ನಿರ್ಣಾಯಕ


Team Udayavani, Aug 1, 2018, 3:14 PM IST

1-agust-15.jpg

ರಾಜಕೀಯದಲ್ಲಿ ಪ್ರಸ್ತುತ  ಯುವಜನರ ಆಸಕ್ತಿ ಹೇಗಿದೆ?
ರಾಜಕಾರಣದ ಬಗ್ಗೆ ಯುವ ಪೀಳಿಗೆಗೆ ಸರಿಯಾದ ಮಾರ್ಗದರ್ಶನವೇ ಸಿಗುತ್ತಿಲ್ಲ. ಈಗ ಇರುವ ರಾಜಕಾರಣ ರಂಗವನ್ನು ನೋಡಿಕೊಂಡೇ ಅವರು ಬೆಳೆಯುತ್ತಿದ್ದಾರೆ. ಮಾದರಿ ರಾಜಕೀಯ ವ್ಯಕ್ತಿಗಳ ಬಗ್ಗೆ ಹೆಚ್ಚು ತಿಳಿಸಿದರೆ ಮಾತ್ರ ಅವರಲ್ಲಿ ಈ ಬಗ್ಗೆ ಆಸಕ್ತಿ ಹೆಚ್ಚಲು ಸಾಧ್ಯವಿದೆ. ಆದರೆ ಅದು ಇಂದು ಸಾಧ್ಯವಾಗುತ್ತಿಲ್ಲ.

ದೇಶದ ಆಡಳಿತದಲ್ಲಿ  ಸಾಂವಿಧಾನಿಕ ಮೌಲ್ಯಗಳು ಕುಸಿಯುತ್ತಿವೆಯೇ?
ಹೌದು. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಇತ್ತೀಚೆಗೆ ಜಾತಿ, ಧರ್ಮಗಳೆಲ್ಲ ಸೇರಿಕೊಂಡು ರಾಜಕಾರಣವೆಂಬುದು ಸಾಂದರ್ಭಿಕ ಅನಿಸಿಕೊಳ್ಳುತ್ತಿದೆ. ಒಟ್ಟಾಗಿ ನಮ್ಮ ದೇಶದ ಆಡಳಿತ ವ್ಯವಸ್ಥೆ ನೋಡಿದರೆ ಆದರ್ಶ ಪ್ರಜಾಪ್ರಭುತ್ವಕ್ಕೆ ಹತ್ತಿರವಿಲ್ಲ. ಪ್ರಜಾಪ್ರಭುತ್ವದ ಮೌಲ್ಯವೂ ಕುಸಿದಿದೆ.

ಭ್ರಷ್ಟಾಚಾರರಹಿತ ಆಡಳಿತ ಕೊಡಲು ಏನು ಕ್ರಮ ಕೈಗೊಳ್ಳಬಹುದು?
ಹಣ ನೀಡಿದರೆ ನನ್ನ ಕೆಲಸ ಆಗುತ್ತೆ ಎಂದಾದರೆ ನಾನು ಅದನ್ನು ಮಾಡಲು ತಯಾರಿದ್ದೇನೆ ಎಂಬುದು ಜನಸಾಮಾನ್ಯರ ಯೋಚನೆಯಾಗಿದೆ. ಭ್ರಷ್ಟಾಚಾರ ರಹಿತ ಆಡಳಿತ ಮಾಡುತ್ತೇವೆ ಎಂದು ಹೇಳಿದವರಿಗೆ ಈಗಾಗಲೇ ಹಲವು ಬಾರಿ ಮತ ಹಾಕಿದ್ದೇವೆ. ಆದರೆ ಮತ್ತೆ ಮತ್ತೆ ಭ್ರಷ್ಟಾಚಾರಗಳ ಸುದ್ದಿ ನೋಡುತ್ತೇವೆ. ಹೀಗಾಗಿ ಮೊದಲು ಜನರು ಜಾಗೃತರಾಗಬೇಕು.

ರಾಜ್ಯ ರಾಜಕೀಯದಲ್ಲಾಗುತ್ತಿರುವ ಬದಲಾವಣೆಗಳು ಮುಂದಿನ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿವೆಯೇ?
ಈ ಹಿಂದೆ ಅನೇಕ ಪಕ್ಷಗಳು ಬೇರೆ ಬೇರೆಯಾಗಿದ್ದವು. ಸಾಕಷ್ಟು ಸೈದ್ಧಾಂತಿಕ, ವೈಯಕ್ತಿಕ ವ್ಯತ್ಯಾಸಗಳಿದ್ದವು. ಪ್ರಸ್ತುತ ಎಲ್ಲ ಸಿದ್ಧಾಂತಗಳನ್ನು ಬದಿಗೊತ್ತಿ ಪ್ರಾದೇಶಿಕ ಪಕ್ಷಗಳೆಲ್ಲ ಒಂದಾಗಿವೆ. ಅವೆಲ್ಲವೂ ಪ್ರಾದೇಶಿಕವಾಗಿ ಪ್ರಾಬಲ್ಯವನ್ನು ಉಳಿಸಿಕೊಂಡು ಬಂದವುಗಳಾಗಿವೆ. ರಾಷ್ಟ್ರೀಯ ಮಟ್ಟದ ಚುನಾವಣೆಯಾದರೂ ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ. ಪ್ರತೀ ಪಕ್ಷಗಳು 20 ಸೀಟುಗಳಿಸಿದರೂ, ಅದೊಂದು ಬದಲಾವಣೆಯೇ.

ಉತ್ತಮ ಆಡಳಿತಗಾರನಾಗಲು ತರಬೇತಿಯ ಅಗತ್ಯವಿದೆಯೇ? ಹೇಗೆ?
ತರಬೇತಿ ಕೊಟ್ಟು ತಯಾರು ಮಾಡುವ ರಂಗ ಇದಲ್ಲ. ಬಹುತೇಕವಾಗಿ ವೈಯಕ್ತಿಕ ಮೌಲ್ಯಗಳೇ ಅಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಆದರೆ ರಾಜಕೀಯ ಮೌಲ್ಯಗಳ ಬಗ್ಗೆ ಹೇಳಿಕೊಡುವುದರಲ್ಲಿ ತಪ್ಪೇನಿಲ್ಲ. ಆದರೆ ಆ ಮೌಲ್ಯಗಳು ಎಷ್ಟರ ಮಟ್ಟಿಗೆ ಜಾರಿಗೆ ಬರುತ್ತದೆ ಎಂಬುದು ಮುಖ್ಯವಾಗುತ್ತದೆ.

ಸಮ್ಮಿಶ್ರ ಸರಕಾರ ರಚನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉತ್ತಮವೇ?
ಸಮ್ಮಿಶ್ರ ಸರಕಾರವೆಂಬುದು ಅನಿವಾರ್ಯತೆ. ಸಿದ್ಧಾಂತದಲ್ಲಿ ರಾಜಿ ಮಾಡಿಕೊಂಡು ಸರಕಾರ ರಚಿಸಬೇಕಾದ ಸಂದರ್ಭ ಸಮ್ಮಿಶ್ರ ಸರಕಾರದ್ದಾಗಿದೆ. ಒಳ್ಳೆಯದೋ, ಕೆಟ್ಟದೋ ಎಂಬುದಕ್ಕಿಂತ ಹೆಚ್ಚಾಗಿ ಪ್ರಜಾಪ್ರಭುತ್ವದಲ್ಲಿ ಅದಕ್ಕೆ ಅವಕಾಶ ಇದೆ. 

ಧನ್ಯಾ ಬಾಳಕಜೆ 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.