ಮಳೆಗಾಲ, ಆಹಾರ ಸೇವನೆ ಇರಲಿ ಎಚ್ಚರ 

Team Udayavani, Jul 10, 2018, 3:21 PM IST

10-july-16.jpg

ಬಿಸಿಲ ಬೇಗೆಯಿಂದ ದಣಿದ ದೇಹಕ್ಕೆ ಮಳೆಗಾಲದ ಆರಂಭ ಖುಷಿ ಕೊಟ್ಟರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲೇಬೇಕು. ಅದರಲ್ಲೂ ಮುಖ್ಯವಾಗಿ ಆಹಾರ ಸೇವನೆಯ ಬಗ್ಗೆ ಹೆಚ್ಚಿನ ಎಚ್ಚರಿಕೆ ಇರಲೇಬೇಕು. ಹೊರಗೆ ತೇವವಾದ ವಾತಾವರಣವಿರವುದರಿಂದ ಸೂಕ್ಷ್ಮ  ಜೀವಾಣುಗಳಿಂದ ಅಜೀರ್ಣ, ಕಂಜಂಕ್ಟಿವಿಟಿಸ್‌, ಟೈಫಾಯಿಡ್‌ ಹಾಗೂ ಡೆಂಗ್ಯೂ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಈ ಬಗ್ಗೆ ಜಾಗ್ರತೆ ವಹಿಸುವುದು ಬಹುಮುಖ್ಯ.

1 ಮಳೆಗಾಲದಲ್ಲಿ ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು. ನೀರು ಕುದಿಸಿದಾಗ ಇದರಲ್ಲಿರುವ ಹಾನಿಕಾರಕ ಬಾಕ್ಟೀರಿಯಾ ಹಾಗೂ ಸೂಕ್ಷ್ಮಾಣು ಜೀವಿಗಳು ಸಾಯುತ್ತವೆ.

2 ಉಪ್ಪಿನ ಅಂಶ ಹೆಚ್ಚಿರುವ ಆಹಾರವನ್ನು ಸೇವಿಸಲೇಬಾರದು. ಹೆಚ್ಚು ಉಪ್ಪು ಸೇವನೆಯಿಂದ ರಕ್ತದೊತ್ತಡದಲ್ಲಿ ಏರುಪೇರಾಗಬಹುದು. ಇದನ್ನು ತಪ್ಪಿಸಲು ಕಡಿಮೆ ಉಪ್ಪಿನಂಶವಿರುವ ಆಹಾರ ಬಳಸಬೇಕು.

3 ಮಳೆಗಾಲದಲ್ಲಿ ಜೀರ್ಣಕ್ರಿಯೆ ಕಡಿಮೆಯಾಗುತ್ತದೆ. ಬೇಯಿಸದೇ ತಿನ್ನುವ (ಹಸಿ) ಆಹಾರದಿಂದ ಅಂತರ ಕಾಯ್ದುಕೊಳ್ಳಬೇಕು. ಈ ವಾತಾವರಣಕ್ಕೆ ಬೇಯಿಸಿದ ಆಥವಾ ಸುಟ್ಟ ಆಹಾರಗಳು ನಮ್ಮ ದೈನಂದಿನ ಆಹಾರದಲ್ಲಿದ್ದರೆ ಉತ್ತಮ. ಕತ್ತರಿಸಿಟ್ಟ ಹಣ್ಣು ಅಥವಾ ತೆರೆದಿಟ್ಟಿರುವ ಆಹಾರಗಳಿಂದ ದೂರವಿರಬೇಕು.

4 ಉತ್ಕರ್ಷಣ ನಿರೋಧಕಗಳಾದ ಹಸಿರು ಕಾಳುಗಳು, ಸಂದರ್ಬೋಯೋಚಿತವಾಗಿ ದೊರೆಯುವ ಹಣ್ಣುಗಳು, ಕುಂಬಳಕಾಯಿ, ಗೆಣಸುಗಳನ್ನು ಹೆಚ್ಚು ಬಳಸಬೇಕು. ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇನ್ನು ಹಸಿರು ಎಲೆ, ತರಕಾರಿಗಳು ಹಾಗೂ ಬೇರು ತರಕಾರಿಯನ್ನು ಬಳಸುವ ಮುನ್ನ ಸರಿಯಾಗಿ ತೊಳೆದು ಪರೀಕ್ಷಿಸಬೇಕು. 

5 ಸೀಫ‌ುಡ್‌ನಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವುದು ಉತ್ತಮ. ಯಾಕೆಂದರೆ ಇವುಗಳು ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತವೆ. ತತ್‌ಪರಿಣಾಮ ಅಜೀರ್ಣ ಉಂಟಾಗುವ ಸಾಧ್ಯತೆ ಹೆಚ್ಚು. 

6 ಮಸಾಲೆಯುಕ್ತ ಮತ್ತು ಹುಳಿ ಆಹಾರಗಳು ಮಳೆಗಾಲದಲ್ಲಿ ದೇಹದಲ್ಲಿ ಅಲರ್ಜಿಯನ್ನು ಉಂಟು ಮಾಡುತ್ತವೆ. ಇದರಿಂದ ದೇಹದಲ್ಲಿ ಸಣ್ಣ ಗುಳ್ಳೆಗಳು ಏಳುತ್ತವೆ. ಹೀಗಾಗಿ ಸಮತೋಲಿತ ಆಹಾರವನ್ನು ಬಳಸಬೇಕು.

7 ಜೇನುತುಪ್ಪ, ಪುದೀನ, ಶುಂಠಿ, ಕರಿಮೆಣಸು, ಬೆಳ್ಳುಳ್ಳಿ, ಅರಿಸಿನ ನಮ್ಮ ದಿನನಿತ್ಯದ ಆಹಾರದಲ್ಲಿರುವಂತೆ ನೋಡಿಕೊಳ್ಳಬೇಕು. ಇವುಗಳು ರೋಗ ನಿರೋಧಕಗಳಾಗಿ ಕೆಲಸ ಮಾಡುತ್ತದೆ. 

 ಕಾರ್ತಿಕ್‌ ಅಮೈ

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.