ತಂಗುದಾಣಗಳ ಸಮೀಪವೇ ಬಸ್‌ಗಳು ನಿಲ್ಲಲಿ

Team Udayavani, Oct 7, 2018, 2:57 PM IST

7-october-13.gif

ಮಂಗಳೂರು ನಗರದಲ್ಲಿ ಸಂಚಾರಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಅನೇಕ ಕಡೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದ್ದು, ರಸ್ತೆಯಿಡೀ ಗುಂಡಿ ಬಿದ್ದಿದೆ. ಈಗ ಸ್ಮಾರ್ಟ್‌ಸಿಟಿ ಮಂಗಳೂರಿನ ಮಂದಿ ಬಸ್‌ ನಿಲ್ದಾಣದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಅದರಲ್ಲಿಯೂ ನಗರದ ಪಂಪ್‌ವೆಲ್‌ ಬಸ್‌ ನಿಲ್ದಾಣವಂತೂ ಅವ್ಯವಸ್ಥೆಯಿಂದ ಕೂಡಿದೆ. ಈ ಪ್ರದೇಶದಲ್ಲಿ ಈಗಾಗಲೇ ಹೊಸ ಬಸ್‌ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ ಹೆಚ್ಚಿನ ಪ್ರಯಾಣಿಕರು ಆ ಬಸ್‌ ತಂಗುದಾಣದಲ್ಲಿ ಬಸ್‌ಗೆ ಕಾಯುವುದಿಲ್ಲ. ಬದಲಾಗಿ ಅಲ್ಲೇ ಪಕ್ಕದಲ್ಲಿ ರಸ್ತೆ ಬದಿಯಲ್ಲಿ ನಿಂತಿರುತ್ತಾರೆ. ಇದೇ ಕಾರಣಕ್ಕೆ ಅನೇಕ ಬಸ್‌ಗಳು ಬಸ್‌ ನಿಲ್ದಾಣದಲ್ಲಿ ನಿಲ್ಲದೆ, ಪಕ್ಕದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗುತ್ತದೆ. ಇದರಿಂದಾಗಿ ಪಂಪ್‌ವೆಲ್‌ನಲ್ಲಿ ಸದಾ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ.

ಸದಾ ಜನನಿಬಿಡ ಪ್ರದೇಶವಾದ ಜ್ಯೋತಿ ವೃತ್ತದಿಂದ ಬಂಟ್ಸ್‌ಹಾಸ್ಟೆಲ್‌ (ಹೊಟೇಲ್‌ ಮಹಾರಾಜ ಬಳಿ) ಬಸ್‌ ನಿಲ್ದಾಣವಿಲ್ಲ. ಆದರೂ, ಸಿಟಿ, ಖಾಸಗಿ ಬಸ್‌ಗಳು ಅಲ್ಲಿ ನಿಲ್ಲುತ್ತವೆ. ಪ್ರಯಾಣಿಕರು ಕೂಡ ರಸ್ತೆ ಬದಿಯಲ್ಲಿಯೇ ಬಸ್‌ಗೆ ಕಾಯುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. 

ಮಂಗಳೂರಿನ ಹೃದಯ ಭಾಗದಂತಿರುವ ಕಂಕನಾಡಿಯಲ್ಲಿ ಇಲ್ಲಿನ ವೃತ್ತದಿಂದ ಸ್ವಲ್ಪ ದೂರದಲ್ಲಿ ಚಿಕ್ಕ ಬಸ್‌ ನಿಲ್ದಾಣವಿದೆ. ಆದರೆ, ಇಲ್ಲಿ ಬಸ್‌ ನಿಲ್ಲುವುದು ಅಪರೂಪ. ಅದರ ಬದಲು ಸುಲ್ತಾನ್‌ ಗೋಲ್ಡ್‌ ಅಂಗಡಿಯ ಬಳಿ ನೂರಾರು ಪ್ರಯಾಣಿಕರು ನಿಂತಿರುತ್ತಾರೆ. ಆದರೆ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರೇ ಇರುವುದಿಲ್ಲ.

ನಗರದಲ್ಲಿನ ಅನೇಕ ಬಸ್‌ ನಿಲ್ದಾಣಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಿಲ್ಲ. ಇದರಿಂದ ಅನೇಕ ಬಸ್‌ ನಿಲ್ದಾಣಗಳಲ್ಲಿ ಪ್ರಚಾರದ ಬ್ಯಾನರ್‌, ಪ್ಯಾಂಪ್ಲೆಟ್‌ಗಳು ಅಂಟಿಸಿರುತ್ತದೆ. ನಗರದ ಜ್ಯೋತಿ, ಅಳಪೆ ಸ ಹಿತ ಅನೇಕ ಬಸ್‌ ನಿಲ್ದಾಣಗಳಲ್ಲಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ, ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದರಿಂದ ಬಸ್‌ ನಿಲ್ದಾಣಗಳು ಗಲೀಜಾಗಿದ್ದು, ಪ್ರಯಾಣಿಕರು ಇದರಲ್ಲಿ ನಿಲ್ಲಲು ಹಿಂಜರಿಯುವಂತೆ ಮಾಡುತ್ತಿದೆ.

ಪಿವಿಎಸ್‌ನಲ್ಲಿ ರಾತ್ರಿ ವೇಳೆ ಬಸ್‌ ನಿಲ್ದಾಣವೇ ಕಾಣೆಯಾಗುತ್ತದೆ.! ಬೆಂಗಳೂರು/ ಮುಂಬಯಿಗೆ ಹೋಗುವ ಖಾಸಗಿ ಬಸ್‌ಗಳು ಪಿವಿಎಸ್‌ ರಸ್ತೆ ಯ ಇಕ್ಕೆಲೆಗಳಯ ನಿಂತು ಸ್ಥಳೀಯವಾಗಿ ಹೋಗಲು ಬಸ್‌ ನಿಲ್ದಾಣದಲ್ಲಿ ನಿಲ್ಲಲು ಅವಕಾಶವೇ ಇಲ್ಲ. ಏಕೆಂದರೆ, ರಾತ್ರಿ 8ರಿಂದ ಬಸ್‌ ನಿಲ್ದಾಣದ ಮುಂಭಾಗ ಖಾಸಗಿ ಬಸ್‌ಗಳೇ ಠಿಕಾಣಿ ಹೂಡುತ್ತಿದ್ದು, ಸಂಚಾರ ವ್ಯವಸ್ಥೆಗೂ ತಡೆಯಾಗುತ್ತಿದೆ.

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.