ಎರುಕಡಪು: ನೇತ್ರಾವತಿ ನದಿಗೆ ಬೇಕಿದೆ ಸೇತುವೆ ಭಾಗ್ಯ


Team Udayavani, Mar 13, 2017, 2:56 PM IST

Bridge-13-2.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲು ಪರಿಸರದ ನಿವಾಸಿಗಳಿಗೆ ಇಲ್ಲಿನ ಎತ್ತಿನಗಂಡಿ (ಎರುಕಡಪು) ಎಂಬಲ್ಲಿ ನೇತ್ರಾವತಿ ನದಿಗೆ ಸೇತುವೆ ಇಲ್ಲದೆ ಸಂಚಾರಕ್ಕೆ ತೊಡಕುಂಟಾಗುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ಇಲ್ಲಿನವರು ಪಡುವ ಕಷ್ಟಕ್ಕೆ ಪರಿಹಾರವೇ ಇಲ್ಲದಂತಾಗಿದೆ. ಸರಿಯಾದ ರಸ್ತೆಯ ವ್ಯವಸ್ಥೆಯೂ ಇಲ್ಲದಾಗಿದೆ.

ಸಂಪರ್ಕ ಕೊಂಡಿ
ಕಡಿರುದ್ಯಾವರ ಗ್ರಾಮ ಹಾಗೂ ಇಂದಬೆಟ್ಟು ಗ್ರಾಮಗಳನ್ನು ವಿಭಜಿಸಿ ಬೆಳ್ಳೂರುಬೆ„ಲು ಸಮೀಪ ನೇತ್ರಾವತಿ ನದಿ ಹರಿಯುತ್ತಿದ್ದು, ಎರುಕಡಪು ಎಂಬಲ್ಲಿ ಸೇತುವೆಯಾದರೆ ಈ ಎರಡು ಗ್ರಾಮಗಳಿಗೆ ಒಂದು ಸಂಪರ್ಕಕೊಂಡಿಯಾಗಲಿದೆ. ಈಗ ತಾಲೂಕು ಕೇಂದ್ರಕ್ಕೆ ಬರಬೇಕಾದರೆ ಇಂದಬೆಟ್ಟು ಮೂಲಕ ಬರಬೇಕು. ಇಲ್ಲವೇ ಕಾನರ್ಪ ಮೂಲಕ ಉಜಿರೆಗೆ ಬಂದು ಅಲ್ಲಿಂದ ಬೆಳ್ತಂಗಡಿಗೆ ಬರಬೇಕು. ಬೆಳ್ಳೂರುಬೈಲು ಪರಿಸರಕ್ಕೆ ಸಂಬಂಧಿಸಿದಂತೆ ಎತ್ತಿನಗಂಡಿ, ಕೊಯಮಜಲು, ಸಣ್ಣಬೆಟ್ಟು, ದೊಡ್ಡಬೆಟ್ಟು, ಸೀತಲಡ್ಡ, ಕುದುರು, ಹೆರಿಬೆಟ್ಟು, ಇಂಜನೋಡಿ, ಬೆ„ನಾಲಿ, ಓಡರಬೆಟ್ಟು, ಅಂತರ, ನೂಜಿ, ಮೇಲಮನೆ, ಕಟ್ಟದಬದಿ, ಹೊಸಮಾರು, ದೇವಪಾಲು ವ್ಯಾಪ್ತಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಮನೆಗಳಿವೆ. ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದು ಕೂಡ ಕಷ್ಟ. ಮಳೆಗಾಲದ ಸಂದರ್ಭದಲ್ಲಿ ರಸ್ತೆಯೂ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರವೂ ಕಷ್ಟವಾಗುತ್ತದೆ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.

ನದಿ ದಾಟುವುದು ಅನಿವಾರ್ಯ 
ಮಳೆಗಾಲದಲ್ಲಿ ತಾಲೂಕು ಕೇಂದ್ರಕ್ಕೆ ಬರಬೇಕಾದರೆ ಸುಮಾರು 5 ಕಿ.ಮೀ. ನಡೆದುಕೊಂಡು ಸುತ್ತುಬಳಸಿ ಬರಬೇಕು. ನದಿ ದಾಟಿ  ಸುಮಾರು 2 ಕಿ.ಮೀ. ದೂರ ನಡೆದರೆ ಇಂದಬೆಟ್ಟು ಮೂಲಕ ಬೆಳ್ತಂಗಡಿಗೆ ಹತ್ತಿರದ ದಾರಿ. ಆದರೆ ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯನ್ನು ದಾಟುವುದು ಸುಲಭದ ಮಾತಲ್ಲ. ಈ ಪ್ರದೇಶದ ಕೆಲವು ಕೃಷಿಕರಿಗೆ ನದಿಯಾಚೆಯೂ ಕೃಷಿ ಜಮೀನಿದ್ದು ಅಲ್ಲಿಗೆ ಹೋಗಬೇಕಾದರೆ ಮಳೆಯೇ ಬರಲಿ, ನೆರೆಯೇ ಬರಲಿ ನದಿ ದಾಟುವುದು ಅನಿವಾರ್ಯವಾಗಿದೆ.

ವಿದ್ಯಾರ್ಥಿಗಳಿಗೆ ಕಷ್ಟ
ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸುಮಾರು 5 ಕಿ. ಮೀ. ನಡೆದುಕೊಂಡು ಹೋಗಬೇಕಿದೆ. ಸೇತುವೆ, ರಸ್ತೆ ನಿರ್ಮಾಣ ವಾಗುತ್ತದೆ ಎಂದು ಈ ಹಿಂದೆ ಇಲ್ಲಿ ಸರ್ವೇ ಕೂಡ ನಡೆದಿತ್ತು. ಎರುಕಡಪು ಸೇತುವೆ ನಿರ್ಮಾಣವಾದರೆ ಇಂದಬೆಟ್ಟು – ಕಡಿರುದ್ಯಾವರ ಸಂಪರ್ಕ ಸುಲಭವಾಗಲಿದೆ. ಪರಿಸರದ ಕೃಷಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಬಹಳಷ್ಟು  ಪ್ರಯೋಜನವಾಗಲಿದೆ. ಗ್ರಾಮೀಣ ಭಾಗದ ಜನರ, ಕೃಷಿಕರ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಶೀಘ್ರವಾಗಿ ಸ್ಪಂದಿಸಬೇಕಿದೆ ಎನ್ನುತ್ತಾರೆ ಸ್ಥಳೀಯರು.

– ಗುರು ಮುಂಡಾಜೆ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.