ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್‌ ಸಮರ !


Team Udayavani, May 28, 2020, 9:55 AM IST

ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್‌ ಸಮರ !

ಉಡುಪಿ: ದುಬಾೖಯಿಂದ ಆಗಮಿಸಿದ ಗರ್ಭಿಣಿ ಮಹಿಳೆಯನ್ನು ಹೋಂ ಕ್ವಾರಂಟೈನ್‌ ಬದಲಾಗಿ ಹೊಟೇಲ್‌ ಕ್ವಾರಂಟೈನ್‌ಗೆ ಕಳುಹಿಸುವ ಮೂಲಕ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಸರಕಾರದ ನಿಯಮ ಉಲ್ಲಂಘಿಸಿ, ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬುಧವಾರ ಟ್ವೀಟ್‌ ಮೂಲಕ ದೂರು ನೀಡಿದ್ದಾರೆ.

ಗರ್ಭಿಣಿ ಮಹಿಳೆ ಉಡುಪಿ ಲಾಡ್ಜ್ ನಲ್ಲಿ 15 ದಿನಗಳ ಕ್ವಾರಂಟೈನ್‌ ಅವಧಿ ಪೂರೈಸಿದ್ದಾರೆ. ಆದರೂ ಇನ್ನೂ ಕ್ವಾರಂಟೈನ್‌ ಸೆಂಟರ್‌ನಲ್ಲಿ ಇಡಲಾಗಿದೆ. ಜಿಲ್ಲಾಡಳಿತ ಸರಕಾರದ ನಿಯಮ ಪಾಲಿಸುತ್ತಿಲ್ಲ. ಮನೆಯಿಂದ ಆಹಾರ ಕಲ್ಪಿಸುವ ವ್ಯವಸ್ಥೆಯನ್ನು ಸಹ ನಿಷೇಧಿಸಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಡಿಸಿ ಪ್ರತ್ಯುತ್ತರ
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ ಉಡುಪಿ ಜಿಲ್ಲಾಧಿಕಾರಿ ಅವರು, ಇಲ್ಲಿ ಬೇಜವಾಬ್ದಾರಿ ಪ್ರಶ್ನೆಯೇ ಇಲ್ಲ. ಜಿಲ್ಲೆಗೆ 8 ಸಾವಿರ ಜನರು ಹೊರ ದೇಶ, ರಾಜ್ಯದಿಂದ ಬಂದಿದ್ದಾರೆ. ಅವರೆಲ್ಲರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕಾಗಿದೆ. ದುಬಾೖಯಿಂದ ಬಂದ ಗರ್ಭಿಣಿ ಮಹಿಳೆಯು ಕೋವಿಡ್ ವೈರಸ್‌ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಕಾರಣದಿಂದ 14 ದಿನಗಳ ಅನಂತರ ಪರೀಕ್ಷಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ರೀಟ್ವೀಟ್‌ ಮಾಡಿದ್ದಾರೆ.

ಗರ್ಭಿಣಿ ಮಹಿಳೆ ಮನೆಗೆ
15 ದಿನ ಕ್ವಾರಂಟೈನ್‌ ಅವಧಿ ಮುಗಿಸಿದ ಗರ್ಭಿಣಿಯನ್ನು ಹೊಟೇಲ್‌ನಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ನಾನು ಜಿಲ್ಲಾಡಳಿತದ ವಿರುದ್ಧವಾಗಿಲ್ಲ. ಆದರೆ ನಿಯಮ ಮೀರಿ ಅಕ್ರಮ ಗಣಿಗಾರಿಕೆ, ಜನರಿಗೆ ಕಿರುಕುಳ ನೀಡಿದಾಗ ಧ್ವನಿ ಎತ್ತಬೇಕಾಗುತ್ತದೆ. ಉತ್ತಮ ಕೆಲಸಗಳಿಗೆ ನನ್ನ ಬೆಂಬಲವಿರುತ್ತದೆ ಎಂದು ಪ್ರಮೋದ್‌ ಮಧ್ವರಾಜ್‌ ಅವರು ಟ್ವೀಟರ್‌ ಖಾತೆಯಲ್ಲಿ ಮಾಹಿತಿ  ನೀಡಿದ್ದಾರೆ.

ರಘುಪತಿ ಭಟ್‌ ಟ್ವೀಟ್‌
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಟ್ವೀಟ್‌ಗೆ ರೀ ಟ್ವೀಟ್‌ ಮಾಡಿದ ಶಾಸಕ ಕೆ.ರಘುಪತಿ ಭಟ್‌ 60 ದಿನಗಳಿಂದ ಹೋಂ ಕ್ವಾರಂಟೈನ್‌ ಆಗಿರುವ ಮಾಜಿ ಸಚಿವರು ಜಿಲ್ಲಾಧಿಕಾರಿ ವಿರುದ್ಧ ದೂರು ನೀಡಿದ್ದಾರೆ ಆದರೆ ಜಿಲ್ಲೆಯ ಜನರ ಆರೋಗ್ಯದ ಕಡೆಗೆ ನಿರಂತರವಾಗಿ ದುಡಿಯುತ್ತಿರುವ ಜಿಲ್ಲಾಧಿಕಾರಿ ನೇತೃತ್ವದ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.