5 ಕೋ. ರೂ. ವೆಚ್ಚದಲ್ಲಿ ಕೆರೆ, ಗಾರ್ಡನ್‌, ಪಾರ್ಕ್‌ ಅಭಿವೃದ್ಧಿ


Team Udayavani, Mar 13, 2017, 4:31 PM IST

12-Nadikere-1.jpg

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿ ಭೂಗರ್ಭದೊಳಗೆ ಸೇರಿ ಹೋಗಿದ್ದು, ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಪುನರುಜ್ಜೀವನಗೊಳಿಸಲಾದ ಐತಿಹಾಸಿಕ ನಡಿಕೆರೆಯನ್ನು ಶಾಸಕ ವಿನಯ ಕುಮಾರ್‌ ಸೊರಕೆ ಅವರು ಮಾ. 12ರಂದು ಉದ್ಘಾಟಿಸಿ, ಬಾಗಿನ ಸಮರ್ಪಿಸಿದರು.

ಬಳಿಕ ಮಾತನಾಡಿದ ಅವರು ಕಾಪು ಪುರಸಭಾ ವ್ಯಾಪ್ತಿಯ ವಿವಿಧ ಕೆರೆ, ಗಾರ್ಡ್‌ನ್‌ ಮತ್ತು ಪಾರ್ಕ್‌ ಅಭಿವೃದ್ಧಿಗಾಗಿ 5 ಕೋ. ರೂ. ಅನುದಾನವನ್ನು ಮೀಸಲಿರಿಸಲಾಗಿದ್ದು, ಹಂತ-ಹಂತವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು. ಈಗಾಗಲೇ 7-8 ಕೆರೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದ್ದು, ನಡಿಕೆರೆಯನ್ನು ಮಾದರಿಯಾಗಿಟ್ಟುಕೊಂಡು ಎಲ್ಲಾ ಕೆರೆಗಳನ್ನು ಆಭಿವೃದ್ಧಿ ಪಡಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡುವುದಾಗಿ ಹೇಳಿದರು.

ನಾವು ಪರಿಸರವನ್ನು ರಕ್ಷಿಸಿದರೆ, ಪರಿಸರ ನಮ್ಮನ್ನು ರಕ್ಷಿಸುತ್ತದೆ. ಮಾರ್ಚ್‌ ಪ್ರಥಮಾರ್ಧದಲ್ಲೇ ಕೆಲವು ಕಡೆಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾಗುತ್ತಿದ್ದು, ಈ ಕಾರಣದಿಂದಾಗಿ ನೀರಿನ ಒರತೆಗಳನ್ನು ಹುಡುಕಿ ಪುನುರುಜ್ಜೀವನ ಗೊಳಿಸುವುದು ಇಂದಿನ ಅನಿ ವಾರ್ಯತೆಯಾಗಿದೆ. 

ನಡಿಕೆರೆಯ ಪುನರುಜೀjವನದ ಮೂಲಕವಾಗಿ ಹತ್ತಾರು ಕೀ. ಮೀ. ವ್ಯಾಪ್ತಿಯಲ್ಲಿ ನೀರಿನ ಒರತೆ ವೃದ್ಧಿಯಾಗಲಿದೆ ಎಂದರು.ಕಾಪು ಪುರಸಭಾಧ್ಯಕ್ಷೆ ಕು| ಸೌಮ್ಯಾ ಎಸ್‌., ಉಪಾಧ್ಯಕ್ಷ ಎಚ್‌. ಉಸ್ಮಾನ್‌, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಉದ್ಯಮಿ ಮನೋಹರ್‌ ಎಸ್‌. ಶೆಟ್ಟಿ, ಗೌರವ್‌ ಶೇಣವ, ಎಂಜಿನಿಯರ್‌ ಎಸ್‌. ಟಿ. ಗೌಡ, ಗುತ್ತಿಗೆದಾರ ನಾಗರಾಜ್‌, ಪುರಸಭಾ ಸದಸ್ಯೆ ರಮಾ ವೈ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕೆರೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಕಾಪು ಶಾಸಕ ವಿನಯ ಕುಮಾರ್‌ ಸೊರಕೆ, ಅಧಿಕಾರಿ ಎಸ್‌. ಟಿ. ಗೌಡ, ಗುತ್ತಿಗೆದಾರ ನಾಗರಾಜ್‌, ಕಲ್ಲಿನ ಕೆಲಸದ ಹುಸೇನ್‌ ಸಾಹೇಬ್‌, ಪ್ರಗತಿಪರ ಕೃಷಿಕ ರಾಮ ಪೂಜಾರಿ ಇವನ್ನು ಸಮ್ಮಾನಿಸಲಾಯಿತು. ಇಂಜಿನಿಯರ್‌ ಗೌತಮ್‌, ಮ್ಯಾನೇಜರ್‌ ನಾರಾಯಣ ದೇವಾಡಿಗ ಅವರನ್ನು ಅಭಿನಂದಿಸಲಾಯಿತು.

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ ಸ್ವಾಗತಿಸಿದರು. ವಂದನಾ ಶೆಟ್ಟಿ ವಂದಿಸಿದರು. ಕರಂದಾಡಿ ಶಾಲಾ ಮುಖ್ಯ ಶಿಕ್ಷಕ ನಿರ್ಮಲ್‌ ಕುಮಾರ್‌ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.