ವಿದ್ಯುತ್, ನೀರು: ಚುನಾವಣಾ ಭರವಸೆ ಈಡೇರಿಕೆ : ಪ್ರಮೋದ್
Team Udayavani, Feb 3, 2018, 9:00 AM IST
ಉಡುಪಿ: ಉಡುಪಿಗೆ ನಿರಂತರ ವಿದ್ಯುತ್ ಮತ್ತು ನೀರು ಪೂರೈಕೆ ಮಾಡುವುದಾಗಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಭರವಸೆ ನೀಡಿದ್ದೆ. ಅದರಂತೆ ಉಡುಪಿ ತಾಲೂಕಿಗೆ ನಿರಂತರ 24 ಗಂಟೆ ವಿದ್ಯುತ್ ಒದಗಿಸಲಾಗಿದೆ. ಇದೀಗ ವಾರಾಹಿಯಿಂದ ಉಡುಪಿಗೆ ಕುಡಿಯುವ ನೀರಿನ ಪೂರೈಕೆ ಯೋಜನೆ ಕಾರ್ಯಗತಗೊಳ್ಳಲಿದ್ದು ಎರಡೂ ಭರವಸೆ ಈಡೇರಿದಂತಾಗಲಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ವಾರಾಹಿ ನದಿಯಿಂದ ಉಡುಪಿಗೆ ಕುಡಿಯುವ ನೀರು ಪೂರೈಕೆ ಯೋಜನೆಯ ಅನುಷ್ಠಾನದ ಪೂರ್ವಭಾವಿಯಾಗಿ ಫೆ.2ರಂದು ಉಡುಪಿ ನಗರ ಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಜರಗಿದ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.
ಈಗ ಉಡುಪಿ ನಗರಕ್ಕೆ ಸ್ವರ್ಣಾ ನದಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಇದರಿಂದ 365 ದಿನಗಳು ಕೂಡ ನೀರು ಪೂರೈಕೆ ಮಾಡಲು ಅಸಾಧ್ಯವಾಗಿದೆ. ಈ ಹಿಂದೆ ಸ್ವರ್ಣಾ ಎರಡನೇ ಹಂತದ ಯೋಜನೆ ಮಾಡುವ ಸಂದರ್ಭವೇ ಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ಇದರಿಂದ ನೀರು ಪೂರೈಕೆ ಪೂರ್ಣಪ್ರಮಾಣದಲ್ಲಿ ಸಾಧ್ಯವಿಲ್ಲ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕೆಲವು ಜನಪ್ರತಿನಿಧಿಗಳು ಸ್ವರ್ಣೆ ನಮ್ಮ ನದಿ ಎಂಬ ಭಾವನಾತ್ಮಕ ವಿಚಾರ ಮುಂದಿಟ್ಟು ಎರಡನೇ ಯೋಜನೆ ಅನುಷ್ಠಾನಗೊಳಿಸಿದರು. ಆದರೆ ಈಗ ವಾರಾಹಿಯಿಂದ ನೀರು ತರುವುದು ಅನಿವಾರ್ಯವಾಗಿದೆ. ಅಮೃತ್ ಯೋಜನೆ ಮತ್ತು ಎಡಿಬಿಯಿಂದ ಕುಡಿಯುವ ನೀರು ಪೂರೈಕೆ ಮತ್ತು ಒಳಚರಂಡಿ ಕಾಮಗಾರಿಗೆ 370 ಕೋ.ರೂ. ಬಿಡುಗಡೆಯಾಗಲಿದೆ ಎಂದು ಸಚಿವರು ಹೇಳಿದರು.
ಅಧಿಕಾರಿಗಳ ನಡುವೆ ಸಮಾಲೋಚನೆ !
ವಾರಾಹಿಯಿಂದ ಉಡುಪಿಗೆ ನೀರು ತರುವ ಈ ಯೋಜನೆಯ ಸಾಧಕ ಬಾಧಕಗಳ ಕುರಿತು ಸಾರ್ವಜನಿಕ ಅಭಿಪ್ರಾಯ ಪಡೆದು ಆ ವರದಿಯನ್ನು ಸರಕಾರಕ್ಕೆ ಕಳುಹಿಸಿಕೊಡುವ ಉದ್ದೇಶದಿಂದ ಈ ಸಮಾಲೋಚನ ಸಭೆ ಕರೆಯಲಾಗಿತ್ತು. ನಗರಸಭೆಯ ಅಧಿವೇಶನ ಜರಗುವ ಸಭಾಂಗಣದಲ್ಲೇ ಆಯೋಜಿಸಲಾಗಿತ್ತು. ಸೀಮಿತ ಸಂಖ್ಯೆಯ ಆಸನಗಳಿದ್ದವು. ಆದರೆ ಅವುಗಳು ಕೂಡ ಭರ್ತಿಯಾಗಿರಲಿಲ್ಲ.
ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಪೌರಾಯುಕ್ತ ಮಂಜುನಾಥಯ್ಯ, ನಗರಸಭೆ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.
30 ತಿಂಗಳಲ್ಲಿ ಪೂರ್ಣ
ವಾರಾಹಿಯಿಂದ ಉಡುಪಿ ಸ್ವರ್ಣೆ ಅಣೆಕಟ್ಟಿನವರೆಗೆ ಪೈಪ್ ಲೈನ್ ಮೂಲಕ ನೀರು ತಂದು ಅಲ್ಲಿ ಶುದ್ಧೀಕರಣ ಮಾಡಿ ವಿತರಣೆ ಮಾಡುವ ಯೋಜನೆ ಇದಾಗಿದ್ದು ಒಟ್ಟು 38 ಕಿ.ಮೀ. ಪೈಪ್ಲೈನ್ ಅಳವಡಿಸಲಾಗುವುದು. ಅಗತ್ಯ ಇರುವಲ್ಲಿ ಜನರ ಮನವೊಲಿಸಿ ಭೂ ಸ್ವಾಧೀನ ಮಾಡಲಾಗುವುದು. ಬಹುತೇಕ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿ.ಪಂ. ರಸ್ತೆಗಳ ಪಕ್ಕದಲ್ಲೇ ಪೈಪ್ಲೈನ್ ಅಳವಡಿಸಲಾಗುವುದು. ಯೋಜನೆಗೆ ಟೆಂಡರ್ ಪ್ರಕ್ರಿಯೆ
ನಡೆಯುತ್ತಿದ್ದು ಈ ವರ್ಷದ ಮೇ ತಿಂಗಳಿನಲ್ಲಿ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆ ಇದೆ. ಅನಂತರದ 30 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಕೆಯುಐಡಿಎಫ್ಸಿ ಸಮನ್ವಯಾಧಿಕಾರಿ ಪ್ರಭಾಕರ ಶರ್ಮ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ