ರಾಮ ಮಂದಿರ ನಿರ್ಮಾಣ ಖಚಿತ


Team Udayavani, Nov 25, 2017, 6:00 AM IST

241117Astro-Page01.jpg

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುವುದು ಖಚಿತ. ಧರ್ಮ ಸಂಸದ್‌ನಲ್ಲಿ ಭಾಗವಹಿಸಿದ ಎಲ್ಲ ಸಾಧುಸಂತರ ನಿಲುವು ಒಂದೇ ಆಗಿದೆ. ಈ ವಿಚಾರದಲ್ಲಿ ಚೌಕಾಶಿಯ ಪ್ರಶ್ನೆಯೇ ಇಲ್ಲ. ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದರು.

ಉಡುಪಿಯಲ್ಲಿ ಶುಕ್ರವಾರ ಪ್ರಾರಂಭಗೊಂಡ ಧರ್ಮ ಸಂಸದ್‌ನಲ್ಲಿ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿ ನಡೆದ ಗೋಷ್ಠಿಯ ಅನಂತರ ಜತೆ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಕುಮಾರ್‌ ಜೈನ್‌ ಅವರೊಂದಿಗೆೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ಎಲ್ಲ ಮತಗಳ ಸಂತರು ನಿರ್ಣಯ ಮಂಡಿಸಿದ್ದಾರೆ. ರಾಮ ಮಂದಿರ ನಿರ್ಮಿಸುವುದು ಪ್ರತಿಯೊಬ್ಬರ ಆಗ್ರಹವಾಗಿದೆ. ಅದು ದೇಶದ ಕೋಟ್ಯಂತರ ಭಕ್ತರ ಬೇಡಿಕೆಯೂ ಹೌದು. ಮಂದಿರ ನಿರ್ಮಾಣದ ನಕ್ಷೆ ಸಿದ್ಧ ಗೊಂಡಿದೆ. ಮುಂದಿನ ವರ್ಷ ನಕ್ಷೆಯ ಪ್ರಕಾರ ಮಂದಿರ ನಿರ್ಮಾಣದ ಕಾರ್ಯ ಪ್ರಾರಂಭ ವಾಗಲಿದೆ. ಆ ಜಾಗದಲ್ಲಿ ಮಂದಿರ ಹೊರತು ಬೇರೇನೂ ಆಗಲು ಬಿಡುವುದಿಲ್ಲ  ಎಂದರು.

ಸಾಧುಸಂತರ ಒಮ್ಮತದ ನಿಲುವು ಅಂತಿಮ: ಮಂದಿರಕ್ಕೆ ಸಂಬಂಧಿಸಿ ರವಿಶಂಕರ್‌ ಗುರೂಜಿ ಅವರ ಸಂಧಾನ ಮಾತುಕತೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗುರೂಜಿ ಅವರ ನಿಲುವಿಗೂ ನಮ್ಮ ನಿಲುವಿಗೂ ಸಂಬಂಧವಿಲ್ಲ. ಮಂದಿರ ನಿರ್ಮಿಸುವ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯಕ್ಕಿಂತ ಅನೇಕ ಸಾಧುಸಂತರ ಒಮ್ಮತದ ನಿರ್ಣಯವೇ ಅಂತಿಮ. ಸ್ವಯಂ ಪ್ರೇರಣೆಯಿಂದ ಯಾರೂ ಕೂಡ ಅಭಿಪ್ರಾಯ ತಿಳಿಸಬಹುದು. ಸಂಧಾನ ನಡೆಸಲು ಅದು ಸಾಮಾನ್ಯ ವಿಷಯವಲ್ಲ. ಎರಡು ಧರ್ಮಗಳಿಗೆ ಸಂಬಂಧಿಸಿದ ದೊಡ್ಡ ವಿಚಾರ. ಆದರೆ ಅವರ ಅಭಿಪ್ರಾಯದಲ್ಲಿ ನಮಗೆ ಅಸಮಾಧಾನವಿಲ್ಲ. ಅವರ ಬಗ್ಗೆ ಅತ್ಯಂತ ಗೌರವವಿದೆ ಎಂದು ಹೇಳಿದರು.

ಪರ್ಯಾಯ ಶ್ರೀ ಪೇಜಾವರ ಶ್ರೀಗಳು ಕೂಡ ಮಂದಿರ ನಿರ್ಮಿಸುವ ಬಗ್ಗೆ ದಿಟ್ಟ ನಿಲುವು ವ್ಯಕ್ತಪಡಿಸಿದ್ದಾರೆ. 1985ರಲ್ಲಿ ಉಡುಪಿಯಲ್ಲಿ ನಡೆದ ಧರ್ಮಸಂಸದ್‌ನಲ್ಲಿ ಶ್ರೀರಾಮ ಮಂದಿರದ ಕೀಲಿ ತೆಗೆಯುವ ಸಂಕಲ್ಪವೂ ಸಾಕಾರಗೊಂಡಿದೆ. ಈ ಬಾರಿಯೂ ಪೇಜಾವರ ಶ್ರೀಗಳು 2019ರ ಅಕ್ಟೋಬರ್‌ನಲ್ಲಿ ಮಂದಿರ ನಿರ್ಮಾಣದ ಕೆಲಸ ಪ್ರಾರಂಭವಾಗುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ಅದು ನಿಜವಾಗಲಿದೆ. ಹೀಗಾಗಿ ಈ ವಿಚಾರದ ಸಂಬಂಧ ಹಿಂಜರಿಯುವ ಮಾತಿಲ್ಲ. ಸದ್ಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿದೆ. ಕೋರ್ಟ್‌ ತನ್ನ ಕೆಲಸ ಮಾಡಲಿ ಮುಂದಿನ ಕೆಲಸವನ್ನು ವಿಹಿಂಪ ಮಾಡಲಿದೆ. 1984ರ ನಿಲುವಿಗೆ ಬದ್ಧವಾಗಲಿದೆ ಎಂದು ತಿಳಿಸಿದರು. ಭಾರತ ಏಕತೆ ಹೊಂದಿರುವ ರಾಷ್ಟ್ರ. ಹಿಂದೂ ಧರ್ಮದ ವಿಚಾರಗಳು ಪ್ರತಿಯೊಂದು ಹಳ್ಳಿಗಳಿಗೂ ತಲುಪಬೇಕು. ಇದನ್ನು ಸಂತರು ಮಾಡಲಿದ್ದಾರೆ ಎಂದರು.

ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಬೇಕಾದ ಪೂರಕ ವಾತಾವರಣ ಕಂಡು ಬರುತ್ತಿದೆ. 2019 ರೊಳಗೆ  ನಿರ್ಮಾಣ ಕಾರ್ಯ ಆರಂಭ ವಾಗಬಹುದು. ಹೀಗಾಗಿ ಇದು ಘೋಷಣೆ ಅಲ್ಲ, ಆಗುತ್ತದೆ ಎಂಬ ವಿಶ್ವಾಸವಿದೆ 
– ಪೇಜಾವರಶ್ರೀ 

ರಾಮ ಜನ್ಮಭೂಮಿಯಲ್ಲಿಯೇ ಧ್ವಜ ಊರುವೆವು. ಅದು ನಮ್ಮ ನಂಬಿಕೆ, ಅದು ನಮ್ಮ ಶ್ರದ್ಧೆ. ರಾಮಮಂದಿರ ನಿರ್ಮಾಣ ಪೇಜಾವರ ಶ್ರೀಗಳ ಸಮ್ಮುಖದಲ್ಲಿಯೇ ನಡೆಯುವಂತಾಗಲಿ.
– ಮೋಹನ್‌ ಭಾಗವತ್‌

ಟಾಪ್ ನ್ಯೂಸ್

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.