ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಜೋಗಿ ಆಯ್ಕೆ
Team Udayavani, Jul 5, 2018, 9:46 AM IST
ಕೋಟ: ಬ್ರಹ್ಮಾವರ ತಾ| ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಖ್ಯಾತ ಸಾಹಿತಿ, ಪತ್ರಕರ್ತ ಜೋಗಿ ಆಯ್ಕೆಯಾಗಿದ್ದಾರೆ. ಆ. 5ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಮಂಗಳವಾರ ಕೋಟದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ವಡ್ಡರ್ಸೆ ರಘುರಾಮ ಶೆಟ್ಟಿಯವರು ಪತ್ರಿಕೋದ್ಯಮವನ್ನು ಸಮಾಜಶಾಸ್ತ್ರೀಯ ದೃಷ್ಟಿಕೋನದೊಂದಿಗೆ ಕಂಡವರು ಹಾಗೂ “ಮುಂಗಾರು’ ಪತ್ರಿಕೆಯನ್ನು ಮುನ್ನಡೆಸಿ ನೂರಾರು ಯುವ ಪತ್ರಕರ್ತರನ್ನು ರೂಪುಗೊಳಿಸಿದವರು.
ಡೆಕ್ಕನ್ ಹೆರಾಲ್ಡ್, ಪ್ರಜಾವಾಣಿ ಪತ್ರಿಕೆಯಲ್ಲಿ ಸುದೀರ್ಘ ಕಾಲ ಪತ್ರಕರ್ತರಾಗಿ ದುಡಿದಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಿಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದ ಕಳೆದ ಎರಡು ವರ್ಷಗಳಿಂದ ಇವರ ಹೆಸರಿನಲ್ಲಿ ಬ್ರಹ್ಮಾವರ ಪತ್ರಕರ್ತರ ಸಂಘ ಪತ್ರಿಕೋದ್ಯಮ ಕ್ಷೇತ್ರದಲ್ಲಿ ದುಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!