ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ದಾಖಲಿಸುವಲ್ಲಿ ನಿರ್ಲಕ್ಷ್ಯ  ಬೇಡ


Team Udayavani, Jul 21, 2018, 12:48 PM IST

udupidcpriyanka.jpg

ಉಡುಪಿ: ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿಕೊಳ್ಳುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ ದೂರು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ನೇರವಾಗಿ ಗೃಹ ಇಲಾಖೆಗೆ ಸೂಚಿಸಲಾಗುವುದು ಎಂದು ಡಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ವಿವಿಧ ಸಮಿತಿಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ದೂರು ನೀಡಲು ಪೊಲೀಸ್‌ ಠಾಣೆಗೆ ತೆರಳಿದರೆ, ದೂರು ದಾಖಲಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಕುರಿತು ಮಹಿಳಾ ಸಾಂತ್ವನ ಕೇಂದ್ರದ ಸದಸ್ಯರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಶೀಘ್ರದಲ್ಲಿ ದೂರು ದಾಖಲಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಇಲ್ಲವಾದಲ್ಲಿ ಸಂಬಂಧಪಟ್ಟ ಪೊಲೀಸರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಗೆ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದರು.

ವೇತನ ಹೆಚ್ಚಳಕ್ಕೆ ಪತ್ರ
ಸಾಂತ್ವನ ಕೇಂದ್ರದ ಸಿಬಂದಿಗೆ ನೀಡುವ ವೇತನವನ್ನು ಹೆಚ್ಚಳ ಮಾಡುವ ಕುರಿತಂತೆ ಇಲಾಖೆಗೆ ಪತ್ರ ಬರೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಾಂತ್ವನ ಯೋಜನೆ: ಪ್ರಕರಣ
ಸಾಂತ್ವನ ಯೋಜನೆಯಡಿ ಜನವರಿಯಿಂದ ಜೂನ್‌ವರೆಗೆ ಉಡುಪಿಯಲ್ಲಿ ಒಟ್ಟು 181 ಪ್ರಕರಣ ದಾಖಲಾಗಿದ್ದು, 65  ಇತ್ಯರ್ಥಪಡಿಸಲಾಗಿದೆ, 116 ಬಾಕಿ ಇವೆ. ಕಾರ್ಕಳದಲ್ಲಿ 80 ಪ್ರಕರಣ ದಾಖಲಾಗಿದ್ದು, 25 ಇತ್ಯರ್ಥಪಡಿಸಲಾಗಿದೆ. 55 ಬಾಕಿ ಇವೆ. ಕುಂದಾಪುರದಲ್ಲಿ 91 ಪ್ರಕರಣ ದಾಖಲಾಗಿದ್ದು, 34 ಇತ್ಯರ್ಥ ಪಡಿಸಲಾಗಿದೆ. 57 ಬಾಕಿ ಇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಖೀ ಒನ್‌ ಸ್ಟಾಪ್‌: 88 ಪ್ರಕರಣ
ಸಖೀ ಒನ್‌ ಸ್ಟಾಪ್‌ ಸೆಂಟರ್‌ನಲ್ಲಿ ಜನವರಿಯಿಂದ ಜೂನ್‌ ವರೆಗೆ ಒಟ್ಟು 88 ಪ್ರಕರಣಗಳು ದಾಖಲಾಗಿದ್ದು, 22 ಇತ್ಯರ್ಥ ಪಡಿಸಲಾಗಿದೆ. 2 ಸಮಾಲೋಚನೆಯಲ್ಲಿ ಮತ್ತು 64 ನ್ಯಾಯಾಲಯದಲ್ಲಿ ಬಾಕಿ ಇವೆ. ವರದಕ್ಷಿಣೆ ನಿಷೇಧ ಕಾಯ್ದೆಯಡಿ ಒಟ್ಟು 10 ಪ್ರಕರಣಗಳಿದ್ದು, 3 ನ್ಯಾಯಾಲಯದಲ್ಲಿ ಮತ್ತು 7 ಪೊಲೀಸ್‌ ಇಲಾಖೆಯಲ್ಲಿ ಬಾಕಿ ಇವೆ. ಸ್ಥೆ ರ್ಯನಿಧಿ ಯೋಜನೆಯಡಿ 2 ಫ‌ಲಾನು ಭವಿಗೆ 50,000 ರೂ. ಪರಿಹಾರ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬಾಲ್ಯವಿವಾಹ ನಡೆದಿಲ್ಲ
ಜಿಲ್ಲೆಯಲ್ಲಿ ಯಾವುದೇ ಬಾಲ್ಯ  ವಿವಾಹ ನಡೆದಿಲ್ಲ. ಸಾಮೂಹಿಕ ವಿವಾಹ ಸಂದರ್ಭ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ತಹಶೀ ಲ್ದಾರರು ಸ್ಥಳಕ್ಕೆ ತೆರಳಿ ವಯಸ್ಸಿನ ದೃಢೀಕರಣ ಮಾಡಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದರು. ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಪ್ರಾಧಿಕಾರದ ಕಾರ್ಯದರ್ಶಿ ಲತಾ, ಜಿ.ಪಂ. ಸಿಇಒ ಶಿವಾನಂದ ಕಾಪಶಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.