ಕಲ್ಯಾ ಶಾಲೆ ಕಟ್ಟಡ ಕುಸಿತ
Team Udayavani, Aug 13, 2018, 10:41 AM IST
ಬೆಳ್ಮಣ್: ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಕಾರ್ಕಳ ತಾಲೂಕಿನ ಕಲ್ಯಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡದ ಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ.
ಹಳೆಯ ಕಟ್ಟಡವಾಗಿರುವ ಕಾರಣ ಇಲ್ಲಿ ಕೆಲವೊಮ್ಮೆ ಮಾತ್ರ ಪಾಠ ಪ್ರವಚನ ನಡೆಯುತ್ತಿತ್ತು. ಉಳಿದಂತೆ ಸಭಾಂಗಣವಾಗಿ ಉಪಯೋಗಿಸುತ್ತಿದ್ದರು. ರಾತ್ರಿ ವೇಳೆ ಈ ಘಟನೆ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ಕಟ್ಟಡ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ. ಮಳೆ ನೀರು ಬಿದ್ದು ಎರಡು ತರಗತಿ ಕೋಣೆಗಳ ಒಂದು ಭಾಗದ ಗೋಡೆಯೂ ಕುಸಿದಿದೆ. ಮಳೆ ಮುಂದುವರಿದರೆ ಕಟ್ಟಡ ಮತ್ತಷ್ಟು ಕುಸಿಯುವ ಸಾಧ್ಯತೆಗಳಿವೆ ಎಂದು ಎಸ್ಡಿಎಂಸಿ ಅಧ್ಯಕ್ಷ ಶೇಖರ ಆಚಾರ್ ತಿಳಿಸಿದ್ದಾರೆ. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಎಸ್ಡಿಎಂಸಿ ಉಪಾಧ್ಯಕ್ಷೆ ಪ್ರತಿಮಾ ಹಾಗೂ ಮುಖ್ಯ ಶಿಕ್ಷಕಿ ರವಿವಾರ ಶಾಲೆಯಲ್ಲೇ ಇದ್ದು ಆಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್