CONNECT WITH US  

ಉಡುಪಿ ಕೃಷ್ಣನ ದರ್ಶನ ಪಡೆದ ಸಿ.ಎಂ.ಕುಮಾರಸ್ವಾಮಿ

ಉಡುಪಿ: ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ಉಡುಪಿ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಇದೇ ವೇಳೇ ಮಠದಲ್ಲಿ ಪರ್ಯಾಯ ಮಠಾಧೀಶ ಪಲಿಮಾರು ವಿದ್ಯಾಧೀಶ ತೀರ್ಥ ಸ್ವಾಮಿಗಳ ಆಶೀರ್ವಾದ ಪಡೆದರು. 

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರಾವಳಿಗೆ ಭೇಟಿ ನೀಡುತ್ತಿರುವ ಕುಮಾರಸ್ವಾಮಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ನಂತರ ಉಡುಪಿಗೆ ಪ್ರಯಾಣ ಬೆಳೆಸಿದ್ದರು. 

ಮಠದ ಭೇಟಿಯ ನಂತರ ಕುಮಾರಸ್ವಾಮಿ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಡಾ.ಜಯಮಾಲ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ,  ಜಿಲ್ಲಾಧಿಕಾರಿ ಪ್ರಿಯಾಂಕ  ಮೇರಿ ಫ್ರಾನ್ಸಿಸ್,  ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಧಾನ ಸಭಾ ಸದಸ್ಯರು,  ವಿಧಾನ ಪರಿಷತ್ ಸದಸ್ಯರು,  ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು


Trending videos

Back to Top