ಭಾವೈಕ್ಯ, ನಾಡಪ್ರೇಮ: ಪ್ರಿಯಾಂಕಾ ಕರೆ


Team Udayavani, Nov 2, 2018, 10:07 AM IST

priyanka.jpg

ಉಡುಪಿ: ಉಡುಪಿಯು ಕರ್ನಾಟಕದ ಮಹತ್ವದ ಸಾಂಸ್ಕೃತಿಕ ಕೇಂದ್ರ. “ಜೈ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ಕವಿವಾಣಿಯಂತೆ ಪ್ರತೀ ಪ್ರಜೆಯೂ ಭಾವೈಕ್ಯ, ನಾಡ ಪ್ರೇಮ, ದೇಶಪ್ರೇಮ ಹೊಂದಿ ನಾಡಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಕರೆ ನೀಡಿದರು.
ಬೀಡಿನಗುಡ್ಡೆ ಮೈದಾನದಲ್ಲಿ ಗುರುವಾರ ನಡೆದ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿ ಸಂದೇಶ ನೀಡಿದ ಅವರು, ಉಡುಪಿಯ ಸಾಂಸ್ಕೃತಿಕ ಮಹತ್ವ ವಿವರಿಸಿದರು.

ಕನ್ನಡ ಕೇವಲ ನುಡಿಯಲ್ಲ, ಅದು ಜೀವನದರ್ಥ ಎಂಬಂತೆ ಇಲ್ಲಿನ ಭಾಷೆ, ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿಗಳೆಲ್ಲವೂ ಕನ್ನಡಮಯ. ಇಲ್ಲಿ ಆಳಿದ ರಾಜ ಮನೆತನಗಳು, ಕನ್ನಡ ನಾಡಿನ ಶಿಲ್ಪ, ಸಂಗೀತ, ನೃತ್ಯ, ನಾಟಕ, ಸಾಹಿತ್ಯ ಪರಂಪರೆಗಳನ್ನು ಪೋಷಿಸಿವೆ. ಪ್ರಜಾ ಸರಕಾರಗಳೂ ಈ ಪೋಷಣೆಯನ್ನು ಸಾಮಾಜಿಕ ಜವಾ ಬ್ದಾರಿ ಯಾಗಿ ನಿರ್ವಹಿಸುತ್ತ ಬಂದಿವೆ ಎಂದರು.

ಜಿಲ್ಲೆಯಲ್ಲಿ ಕನ್ನಡ, ತುಳು, ಕೊಂಕಣಿ ಮತ್ತಿತರ ಹಲವು ಭಾಷೆಗಳಿವೆ. ಎಲ್ಲ ಜಾತಿ, ಧರ್ಮದವರು ಸಹಬಾಳ್ವೆ ನಡೆಸುತ್ತಿದ್ದಾರೆ. ಕುಂದಾಪುರದ ಕನ್ನಡ ಜಿಲ್ಲೆಯ ವೈಶಿಷ್ಟ. ಕನಕದಾಸರಿಗೆ ಉಡುಪಿಯಲ್ಲಿ ಆಶ್ರಯ ನೀಡಿದ ಶ್ರೀ ವಾದಿರಾಜ ಸ್ವಾಮಿಗಳು ಹರಿದಾಸ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ಕವಿ ಮುದ್ದಣನ ಹೆಸರಿನಲ್ಲಿ ಮುದ್ದಣ ಮಾರ್ಗವಿದೆ. ಜಿಲ್ಲೆಯ ಶಿವರಾಮ ಕಾರಂತ, ಅನಂತಮೂರ್ತಿ ಜ್ಞಾನಪೀಠ ಪುರಸ್ಕೃತರು. ಕವಿ ಗೋಪಾಲಕೃಷ್ಣ ಅಡಿಗರು, ಕಂಪ್ಯೂಟರ್‌ನಲ್ಲಿ ಕನ್ನಡ ಲಿಪಿ ಅಳವಡಿಸಿದ ಕೆ.ಪಿ. ರಾವ್‌ ಜಿಲ್ಲೆಯವರೆಂಬುದು ನಮಗೆ ಹೆಮ್ಮೆ. ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಹೊರರಾಜ್ಯ ಮತ್ತು ವಿದೇಶಗಳ ವಿದ್ಯಾರ್ಥಿಗಳು ಬರುತ್ತಿರುವುದು ಸಂತೋಷದ ವಿಷಯ ಎಂದು ಉಲ್ಲೇಖೀಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿ.ಪಂ. ಸಿಇಒ ಶಿವಾನಂದ ಕಾಪಶಿ, ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ, ಜಿಲ್ಲಾ ಕ. ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪಸ್ಥಿತರಿದ್ದರು. 

ಸರಳ ರಾಜ್ಯೋತ್ಸವ
ಚುನಾವಣ ನೀತಿ ಸಂಹಿತೆಯ ಕಾರಣ ಜನಪ್ರತಿನಿಧಿಗಳಾರೂ ವೇದಿಕೆ ಏರಲಿಲ್ಲ. ಶಾಸಕರ ಸಹಿತ ಪ್ರಮುಖ ಜನ ಪ್ರತಿನಿಧಿಗಳು ಮರಳು ಹೋರಾಟದಲ್ಲಿ ಪಾಲ್ಗೊಂಡಿರುವುದೂ ಜನ ಪ್ರತಿನಿಧಿಗಳ ಗೈರಿಗೆ ಇನ್ನೊಂದು ಕಾರಣ. ಮರಳು ಹೋರಾಟಗಾರರು ಧರಣಿ ಸ್ಥಳದಲ್ಲಿಯೇ ರಾಜ್ಯೋತ್ಸವ ಆಚರಿಸಿದರು. ಜಿಲ್ಲಾಧಿಕಾರಿ ಹೊಸ ಘೋಷಣೆಗಳಿಲ್ಲದ ರಾಜ್ಯೋತ್ಸವ ಸಂದೇಶ ನೀಡಿದರು.

ಜಿಲ್ಲಾಧಿಕಾರಿಗೆ ಅವಕಾಶ
ನೀತಿ ಸಂಹಿತೆ ಇರುವ ಕಾರಣ ಉಸ್ತುವಾರಿ ಸಚಿವರು ಇದ್ದರೂ ಈ ಬಾರಿ ಜಿಲ್ಲಾಧಿಕಾರಿ ಧ್ವಜಾರೋಹಣ ಮಾಡಿದರು. ಈ ಹಿಂದೆ ಹೇಮಲತಾ ಡಿಸಿ ಅಗಿದ್ದಾಗ ಧ್ವಜಾರೋಹಣ ಮಾಡಿದ್ದರು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.