ತಿಂಗಳು ಆರು ಕಳೆದರೂ ಕರಾಟೆ ತರಬೇತಿ ಭಾಗ್ಯವಿಲ್ಲ!

Team Udayavani, Nov 17, 2018, 2:50 AM IST

karate-16-11.jpg

ವಿಶೇಷ ವರದಿ : ಬೆಳ್ಮಣ್‌: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆಯ ಕಲೆ ಕಲಿಸಿಕೊಡುವ ಉದ್ದೇಶದಿಂದ ಜಾರಿಗೊಳಿಸಿದ್ದ ಸ್ವರಕ್ಷಣಾ ಕೌಶಲ ತರಬೇತಿ ಯೋಜನೆ ಅನುದಾನ ಬಿಡುಗಡೆಯಾಗದ್ದರಿಂದ ಈ ವರ್ಷ ಇನ್ನೂ ಆರಂಭಗೊಂಡಿಲ್ಲ. ಈಗಾಗಲೇ ಆರಂಭಗೊಂಡು ಮುಗಿಯಬೇಕಿದ್ದ ಕರಾಟೆ ತರಬೇತಿ ಅರ್ಧವಾರ್ಷಿಕ ರಜೆ ಮುಗಿದ ಬಳಿಕವೂ ಆರಂಭವಾಗಿಲ್ಲ. ಸರಕಾರ 2014ರಲ್ಲಿ ಈ ಯೋಜನೆಯನ್ನು ಆರಂಭಿಸಿತ್ತು.

ವರ್ಷದಲ್ಲಿ 3 ತಿಂಗಳ ಕಾಲ ಕರಾಟೆ ತರಬೇತಿ
ರಾಜ್ಯದ ಒಟ್ಟು 4,643 ಸರಕಾರಿ ಪ್ರೌಢಶಾಲೆಗಳು, ಆದರ್ಶ ವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳ, ಸಮಾಜ ಕಲ್ಯಾಣ ಇಲಾಖೆಯ ಪ್ರೌಢಶಾಲೆಗಳಲ್ಲಿ ಕರಾಟೆ ತರಬೇತಿಯನ್ನು ಪ್ರತೀ ವರ್ಷ 3 ತಿಂಗಳ ಕಾಲ ನಡೆಸಲಾಗುತ್ತಿತ್ತು. ಆದರೆ ಪ್ರಸ್ತುತ ಸಾಲಿನಲ್ಲಿ ಆರಂಭವಾಗದೆ ಇರುವ ಬಗ್ಗೆ ಕರಾಟೆ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಕಳವಳ ವ್ಯಕ್ತಪಡಿಸಿದ್ದಾರೆ.

ಗೌರವಧನವೂ ಘೋಷಣೆಯಾಗಿತ್ತು
ತರಬೇತುದಾರರಿಗೆ 3 ತಿಂಗಳ ಅವಧಿಗೆ ಎಲ್ಲ ವೆಚ್ಚಗಳು ಸೇರಿ ಗೌರವಧನ ನೀಡುವುದಕ್ಕಾಗಿ ಪ್ರತೀ ಶಾಲೆಗೆ 9 ಸಾವಿರ ರೂ. ನೀಡಲಾಗುತ್ತಿತ್ತು. ಶಾಲೆಯ ಮುಖ್ಯ ಶಿಕ್ಷಕರೇ ಹಾಜರಾತಿ ಹಾಗೂ ತರಬೇತಿ ನೀಡಿದ ವರದಿ ಪರಿಶೀಲಿಸಿ ಪ್ರತೀ ಅವಧಿಗೆ 350 ರೂ.ಗಳಂತೆ 24 ತರಗತಿಗಳಿಗೆೆ ಸುಮಾರು 8,400 ರೂ. ಪಾವತಿಸಲು ಕ್ರಮಕೈಗೊಳ್ಳಲಾಗಿತ್ತು. ಕಳೆದ ಸಾಲಿನಲ್ಲಿ ಸರಕಾರ‌ ಅನುದಾನ ಬಿಡುಗಡೆಗೊಳಿಸಿದ್ದು, ಶಿಕ್ಷಣ ಇಲಾಖೆ ಕರಾಟೆ ತರಬೇತಿ ಹಮ್ಮಿಕೊಂಡಿತ್ತು.

ಗ್ರಾಮೀಣ ಭಾಗಕ್ಕೆ ಅಗತ್ಯ
ಕರಾಟೆ ತರಬೇತಿ ಗ್ರಾಮೀಣ ಭಾಗದಲ್ಲಿ ಅತ್ಯಂತ ಹೆಚ್ಚು ಪ್ರಯೋಜನಕಾರಿ. ವಿದ್ಯಾರ್ಥಿನಿಯರು ಕಾಡು ದಾರಿಯಲ್ಲಿ ಶಾಲೆಗೆ ಬರುವ ಸಂದರ್ಭ ಸ್ವರಕ್ಷಣೆಗೆ ಇದು ಅನಿವಾರ್ಯ. ಅದರಲ್ಲೂ ಉಡುಪಿ ಜಿಲ್ಲೆಯ ಹೆಬ್ರಿ, ಶಿರ್ಲಾಲು, ಅಂಡಾರು, ಹೊಸ್ಮಾರು ಸಹಿತ ಅನೇಕ ಪ್ರದೇಶಗಳು ನಕ್ಸಲ್‌ ಬಾಧಿತವಾಗಿದ್ದು, ಈ ಭಾಗದ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ವರದಾನವಾಗಿತ್ತು.

ತರಬೇತಿಯ ರೂಪುರೇಷೆ
ರಾಜ್ಯದ ಎಲ್ಲ ಸರಕಾರಿ ಪ್ರೌಢಶಾಲೆಗಳ 9ನೇ ತರಗತಿ ವಿದ್ಯಾರ್ಥಿನಿಯರಿಗೆ ವಾರಕ್ಕೆ 2ರಂತೆ ತಿಂಗಳಿಗೆ 8 ಅವಧಿಗಳ ಕರಾಟೆ ತರಬೇತಿ ನೀಡಲಾಗುತ್ತಿತ್ತು. ಒಟ್ಟು 3 ತಿಂಗಳಿಗೆ 24 ಅವಧಿಯ ಕಾರ್ಯಕ್ರಮ ಇದು. 45 ನಿಮಿಷಗಳ ಪ್ರತೀ ತರಗತಿಯಲ್ಲಿ ಕರಾಟೆ, ಜುಡೋ ಇತ್ಯಾದಿ ಆತ್ಮರಕ್ಷಣ ಕೌಶಲ ಹೇಳಿಕೊಡಲಾಗುತ್ತಿತ್ತು. ಮುಖ್ಯೋಪಾಧ್ಯಾಯರ ನೇತೃತ್ವದ ಸಮಿತಿ ಸೂಕ್ತ ತರಬೇತುದಾರರನ್ನು ಗುರುತಿಸಿ ನೇಮಿಸುತ್ತಿತ್ತು.

ಅನುದಾನದ ಖಚಿತತೆ ಇಲ್ಲ 
ಕರಾಟೆ ಕಲಿಸಲು ಈ ವರ್ಷ ಇಲಾಖೆಯಿಂದ ಅನುದಾನ ಬಂದಿಲ್ಲ. ಈ ಹಿಂದೆ ಆರ್‌ಎಂಎಸ್‌ನಿಂದ ಅನುದಾನ ಬಂದಿತ್ತು. ಮುಂದೆ ಬರುವುದಾಗಿ ತಿಳಿಸಿದ್ದರೂ ಖಚಿತತೆ ಇಲ್ಲ. ಅನುದಾನ ಬಂದರೆ ಮಾತ್ರ ಕರಾಟೆ ತರಗತಿ ಮುಂದುವರಿಯಲಿದೆ.
-ಶೇಷಶಯನ ಕಾರಿಂಜ, ಡಿಡಿಪಿಐ, ಉಡುಪಿ

ಸರಕಾರದ ಸ್ಪಂದನೆ ಅಗತ್ಯ 
ಕರಾಟೆ ತರಬೇತಿ ಈಗಾಗಲೇ ಆರಂಭವಾಗಬೇಕಿತ್ತು. ಆದರೆ ಅನುದಾನ ಮಂಜೂರಾಗದ ಕಾರಣ ವಿಳಂಬವಾಗುತ್ತಿದೆ. ಈ ಬಗ್ಗೆ ಕೂಡಲೇ ಜನಪ್ರತಿನಿಧಿಗಳು, ಸರಕಾರ ಗಮನಹರಿಸಬೇಕಾಗಿದೆ.
– ಸತೀಶ್‌ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜ್ಯ ಕರಾಟೆ ಶಿಕ್ಷಕರ ಸಂಘ

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.