108 ವಾಹನದಲ್ಲಿಯೇ ಹೆರಿಗೆ
Team Udayavani, Dec 14, 2018, 1:10 AM IST
ಉಡುಪಿ: ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆ ಆರೋಗ್ಯ ರಕ್ಷಾ ಕವಚ (108) ವಾಹನದಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಉಡುಪಿಯಲ್ಲಿ ಗುರುವಾರ ನಡೆಯಿತು. ಮಣಿಪಾಲ ಸಮೀಪ ಈಶ್ವರನಗರದ ಆಶಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಹೋಗುವುದಕ್ಕೆಂದು 108 ಆ್ಯಂಬುಲೆನ್ಸ್ಗೆ ಕರೆ ಮಾಡಿದ್ದರು. ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಹೋಗುವ ಹಾದಿಯಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಹೆರಿಗೆ ನೋವು ಹೆಚ್ಚಾಯಿತು. ಈ ಸಂದರ್ಭ ವಾಹನದಲ್ಲಿದ್ದ ತುರ್ತು ವೈದ್ಯಕೀಯ ತಜ್ಞ (ಇಎಂಟಿ) ಕಾಶೀನಾಥ ಪೂಜಾರ ಅವರು ವಾಹನದ ಚಾಲಕ ಬಸವರಾಜ ಮೇಟಿ ಅವರ ಸಹಾಯದಿಂದ ಹೆರಿಗೆ ಮಾಡಿಸಿದರು. ಆಶಾ ಅವರು ಗಂಡು ಮಗುವಿಗೆ ಜನ್ಮವಿತ್ತಿದ್ದು ತಾಯಿ ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ ಎಂದು ಕಾಶೀನಾಥ ಪೂಜಾರ ತಿಳಿಸಿದ್ದಾರೆ. ಈ ಸಂದರ್ಭ ಆಶಾ ಅವರ ಸಂಬಂಧಿ ಕೂಡ ವಾಹನದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ