ಎಳ್ಳಾರೆ: ಸಾರ್ವಜನಿಕ ಸಾರಿಗೆ ಸಂಪರ್ಕವೇ ಇಲ್ಲದ ಗ್ರಾಮ

Team Udayavani, Feb 23, 2019, 12:30 AM IST

2002ajke01.jpg

ಅಜೆಕಾರು: ಕಡ್ತಲ ಪಂಚಾಯತ್‌ ವ್ಯಾಪ್ತಿಯ ಎಳ್ಳಾರೆ ಗ್ರಾಮಕ್ಕೆ ಬಸ್ಸು ಸಂಚಾರ ಇಲ್ಲದೆ ಗ್ರಾಮಸ್ಥರು ಬವಣೆ ಪಡುವಂತಾಗಿದೆ. ಈ ಗ್ರಾಮವು ಹಲವು ಗ್ರಾಮಗಳನ್ನು ಸಂಪರ್ಕಿಸುವ ಕೇಂದ್ರಬಿಂದುವಾಗಿದ್ದರೂ ಈವರೆಗೆ ಗ್ರಾಮಕ್ಕೆ ಬಸ್‌ ಸಂಚಾರ ವ್ಯವಸ್ಥೆಯಾಗಿಲ್ಲ. 2500ರಷ್ಟು ಜನಸಂಖ್ಯೆ ಹೊಂದಿರುವ ಎಳ್ಳಾರೆಗೆ ಸಾರಿಗೆ ಸಂಪರ್ಕವಿಲ್ಲದ್ದರಿಂದ ಸ್ಥಳೀಯರು ನಿತ್ಯ ಪರ ದಾಡುತ್ತಿದ್ದಾರೆ.

ಸುತ್ತು ಬಳಸಿ ಸಂಚಾರ 
ಎಳ್ಳಾರೆಯಿಂದ ಮುನಿಯಾಲು, ಕಡ್ತಲ, ಕುಕ್ಕುಜೆ, ಪೆರ್ಡೂರು, ಶಿವಪುರ, ಪಡುಕುಡೂರು ಗ್ರಾಮಗಳನ್ನು ಸಂಪರ್ಕಿ ಸಲು ರಸ್ತೆ, ಸೇತುವೆ ನಿರ್ಮಾಣ ವಾಗಿದ್ದರೂ ಬಸ್‌ ವ್ಯವಸ್ಥೆ ಇಲ್ಲದೆ ಈ ಎಲ್ಲ ಗ್ರಾಮಗಳಿಗೆ ಸುತ್ತುಬಳಸಿ ನಾಗರಿಕರು ಸಂಚರಿಸುವಂತಾಗಿದೆ.

ಮುನಿಯಾಲಿಗೆ 6 ಕಿ.ಮೀ., ಕಡ್ತಲಕ್ಕೆ 5 ಕಿ.ಮೀ., ದೊಂಡೇ ರಂಗಡಿಗೆ 3 ಕಿ.ಮೀ., ಪೆರ್ಡೂರಿಗೆ 12 ಕಿ.ಮೀ. ಯಷ್ಟು ದೂರವಿದ್ದು ಈ ಗ್ರಾಮಗಳಿಗೆ ಎಳ್ಳಾರೆ ಗ್ರಾಮಸ್ಥರು ಖಾಸಗಿ ವಾಹನ ಅಥವಾ ನಡೆದು ಕೊಂಡೇ ಹೋಗಬೇಕಿದೆ.  

ಎಳ್ಳಾರೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ, ಪ್ರಾಚೀನ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನವಿದ್ದು ಇಲ್ಲಿಗೆ ಪ್ರತಿನಿತ್ಯ ನೂರಾರು ಜನರು ಭೇಟಿ ನೀಡುತ್ತಾರೆ. ಇವರು ಬಸ್‌ ಸಂಪರ್ಕವಿಲ್ಲದೆ ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ.

200ಕ್ಕೂ ಅಧಿಕ ವಿದ್ಯಾರ್ಥಿಗಳು
ಎಳ್ಳಾರೆಯಲ್ಲಿ ಪ್ರಾಥಮಿಕ ಶಿಕ್ಷಣದ ವ್ಯವಸ್ಥೆ ಮಾತ್ರ ಇದ್ದು ಪ್ರೌಢ ಶಿಕ್ಷಣ, ಪದವಿಪೂರ್ವ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣಕ್ಕೆ ದೂರದ ಊರುಗಳಾದ ಮುನಿಯಾಲು, ದೊಂಡೇರಂಗಡಿ, ಪೆರ್ಡೂರಿಗೆ ತೆರಳಬೇಕಾಗಿದ್ದು ಗ್ರಾಮದಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು ಬಸ್‌ ವ್ಯವಸ್ಥೆ ಇಲ್ಲದೆ ನಡೆದುಕೊಂಡೇ ಹೋಗಬೇಕು.
  
ಎಳ್ಳಾರೆ ಗ್ರಾಮದ ಮೂಲಕ ದಶಕಗಳ ಹಿಂದೆ ಖಾಸಗಿ ಬಸ್ಸೊಂದು ಓಡಾಟ ನಡೆಸುತ್ತಿತ್ತು. ಪ್ರತಿದಿನ ಬೆಳಗ್ಗೆ 8.00 ಗಂಟೆಗೆ ಹಾಗೂ ಮಧ್ಯಾಹ್ನ 12.30ಕ್ಕೆ ಸಂಚರಿಸುತ್ತಿತ್ತು. ಆದರೆ ಅನಂತರದ ದಿನಗಳಲ್ಲಿ ಖಾಸಗಿ ಬಸ್‌ ಮಾಲಕರು ಸಂಚಾರ ಸ್ಥಗಿತ ಗೊಳಿಸಿದ್ದಾರೆ. ಹಾಗಾಗಿ ಈ ಗ್ರಾಮಕ್ಕೆ ಶಾಶ್ವತವಾಗಿ ಬಸ್‌ ಸೌಕರ್ಯ ಬೇಕಾಗಿರುವುದರಿಂದ ಸರಕಾರಿ ಬಸ್‌ ಓಡಾಟ ನಡೆಸಬೇಕು ಎಂಬುದು ಸ್ಥಳೀಯರ ಆಶಯ.

ಹಲವು ಬಾರಿ ಮನವಿ
ಉಡುಪಿ, ಕೊಳಲಗಿರಿ, ಪೆರ್ಡೂರು, ಕುಂಟಲ್‌ಕಟ್ಟೆ, ಎಳ್ಳಾರೆ ಮಾರ್ಗವಾಗಿ ಪಡುಕುಡೂರು, ಮುನಿಯಾಲು, ಮುಟ್ಲುಪಾಡಿ ಸಂಪರ್ಕ ಕಲ್ಪಿಸುವಂತೆ ರಾಜ್ಯ ಸರಕಾರಿ ಸಾರಿಗೆ ಬಸ್‌ ಒದಗಿಸುವಂತೆ ಸಾರಿಗೆ ನಿಗಮಕ್ಕೆ ಈಗಾಗಲೇ ಹಲವು ಬಾರಿ ಮನವಿ ಮಾಡಿದ್ದೇನೆ. ಜಿ.ಪಂ. ಸಭೆಯಲ್ಲಿಯೂ ಪ್ರಸ್ತಾವನೆ ಮಾಡಲಾಗಿದೆ. ಬಸ್‌ ಸಂಪರ್ಕದ ವ್ಯವಸ್ಥೆ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿರುವ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
– ಜ್ಯೋತಿ ಹರೀಶ್‌, ಜಿ.ಪಂ. ಸದಸ್ಯರು

ಸಂಚಾರಕ್ಕೆ ಸಂಕಷ್ಟ
ಗ್ರಾಮಕ್ಕೆ ಬಸ್‌ ಸೌಕರ್ಯ ಇಲ್ಲದೆ ಸ್ಥಳೀಯ ಗ್ರಾಮಸ್ಥರಿಗೆ ಹಾಗೂ ಸುತ್ತಲ ಗ್ರಾಮಸ್ಥರಿಗೆ ಸಂಚಾರಕ್ಕೆ ಸಂಕಷ್ಟಪಡುವಂತಾಗಿದೆ. ಈಗಾಗಲೇ ಹಲವು ಬಾರಿ ಪ್ರಾದೇಶಿಕ ಸಾರಿಗೆ ಇಲಾಖೆಗೆ ಮನವಿ ಮಾಡಿದರೂ ನಿಷ್ಪ್ರಯೋಜಕವಾಗಿದೆ.
– ಸತೀಶ್‌ ಪೂಜಾರಿ, ಗ್ರಾ.ಪಂ. ಸದಸ್ಯರು

– ಜಗದೀಶ್‌ ರಾವ್‌ ಅಂಡಾರು

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.