ರಿಕ್ಷಾಕ್ಕೆ ಕಾರು ಢಿಕ್ಕಿ; 6 ಮಕ್ಕಳಿಗೆ ಗಾಯ
Team Udayavani, Mar 16, 2019, 12:30 AM IST
ಉಡುಪಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ 6 ಮಕ್ಕಳು ಗಾಯಗೊಂಡ ಘಟನೆ ಸಂತೆಕಟ್ಟೆ ಬಳಿಯ ರಾ. ಹೆದ್ದಾರಿ 66ರ ಸರ್ವೀಸ್ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ. ಸಂತೆಕಟ್ಟೆ ಜಂಕ್ಷನ್ ಕಡೆಯಿಂದ ಉಡುಪಿಗೆ ಸಾಗುತ್ತಿದ್ದ ಕಾರು ಮುಂದಿನ ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತು.
ರಿಕ್ಷಾದಲ್ಲಿದ್ದ ಸೈಂಟ್ ಜೋಸೆಫ್ ಮತ್ತು ಸೈಂಟ್ ರೊಜಾರಿಯೋ ಶಾಲೆಯ ವಿದ್ಯಾರ್ಥಿಗಳಾದ ಪವಿತ್ರಾ, ಶ್ರೇಯಾ, ಪ್ರಜ್ಞಾ, ಶ್ರಾವ್ಯಾ, ರಕ್ಷಣ್, ಪ್ರೇಕ್ಷಣ್ ಹಾಗೂ ರಿಕ್ಷಾ ಚಾಲಕ ದಿವಾಕರ್ ಪಾಲನ್ ಗಾಯಗೊಂಡರು. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಚಾಲಕ ಜಾರ್ಜ್ ಡಿ’ಸೋಜಾ ವಿರುದ್ಧ ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಭೇಟಿ
ಅಪಘಾತದ ಬಗ್ಗೆ ಮಾಹಿತಿ ಪಡೆದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಗಾಯಾಳು ವಿದ್ಯಾರ್ಥಿಗಳು ದಾಖಲಾಗಿರುವ ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ