ಯಲ್ಲಾಪುರ : ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರ ಬಲಿ
Team Udayavani, Jun 26, 2018, 10:37 AM IST
ಯಲ್ಲಾಪುರ: ತಾಲೂಕಿನ ಚಿಕ್ಕಮಾವಳ್ಳಿ ಬಳಿ ಮಂಗಳವಾರ ಬೆಳಗ್ಗೆ ಕಾರೊಂದಕ್ಕೆ ಲಾರಿ ಢಿಕ್ಕಿಯಾಗಿ 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಭೀಕರ ಅವಘಡ ಸಂಭವಿಸಿದೆ.
ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಮುಖಾಮುಖಿ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮೃತ ದುರ್ದೈವಿಗಳು 40 ವರ್ಷ ಪ್ರಾಯದ ವಿನಾಯಕ ಹೆಗಡೆ, ಅರ್ಚನಾ ಹೆಗಡೆ (35) ಮತ್ತು 3 ವರ್ಷದ ಮಗು ಶ್ರಾವಣಿ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಇನ್ನೊಂದು ಮಗು ಯಶಸ್ವಿನಿಗೆ ಗಾಯವಾಗಿದ್ದು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್