ಬಿಜೆಪಿಯಿಂದ ಮುಸ್ಲಿಂ ಮಹಿಳಾ ಅಭ್ಯರ್ಥಿ ಶಗುಪ್ತ ಕಣಕ್ಕೆ 


Team Udayavani, Aug 29, 2018, 3:46 PM IST

29-agust-19.jpg

ಕಾರವಾರ: ಭಯೋತ್ಪಾದನೆ ವಿರುದ್ಧ ವಿರೋಧಿ ಹೇಳಿಕೆಗಳನ್ನು ಆಗಾಗ ನೀಡುತ್ತಾ, ಮುಸ್ಲಿಂ ಮತಗಳು ನನಗೆ ಬೇಕಿಲ್ಲ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಸಂಸದ ಹಾಗೂ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಈಗ ಮುಸ್ಲಿಂ ಸಮುದಾಯದ ಮಹಿಳೆ ಪರ ನಿಂತಿರುವುದು ಈಚಿನ ಅವರ ಕಾರವಾರ ಭೇಟಿಯಲ್ಲಿ ಸ್ಪಷ್ಟವಾಗಿದೆ. ಅನಂತಕುಮಾರ್‌ ಹೆಗಡೆ ಮೃದು ಹಿಂದುತ್ವದ ಮೊರೆ ಹೋದರೆ ಎಂಬ ಅನುಮಾನ ಅವರ ಕಟ್ಟಾ ಬೆಂಬಲಿಗರನ್ನು ಕಾಡುತ್ತಿದೆ.

ಕಾರವಾರ ನಗರಸಭೆ ಚುನಾವಣೆಯಲ್ಲಿ ವಾರ್ಡ್‌ ನಂ.15 ರಲ್ಲಿ ಬಿಜೆಪಿ ಶಗುಪ್ತಾ ಸಿದ್ದಿಕಿ ಅವರನ್ನು ಕಣಕ್ಕಿಳಿಸಿದೆ. ಕಾರವಾರ ನಗರಸಭೆ ಚುನಾವಣೆಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಮುಸ್ಲಿಂ ಮಹಿಳೆಯನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಇದು ಹಲವರ ಹುಬ್ಬೇರುವಂತೆ ಮಾಡಿದೆ.

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಅಲ್ಪಸಂಂಖ್ಯಾತ ಸಮುದಾಯವೊಂದರ ವಿರುದ್ಧ ಉಗ್ರ ಭಾಷಣದ ಮೂಲಕ ಪ್ರಹಾರ ನಡೆಸಿದ್ದ ಕೇಂದ್ರ ಸಚಿವ ಹಿಂದೂ ಮತಬ್ಯಾಂಕ್‌ ಒಂದೆಡೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು. ಜಿಲ್ಲೆಯಲ್ಲಿ 4 ಬಿಜೆಪಿ ಶಾಸಕರು ಆಯ್ಕೆಯಾಗಲೂ ಸಹ ಕಾರಣರಾಗಿದ್ದರು. ಈ ಹಿಂದಿನ ಎರಡು ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಮುಸ್ಲಿಂರ ಮತದ ಅವಶ್ಯಕತೆ ನಮಗಿಲ್ಲ. ಮುಸ್ಲಿಂರು ತನಗೆ ಮತ ನೀಡುವುದು ಸಹ ಬೇಡ ಎಂದು ಬಹಿರಂಗವಾಗಿ ಹೇಳಿದ್ದರು. ಇದರಿಂದ ಜಿಲ್ಲೆಯ ಸುಮಾರು ಎರಡೂವರೆ ಲಕ್ಷದಷ್ಟು ಮುಸ್ಲಿಂ ಸಮುದಾಯದ ಮತಗಳು ಹೆಗಡೆ ವಿರುದ್ಧ ಚಲಾವಣೆಯಾಗುತ್ತವೆ ಎಂದು ಲೆಕ್ಕಾಚಾರ ಹಾಕಲಾಗಿತ್ತು. ಅವರ ಹೇಳಿಕೆಯಿಂದ ಹಿಂದೂ ಮತಗಳು ಧ್ರುವೀಕರಣವಾಗಿ ಒಟ್ಟಾಗಿ ಅತೀ ಹೆಚ್ಚಿನ ಅಂತರದಿಂದ ಅವರು ಗೆಲ್ಲಲು ಸಹಾಯವಾಗಿತ್ತು ಎಂಬುದು ರಾಜಕೀಯ ಲೆಕ್ಕಾಚಾರವಾಗಿತ್ತು. ಆದರೆ ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅನಂತಕುಮಾರ ಹೆಗಡೆ ತನ್ನ ಈ ಕಟ್ಟಾ ಹಿಂದುತ್ವದ ಧೋರಣೆ ಕೈ ಬಿಟ್ಟರೇ?.

ಬಿಜೆಪಿ ಅಭ್ಯರ್ಥಿ ಹೇಳುವುದು ಹೀಗೆ: ಕಳೆದ ಅನೇಕ ವರ್ಷಗಳಿಂದ ಪತಿ ಜೊತೆ ಗಲ್ಫ್ ನಲ್ಲಿದ್ದೆ. ತಾನು ಆಗಿನಿಂದಲೇ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿದ್ದೆ. ಬಿಜೆಪಿ ಮುಸ್ಲಿಂ ವಿರೋಧಿ  ಎಂಬುದು ಶುದ್ಧ ಸುಳ್ಳು. ವಾರ್ಡ್‌ ನಂ. 15ರಿಂದ ಟಿಕೆಟ್‌ ಬಯಸಿ ತಾನು ಬಿಜೆಪಿಯನ್ನು ಸಂಪರ್ಕಿಸಿದೆ. 15ನೇ ವಾರ್ಡ್‌ನಲ್ಲಿ ನಾಲ್ಕೈದು ಟಿಕೆಟ್‌ ಆಕಾಂಕ್ಷಿಗಳಿದ್ದರೂ ಸಹ, ಪಕ್ಷ ತನ್ನನ್ನು ಗುರುತಿಸಿ ಟಿಕೇಟ್‌ ನೀಡಿದೆ. ನನ್ನ ವಾರ್ಡ್‌ನಲ್ಲಿ ಮುಸ್ಲಿಂ ಸಮುದಾಯದ ಮತದಾರರು ಹೆಚ್ಚಿದ್ದು ಕಣದಲ್ಲಿ ನಾಲ್ಕು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ. ಆದರೂ ಮುಸ್ಲಿಂ ಸಮುದಾಯದವರು ನನ್ನ ಬೆಂಬಲಿಸಲಿದ್ದಾರೆ ಹಾಗೂ ಮುಸ್ಲಿಂ ಮಹಿಳೆಯರು ಬಹಿರಂಗವಾಗಿ ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಅನುಮಾನ: ಬಿಜೆಪಿಯು ಮುಸ್ಲಿಂ ಮಹಿಳೆಯನ್ನು ಕಣಕ್ಕಿಳಿಸಿರುವುದರ ಬಗ್ಗೆ ಇತರೆ ಪಕ್ಷ ಹಾಗೂ ಪಕ್ಷೇತರ ಮುಸ್ಲಿಂ ಅಭ್ಯರ್ಥಿಗಳು ಬಿಜೆಪಿಯ ನಡೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಸ್ಲಿಂ ಸಮುದಾಯವನ್ನು ಮಹಿಳೆ, ಪುರುಷರೆಂದು ವಿಭಜಿಸುತ್ತಿದೆ. ತ್ರಿವಳಿ ತಲಾಖ್‌ ನಿಷೇಧ ಇತ್ಯಾದಿ ಮೂಲಕ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಪ್ರಚಾರ ಮಾಡಲಾಗುತ್ತಿದೆ. ಆದರೆ ಇಂಥ ಸುಳ್ಳಿನ ಆಟ ಬಹಳ ದಿನ ನಡೆಯದು ಎಂದು ಅಭ್ಯರ್ಥಿ ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.