ಮಹಾತ್ಮ ಗಾಂಧೀಜಿ ತತ್ವಾದರ್ಶ ಜಗತ್ತಿಗೆ ಮಾದರಿ


Team Udayavani, Oct 4, 2018, 5:08 PM IST

4-october-20.gif

ಕಾರವಾರ: ಮಹಾತ್ಮಾ ಗಾಂಧೀಜಿಯವರ ಬದ್ಧತೆ, ಆದರ್ಶ ಹಾಗೂ ತತ್ವಗಳು ಜಗತ್ತಿಗೆ ಮಾದರಿಯಾಗಿವೆ. ಅವರ ಹೆಜ್ಜೆಗುರುತುಗಳ ಮಾಹಿತಿಯನ್ನು ರಾಜ್ಯದಲ್ಲಿ ಯುವ ಪೀಳಿಗೆಗೆ ತಲುಪಿಸಲು ಸಮಗ್ರ ಮಾಹಿತಿ ಸಂಗ್ರಹಿಸಿ ವ್ಯಾಪಕ ಪ್ರಚಾರ ಮಾಡುವ ಕಾರ್ಯವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಡುತ್ತಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಹೇಳಿದರು.

ನಗರದ ರವೀಂದ್ರನಾಥ ಠಾಗೋರ ಕಡಲತೀರದ ಮಕ್ಕಳ ಉದ್ಯಾವನದಲ್ಲಿ ಬುಧವಾರ ಗಾಂಧೀಜಿರವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಗಾಂಧೀಜಿಗೆ ನಮನ ಕಾರ್ಯಕ್ರಮದಲ್ಲಿ ಗಾಂಧಿ ವಿಚಾರಧಾರೆ ಕುರಿತು ಅವರು ಮಾತನಾಡಿದರು. 

ಗಾಂಧೀಜಿ ಅವರು 21 ವರ್ಷ ದಕ್ಷಿಣ ಆಫ್ರಿಕಾದಲ್ಲಿ ಕಳೆದರು. ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲಿ ಅವುಗಳ ವಿರುದ್ಧ ಹೋರಾಡಿದ ಅವರು, ಅನೇಕ ಸಂದರ್ಭಗಳಲ್ಲಿ ಅವಮಾನಕ್ಕೆ ಒಳಗಾದರು. ಭಾರತಕ್ಕೆ ಹಿಂದಿರುಗಿದ ಸಂದರ್ಭದಲ್ಲಿ ಅವರು ದೇಶದುದ್ದಕ್ಕೂ ರೈಲಿನಲ್ಲಿ ಸಂಚರಿಸಿ ಜನ ಸಾಮಾನ್ಯರನ್ನು ಸ್ವಾತಂತ್ರ್ಯ  ಹೋರಾಟದಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸುವ ಮೂಲಕ ಜನಸಮಾನ್ಯರನ್ನು ಮುಖ್ಯವಾಹಿನಿಗೆ ತಂದರು. ಇಂತಹ ನಾಯಕತ್ವ ಗುಣಗಳಿಂದ ಅವರನ್ನು ಮಹಾತ್ಮಾ, ರಾಷ್ಟ್ರಪಿತ ಹೀಗೆ ಹಲವಾರು ಹೆಸರುಗಳಿಂದ ಕರೆಯಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಸುಗಮ ಸಂಗೀತದ ಖ್ಯಾತ ಗಾಯಕಿ ಕಾರವಾರದ ದೀಪ್ತಿ ಅರ್ಗೇಕರ ಹಾಗೂ ಗಾಯಕ ರಾಮಾ ಬಾಂದೇಕರ್‌ ಹಾಗೂ ತಂಡದವರಿಂದ ಗಾಂಧೀಜಿ ಅವರಿಗೆ ಪ್ರಿಯವಾದ ರಘುಪತಿ ರಾಘವ ರಾಜಾ ರಾಮ ಭಜನ ಗೀತೆಗಳನ್ನು ಹಾಡಿದರು.

ಸಾಕ್ಷಚಿತ್ರ ಪ್ರದರ್ಶನ: ವೇದಿಕೆಯಲ್ಲಿ ಬೃಹತ್‌ ಎಲ್‌ಇಡಿ ಪರದೆಯ ಮೂಲಕ ಗಾಂಧೀಜಿ ಅವರ ಜೀವನ ದರ್ಶನ ಕುರಿತ ಸಾಕ್ಷಚಿತ್ರ ಪ್ರದರ್ಶನ ನೀಡಲಾಯಿತು.

ಛಾಯಾಚಿತ್ರ ಪ್ರದರ್ಶನ: ಮಹಾತ್ಮ ಗಾಂಧೀಜಿಯವರ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ಸೆರೆಹಿಡಿಯಲಾದ ಅಪೂರ್ವ ಛಾಯಾಚಿತ್ರ ಪ್ರದರ್ಶನ ಜರುಗಿತು. ಐವರು ಪೌರಕರ್ಮಿಕರಿಗೆ ಸನ್ಮಾನ: ಸ್ವಚ್ಚತಾ ಹೀ ಸೇವಾ ವಾಕ್ಯದೊಂದಿಗೆ ಗಾಂಧಿಜಿಯವರ ಜನ್ಮ ದಿನಾಚರಣೆ ಆಚರಿಸುವ ಸಂದರ್ಭದಲ್ಲಿ ಸ್ವಚ್ಚತೆ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಕಾರವಾರ ನಗರಸಭೆಯ ಐದು ಜನ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.