ಕರ್ನಾಟಕಕ್ಕೆ ಗೋವಾ ಮೀನು ಬೇಡ 

Team Udayavani, Nov 18, 2018, 3:56 PM IST

18-november-15.gif

ಕಾರವಾರ: ಗೋವಾ ಸರ್ಕಾರ ಆರು ತಿಂಗಳ ಕಾಲ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನು ರಫ್ತಿಗೆ ನಿಷೇಧ ಹೇರಿದ್ದು, ಇದನ್ನು ಶನಿವಾರ ಕಾರವಾರದ ಹಾಗೂ ಜಿಲ್ಲೆಯ ಕರಾವಳಿ ವಿವಿಧ ಮೀನುಗಾರ ಸಂಘಟನೆಗಳು ಹಾಗೂ ಮೀನು ವ್ಯಾಪಾರಿಗಳು ವಿರೋಧಿಸಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಸಾಂಕೇತಿಕವಾಗಿ ಮೂರು ಗಂಟೆ ನಡೆದ ಪ್ರತಿಭಟನೆಯಲ್ಲಿ ಗೋವಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಗೋವಾದ ಮೀನು ತುಂಬಿದ ಲಾರಿಗಳು ಸಹ ಕರ್ನಾಟಕ ಪ್ರವೇಶಿಸುವುದು ಬೇಡ. ಒಂದು ವೇಳೆ ಪ್ರವೇಶಿಸಿದರೆ ಅಂಥ ವಾಹನಗಳ ಮೇಲೆ ಕಲ್ಲು ತೂರುವುದಾಗಿ ಎಚ್ಚರಿಕೆ ನೀಡಿದರು. ಈ ವೇಳೆ ಗೋವಾದಿಂದ ಕರ್ನಾಟಕ ಪ್ರವೇಶಿಸುತ್ತಿದ್ದ ಹತ್ತು ಮೀನು ತುಂಬಿದ ಕಂಟೇನರ್‌ಗಳನ್ನು ತಡೆದರು.

ಗೋವಾ ಸರ್ಕಾರ ವಿವಿಧ ನೆಪವೊಡ್ಡಿ ಕರ್ನಾಟಕ ಮತ್ತು ಕಾರವಾರದ ಮೀನು ಲಾರಿಗಳ ಪ್ರವೇಶಕ್ಕೆ ಕಳೆದೆರಡು ತಿಂಗಳಿಂದ ಕಿರುಕುಳ ನೀಡುತ್ತಿದೆ. ಒಂದು ತಿಂಗಳಿಂದ ಕರ್ನಾಟಕದ ಮೀನು ರಫ್ತಿಗೆ ಪೂರ್ಣ ನಿಷೇಧ ಹೇರಿದೆ. ಫಾರ್ಮೋಲಿನ್‌ ಹಚ್ಚುತ್ತಾರೆ. ಅದನ್ನು ದಿನವೂ ಪರೀಕ್ಷಿಸಬೇಕು ಎಂಬ ನೆಪವೊಡ್ಡುತ್ತಿದೆ. ಅಲ್ಲದೇ ಆರು ತಿಂಗಳು ನಿಷೇಧ ಹೇರಿದೆ. ಇದು ಸರಿಯಲ್ಲ. ಕರ್ನಾಟಕ ಸರ್ಕಾರ ಮತ್ತ ಮೀನುಗಾರಿಕಾ ಇಲಾಖೆಯ ಮನವಿಗೆ ಗೋವಾ ಸರ್ಕಾರ ಕಿವಿಗೊಡುತ್ತಿಲ್ಲ. ಹಾಗಾಗಿ ಗೋವಾದಿಂದಲೂ ಮೀನು ತುಂಬಿದ ಲಾರಿಗಳು ಕರ್ನಾಟಕ ಪ್ರವೇಶಿಸಲು ಬಿಡುವುದಿಲ್ಲ ಎಂದು ಕಾರವಾರದ ಮೀನು ಮಾರಾಟ ಫೆಡರೇಶನ್‌, ಪರ್ಶಿಯನ್‌ ಬೋಟ್‌ ಯುನಿಯನ್‌ ಸೇರಿದಂತೆ ಹತ್ತು ಹಲವು ಸಂಘಟನೆಗಳು ಗೋವಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದವು. ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡಲಾಯಿತು. ಆದರೆ ಸಾರ್ವಜನಿಕರ ವಾಹಗಳಿಗೆ, ಸಂಚಾರಿ ವಾಹನಗಳ ಸಂಚಾರಕ್ಕೆ ಅಡೆತಡೆಯಾಗದಂತೆ ಕರ್ನಾಟಕದ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.

ಸಮಸ್ಯೆ ಆಲಿಸಿದ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರು ಸ್ಥಳಕ್ಕೆ ಭೇಟಿ ನೀಡಿ ಮೀನುಗಾರರ ಮತ್ತು ಮೀನು ವ್ಯಾಪಾರಿಗಳ ಬೇಡಿಕೆಯನ್ನು ಕೂಡಲೇ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.

ವಿವಿಧ ಬೋಟ್‌ ಯುನಿಯನ್‌ ಮುಖಂಡರು ನೇತೃತ್ವ ವಹಿಸಿದ್ದರು. ದಕ್ಷಿಣ ಕನ್ನಡ, ಉಡುಪಿ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗದ ಮೀನುಗಾರ ಮುಖಂಡರು, ಸುಧಾಕರ ಹರಿಕಂತ್ರ, ಸಂಜೀವ ಹರಿಕಂತ್ರ, ಗಣಪತಿ ಮಾಂಗ್ರೆ, ಪ್ರವೀಣ ಜಾವಕರ್‌ ಮುಂತಾದವರು ಇದ್ದರು.

ಗೋವಾ ಸರ್ಕಾರದ ಆದೇಶ: ಕರ್ನಾಟಕದಿಂದ ಬರುವ ಮೀನು ವಾಹನ ಕಂಟೇನರ್‌ಗಳು ನಿರ್ದಿಷ್ಟ ಮಾದರಿ ಹೊಂದಿರಬೇಕು. ಆಹಾರ ಇಲಾಖೆಯ ಪ್ರಮಾಣಪತ್ರ, ವ್ಯಾಪಾರದ ಲೈಸೆನ್ಸ್‌ ನವೀಕರಿಸಿರಬೇಕು. ಮೀನುಗಳಿಗೆ ಫಾರ್ಮೋಲಿನ್‌ ಸೇರಿದಂತೆ ಯಾವುದೇ ರಾಸಾಯನಿಕ ಹಚ್ಚಿರಬಾರದು. ಆರು ತಿಂಗಳು ಮೀನನ್ನು ಗೋವಾಕ್ಕೆ ರಫ್ತು ಮಾಡಬಾರದು ಎಂದು ಗೋವಾದ ಮೀನುಗಾರಿಕಾ ಸಚಿವಾಲಯ ಕಳೆದ ಅ.26ರಂದು ಆದೇಶ ಹೊರಡಿಸಿದೆ. ಈ ಆದೇಶದ ನಂತರ ಕರ್ನಾಟಕ ಮತ್ತು ಗೋವಾ ಗಡಿಭಾಗದಲ್ಲಿ ಕರ್ನಾಟಕದ ಕರಾವಳಿಯಿಂದ ಮೀನು ತುಂಬಿದ ವಾಹನಗಳ ಮೇಲೆ ಗೋವಾ ಸರ್ಕಾರ ಹದ್ದಿನ ಕಣ್ಣಿಟ್ಟಿದೆ. ಈ ಆದೇಶದಿಂದ ಗೋವಾ ಕರ್ನಾಟಕದ ಬಾಂಧವ್ಯ ಸಹ ಹದಗೆಡುತ್ತಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.