ಮಸೂದ್ಗೆ ಚೀನ ಬೆಂಬಲ: ಭಾರತ ಕಿಡಿ
Team Udayavani, Dec 22, 2017, 8:53 AM IST
ವಿಶ್ವಸಂಸ್ಥೆ: ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ನಾಯಕ ಮಸೂದ್ ಅಜರ್ನನ್ನು ಜಾಗತಿಕ ಉಗ್ರನೆಂದು ಘೋಷಿಸುವಂತೆ ಭಾರತ ನಡೆಸುತ್ತಿರುವ ಪ್ರಯತ್ನಗಳಿಗೆ ಚೀನ ಸತತವಾಗಿ ಅಡ್ಡಗಾಲು ಹಾಕುತ್ತಿರುವುದನ್ನು ಭಾರತ ಉಗ್ರವಾಗಿ ಖಂಡಿಸಿದೆ.
ಗುರುವಾರ ಚೀನ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ರಾಯಭಾರಿ ಸಯ್ಯದ್ ಅಕºರುದ್ದೀನ್, ಗಡಿ ಪ್ರದೇಶಗಳಲ್ಲಿ ಉಗ್ರ ಸಂಘಟನೆಗಳು ದ್ವೇಷವನ್ನು ಪ್ರಚೋದಿಸುವ ಸಿದ್ಧಾಂತಗಳನ್ನು ಹರಡುತ್ತಿವೆ. ಜನರಿಂದ ಚಂದಾ ಎತ್ತಿ, ಆ ಹಣವನ್ನು ಶಸ್ತ್ರಾಸ್ತ್ರ ಕೊಳ್ಳಲು, ಹೊಸ ಉಗ್ರರನ್ನು ನೇಮಿಸಿಕೊಳ್ಳಲು ಬಳಸುತ್ತಿವೆ. ಪರಿಸ್ಥಿತಿ ಹೀಗಿದ್ದರೂ ದಕ್ಷಿಣ ಏಷ್ಯಾ ಕೆಲ ಸದಸ್ಯ ರಾಷ್ಟ್ರಗಳು ಭಯೋತ್ಪಾದನೆಯನ್ನು ತಮ್ಮೆಲ್ಲರಿಗೂ ಸಂಬಂಧಿಸಿದ ಅಪಾಯ ಎಂದು ಪರಿಗಣಿಸಿಯೇ ಇಲ್ಲ ಎಂದು ಚೀನದ ಹೆಸರನ್ನೇಳದೆ ಟೀಕಾ ಪ್ರಹಾರ ನಡೆಸಿದ್ದಾರೆ. ಅಕºರುದ್ದೀನ್ ಅವರ ಈ ಟೀಕೆಗೆ ಉತ್ತರಿಸಿರುವ ಚೀನ, ಮಸೂದ್ನನ್ನು ಜಾಗತಿಕ ಉಗ್ರನೆಂದು ಘೋಷಿಸುವುದಕ್ಕೆ ಅಡ್ಡಿಯಾದ ತನ್ನ ನಡೆ ಅಂತಾರಾಷ್ಟ್ರೀಯ ನಿಯಮಗಳಿಗೆ ತಕ್ಕಂತೆ ಔಚಿತ್ಯವಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ