ಪಾಕ್‌ ಮನವೊಲಿಕೆಗೆ ಚೀನ ಮುಂದಾಗಲಿ

Team Udayavani, Jan 8, 2018, 10:40 AM IST

White-House-600.jpg

ವಾಷಿಂಗ್ಟನ್‌: ಉಗ್ರ ಸಂಘಟನೆಗಳನ್ನು ಪೋಷಿಸುತ್ತಿರುವ ಪಾಕಿಸ್ಥಾನದ ವಿರುದ್ಧ ಪದೇ ಪದೆ ಕಿಡಿ ಕಾರುತ್ತಿರುವ ಅಮೆರಿಕ ಇದೀಗ, ಸಮಸ್ಯೆಯಲ್ಲಿ ಚೀನವನ್ನೂ ಎಳೆತಂದಿದೆ. ಪಾಕಿಸ್ಥಾನವನ್ನು ಚೀನ ಮನವೊಲಿಸಬಹುದು ಎಂದು ವೈಟ್‌ಹೌಸ್‌ನ ಅಧಿಕಾರಿಗಳು ಹೇಳಿದ್ದಾರೆ. ಅಫ್ಘಾನಿಸ್ಥಾನ ಹಾಗೂ ಈ ಭಾಗದಲ್ಲಿ ಸುಸ್ಥಿರತೆಗೆ ಪಾಕಿಸ್ಥಾನದಲ್ಲಿರುವ ಉಗ್ರ ನೆಲೆಗಳನ್ನು ಧ್ವಂಸಗೊಳಿಸುವುದು ಸದ್ಯದ ಅಗತ್ಯವಾಗಿದೆ. ಚೀನ ಹಾಗೂ ಪಾಕ್‌ ಹಲವು ವರ್ಷಗಳಿಂದಲೂ ಮಿತೃತ್ವ ಹೊಂದಿವೆ. ಅಷ್ಟೇ ಅಲ್ಲ, ಸೇನಾ ಬಂಧದ ಜತೆಗೆ ಇತ್ತೀಚೆಗೆ ಪಾಕ್‌ನಲ್ಲಿ ಚೀನ ಹೂಡಿಕೆಯೂ ಹೆಚ್ಚುತ್ತಿದೆ. ಪಾಕಿಸ್ಥಾನದಲ್ಲಿ ಉಗ್ರರು ನೆಲೆ ನಿಲ್ಲುವುದರಿಂದ ಚೀನದ ಹಿತಾಸಕ್ತಿಯೂ ಪೂರೈಸುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪಾಕ್‌-ಅಮೆರಿಕ ಸಂಬಂಧ ಮುಂದುವರಿಕೆ: ಉಗ್ರರನ್ನು ಪೋಷಿಸುತ್ತಿರುವುದರ ಬಗ್ಗೆ ಟೀಕೆ ಹಾಗೂ ಆರ್ಥಿಕ ಅನುದಾನ ಸ್ಥಗಿತದಂತಹ ಕಠಿಣ ಕ್ರಮಗಳನ್ನು ಕೈಗೊಂಡಿರುವ ಮಧ್ಯೆಯೂ ಪಾಕ್‌ ಹಾಗೂ ಅಮೆರಿಕದ ಸಂಬಂಧ ಹಿಂದಿನಂತೆಯೇ ಮುಂದುವರಿಯಲಿದೆ ಎಂದು ಪಾಕಿಸ್ಥಾನದ ವಿದೇಶಾಂಗ ಕಾರ್ಯದರ್ಶಿ ತೆಹ್ಮಿನಾ ಜಂಜುವಾ ಹೇಳಿದ್ದಾರೆ. ಅಮೆರಿಕ ವಿಶ್ವದ ಬೃಹತ್‌ ಆರ್ಥಿಕತೆಯಾಗಿದ್ದು, ಈ ಪ್ರದೇಶದಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ. ಹೀಗಾಗಿ ನಾವು ಅವರೊಂದಿಗೆ ಹಿಂದಿನಂತೆಯೇ ಮಾತುಕತೆ ಹಾಗೂ ಸಹಭಾಗಿತ್ವವನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಕಿಮ್‌ ಜತೆ ಫೋನ್‌ನಲ್ಲಿ ಮಾತುಕತೆಗೆ ಸಿದ್ಧ: ಅಮೆರಿಕ ಮತ್ತು ಉತ್ತರ ಕೊರಿಯಾದ ಕಲಹ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವಂತೆಯೇ, ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಜತೆ ಫೋನ್‌ನಲ್ಲಿ ಮಾತುಕತೆ ನಡೆಸಲು ನಾನು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಕಿಮ್‌ ಜತೆಗೆ ಮಾತನಾಡಲು ನನಗೆ ಯಾವ ಅಭ್ಯಂತರವೂ ಇಲ್ಲ ಎಂದಿದ್ದಾರೆ. ಟ್ರಂಪ್‌ ಹಾಗೂ ಕಿಮ್‌ ಮಧ್ಯೆ ಪದೇ ಪದೆ ವಾಗ್ವಾದ ನಡೆಯುತ್ತಿದ್ದು, ಪ್ರತಿ ಬಾರಿ ಉತ್ತರ ಕೊರಿಯಾ ಅಣ್ವಸ್ತ್ರ ಕ್ಷಿಪಣಿಗಳನ್ನು ಪರೀಕ್ಷಿಸಿದಾಗಲೂ ಉಭಯ ದೇಶಗಳ ಮುಖಂಡರ ವಾಕ್ಸಮರ ತಾರಕ್ಕೇರುತ್ತದೆ.

ಹುರಿಯತ್‌ ನಾಯಕರ ವಿರುದ್ಧ ಶೀಘ್ರ ಚಾರ್ಜ್‌ಶೀಟ್‌ 
ಜಮ್ಮು-ಕಾಶ್ಮೀರದಲ್ಲಿ ಉಗ್ರರಿಗೆ ಹಣಕಾಸು ಪೂರೈಸಿದ ಆರೋಪಕ್ಕೆ ಸಂಬಂಧಿಸಿ ಎನ್‌ಐಎ  ಇದೇ ತಿಂಗಳಲ್ಲಿ ಹುರಿಯತ್‌ ನಾಯಕರ ವಿರುದ್ಧ ಆರೋಪಪಟ್ಟಿ ದಾಖಲಿಸಲಿದೆ. ಈಗಾಗಲೇ ಸಂಸ್ಥೆಯು ಇದಕ್ಕೆ ಕೇಂದ್ರ ಗೃಹ ಸಚಿವಾಲಯದ ಅನುಮತಿ ಕೋರಿದೆ. ಆರೋಪಪಟ್ಟಿಯಲ್ಲಿ ಹುರಿಯತ್‌ ನಾಯಕರಾದ ನಯೀಂ ಖಾನ್‌, ಜೆಕೆಎಲ್‌ಎಫ್ ನಾಯಕ ಫಾರೂಕ್‌ ಅಹ್ಮದ್‌ ದರ್‌, ಮಿರ್ವೇಜ್‌ ಉಮರ್‌ ಫಾರೂಕ್‌ನ ಆಪ್ತ ಸಹಚರ ಅಫ್ತಾಬ್‌ ಹಿಲಾಲಿ ಶಾ, ಗಿಲಾನಿಯ ಅಳಿಯ ಅಲ್ತಾಫ್ ಅಹ್ಮದ್‌, ತೆಹ್ರೀಕ್‌-ಇ-ಹುರಿಯತ್‌ ವಕ್ತಾರ ಆಯಾಜ್‌ ಖಾನ್‌ ಸೇರಿದಂತೆ ಅನೇಕರ ಹೆಸರುಗಳಿವೆ. ಕಣಿವೆ ರಾಜ್ಯದಲ್ಲಿ ಉಗ್ರರಿಗೆ ಹಣಕಾಸು ಪೂರೈಸಿದ, ವಿಧ್ವಂಸಕ ಕೃತ್ಯ ಎಸಗಿದ ಆರೋಪ ಇವರ ಮೇಲೆ ಹೊರಿಸಲಾಗಿದೆ. ಇದೇ ವೇಳೆ, ಭಾರತ-ಪಾಕ್‌ ನಡುವೆ ಉತ್ತಮ ಬಾಂಧವ್ಯ ಏರ್ಪಡುವ ನಿಟ್ಟಿನಲ್ಲಿ ಎರಡೂ ದೇಶಗಳ ನಾಯಕರು ಹೆಜ್ಜೆಯಿಡಬೇಕು ಎಂದು ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಹೇಳಿದ್ದಾರೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.