ನೀಲಿ ನಟಿಯೊಂದಿಗಿನ ಟ್ರಂಪ್‌ ಪ್ರಣಯದಾಟ ಬಯಲು!


Team Udayavani, Jan 14, 2018, 6:00 AM IST

Donald-Trump–201813.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇದೀಗ ಮತ್ತೂಂದು ಕಳಂಕ ಅಂಟಿಕೊಂಡಿದೆ. 2006ರ ಘಟನೆಯೊಂದರ ಸಂಬಂಧ ಟ್ರಂಪ್‌ ಅವರ ವಕೀಲ ಮೈಕೆಲ್‌ ಕೋಹೆನ್‌, ಪೋರ್ನ್ ಸ್ಟಾರ್‌ವೊಬ್ಬರಿಗೆ ಟ್ರಂಪ್‌ ಮತ್ತು ಆಕೆಯ ನಡುವಿನ ಸಂಬಂಧದ ಬಗ್ಗೆ ಸುಮ್ಮನಿರಲು 82 ಲಕ್ಷ ರೂ.(1.30 ಲಕ್ಷ ಡಾಲರ್‌)ಹಣ ನೀಡಿದ್ದರು ಎಂಬುದು ಬಹಿರಂಗಗೊಂಡಿದೆ. ಟ್ರಂಪ್‌ ಅವರು ತಮ್ಮ ಮೂರನೇ ಪತ್ನಿ ಮೆಲನಿಯಾರನ್ನು ವಿವಾಹವಾಗುವ ಕೆಲ ದಿನಗಳ ಹಿಂದಷ್ಟೇ ಈ ಘಟನೆ ನಡೆದಿತ್ತು ಎಂದು ಅಮೆರಿಕದ ಪ್ರತಿಷ್ಠಿತ ಪತ್ರಿಕೆ ವಾಲ್‌ ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ. 

ಈ ಹಣವನ್ನು 2016ರಲ್ಲಿ ಟ್ರಂಪ್‌ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಕೆಲವೇ ವಾರಗಳ ಹಿಂದೆ ಸ್ಟಿಫಾನಿ ಕ್ಲಿಫೋರ್ಡ್‌ಗೆ ನೀಡಲಾಗಿತ್ತು. ಯಾವುದೇ ಕಾರಣಕ್ಕೂ ಹಿಂದಿನ ಸಂಬಂಧದ ಬಗ್ಗೆ ಬಾಯಿ ಬಿಡಬಾರದು ಎಂದು ತಾಕೀತು ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ. ಅಲ್ಲದೆ ಈ ಹಣವನ್ನು ಲಾಸ್‌ ಏಂಜಲೀಸ್‌ನ ಸಿಟಿ ನ್ಯಾಷನಲ್‌ ಬ್ಯಾಂಕ್‌ ಮೂಲಕ ತಲುಪಿಸಲಾಗಿತ್ತು. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಕೀಲ ಮೈಕೆಲ್‌, 2011ರಲ್ಲೂ ಟ್ರಂಪ್‌ ಕುರಿತಂತೆ ಇಂಥ ಸುದ್ದಿಗಳು ಹರಡಿದ್ದವು. ಆಗಲೂ ಟ್ರಂಪ್‌ ಅವರೇ ಇಂಥ ಸುದ್ದಿಗಳನ್ನು ನಿರಾಕರಿಸಿದ್ದರು. ಅಲ್ಲದೆ ಇದೀಗ ಹೇಳಲಾಗಿರುವ ಪೋರ್ನ್ ಸ್ಟಾರ್‌ ಅವರ ಹೆಸರು ಸ್ಟಿಫಾನಿ ಕ್ಲಿಪೋರ್ಡ್‌ ಅಲ್ಲ, ಸ್ಟಾರ್ಮಿ ಡೇನಿಯಲ್ಸ್‌ ಎಂದೂ ಅವರು ಹೇಳಿದ್ದಾರೆ. 

ಯಾವಾಗ ಭೇಟಿ?
ಟ್ರಂಪ್‌ ಮತ್ತು ಸ್ಟಿಫಾನಿ ಕ್ಲಿಪೋರ್ಡ್‌ 2006ರಲ್ಲಿ ನಾವಡದಲ್ಲಿನ ಲೇಕ್‌ ಟಾವೋನಲ್ಲಿ ನಡೆದ ಸೆಲೆಬ್ರಿಟಿ ಗಾಲ್ಫ್ ಟೂರ್ನಮೆಂಟ್‌ ವೇಳೆಯಲ್ಲಿ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ದೈಹಿಕ ಸಂಬಂಧವೇರ್ಪಟ್ಟಿತ್ತು. ಈಕೆಯನ್ನು ಒಂದು ರಾತ್ರಿ ಪಾರ್ಟಿಗಾಗಿ ಆಹ್ವಾನಿಸಲಾಗಿತ್ತು. ಅಷ್ಟೇ ಅಲ್ಲ, ಮಾರನೇ ದಿನ ಬೆಳಗ್ಗೆ ಟ್ರಂಪ್‌ ಅವರು, ತಾವು ಉಳಿದಿದ್ದ ಹೋಟೆಲ್‌ನ ಕಾರಿಡಾರ್‌ನಲ್ಲಿ ಒಳವಸ್ತ್ರದಲ್ಲಿಯೇ ಸ್ಟಿಫಾನಿ ಅವರನ್ನು ಓಡಾಡಿಸಿದ್ದರು ಎಂದೂ ವರದಿ ಮಾಡಲಾಗಿದೆ.

ಆರೋಪ ನಿರಾಕರಣೆ
ಈ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿರುವ ಸ್ಟಿಫಾನಿ, ತನ್ನ ಮತ್ತು ಟ್ರಂಪ್‌ ನಡುವೆ ಯಾವುದೇ ಸಂಬಂಧವಿರಲಿಲ್ಲ. ಈಗ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು. ಈ ಹಿಂದೆ ಕೆಲವೇ ಕೆಲವು ಬಾರಿ ಸಾರ್ವಜನಿಕ ವೇದಿಕೆಗಳಲ್ಲಿ ಅವರನ್ನು ಭೇಟಿಯಾಗಿದ್ದೇನೆ. ಅವರೊಬ್ಬ ಉತ್ತಮ ವ್ಯಕ್ತಿ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.