ಕ್ಸಿ ಜತೆ ಕಿಮ್ ಅಣ್ವಸ್ತ್ರ ನಿಶ್ಶಸ್ತ್ರೀಕರಣ ವಿಚಾರ ಚರ್ಚೆ
Team Udayavani, Mar 29, 2018, 6:00 AM IST
ಬೀಜಿಂಗ್/ವಾಷಿಂಗ್ಟನ್: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಭಾನುವಾರದಿಂದ ಬುಧವಾರದ ವರೆಗೆ ಚೀನಾಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದಾರೆ. ತನ್ನಲ್ಲಿರುವ ಅಣ್ವಸ್ತ್ರಗಳನ್ನು ನಿಶ್ಶಸ್ತ್ರೀಕರಣಗೊಳಿಸುವ ನಿಟ್ಟಿನಲ್ಲಿ ಕಿಮ್ ಶೀಘ್ರವೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆಗೆ ಮಾತುಕತೆ ನಡೆಸಲಿದ್ದಾರೆ. ಅದಕ್ಕೆ ಪೂರಕವಾಗಿ ಈ ಭೇಟಿ ನಡೆದಿದೆ. ಈ ಸಂದರ್ಭದಲ್ಲಿ ಉತ್ತರ ಕೊರಿಯಾ ಹೊಂದಿರುವ ಅಣ್ವಸ್ತ್ರಗಳನ್ನು ನಿಶ್ಶಸ್ತ್ರೀಕರಣಗೊಳಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ಮಾತುಕತೆ ನಡೆಸಲಾಗಿದೆ. ಕ್ಸಿ ಜಿನ್ಪಿಂಗ್ರೇ ಆಹ್ವಾನ ನೀಡಿದ್ದರು ಮತ್ತು ಅವರು ಸ್ವದೇಶಕ್ಕೆ ಮರಳಿದ ಬಳಿಕವೇ ಈ ಭೇಟಿಯ ಬಗ್ಗೆ ಮಾಹಿತಿಯನ್ನು ಚೀನಾದ ಕ್ಸಿನ್ಹುವಾ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ. ಇದೊಂದು ವಿಶೇಷ ಭೇಟಿ ಎಂದು ಚೀನಾ ಅಧ್ಯಕ್ಷರು ಬಣ್ಣಿಸಿದರು ಎಂದು ಕ್ಸಿನ್ಹುವಾ ಹೇಳಿದೆ. ಕಿಮ್ ಜಾಂಗ್ ಉನ್ ಗೌರವಾರ್ಥ ಔತಣ ಕೂಟ ಮತ್ತು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ಇದೇ ವೇಳೆ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅಣ್ವಸ್ತ್ರಗಳನ್ನು ನಿಶ್ಶಸ್ತ್ರೀಕರಣಗೊಳಿಸಲು ಮುಂದಾಗಿರುವುದು ಸರಿಯಾಗಿದೆ. ಆ ದೇಶಕ್ಕೆ ಇದೊಂದು ಉತ್ತಮ ಅವಕಾಶ ಎಂದಿದ್ದಾರೆ ಅಮೆರಿಕ ಅಧ್ಯಕ್ಷ ಟ್ರಂಪ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ