ಕೈಕುಲುಕಿದ ಪುಟಿನ್ – ಟ್ರಂಪ್
Team Udayavani, Jul 17, 2018, 6:00 AM IST
ಹೆಲ್ಸಿಂಕಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಷ್ಯಾ ಪ್ರಧಾನಿ ವ್ಲಾಡಿಮಿರ್ ಪುಟಿನ್ ಸೋಮವಾರ ಫಿನ್ಲಂಡ್ನ ಹೆಲ್ಸಿಂಕಿಯಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುಮಾರು 2 ಗಂಟೆಗಳವರೆಗೆ ಇಬ್ಬರೂ ಮುಖಂಡರು ಮಾತುಕತೆ ನಡೆಸಿದ್ದು, ಉಭಯ ದೇಶಗಳ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಭೇಟಿಗೂ ಮುನ್ನ ಮಾತನಾಡಿದ ಟ್ರಂಪ್, ಇದು ಉತ್ತಮ ಆರಂಭ ಎಂದಿದ್ದಾರೆ. ಅಲ್ಲದೆ ಇಬ್ಬರೂ ಮುಖಂಡರು ಒಟ್ಟಿಗೆ ಕಾಣಿಸಿಕೊಳ್ಳುವುದನ್ನು ಜಗತ್ತು ವೀಕ್ಷಿಸುತ್ತಿತ್ತು ಎಂದಿದ್ದಾರೆ. ಭೇಟಿ ನಂತರ ಇಬ್ಬರೂ ಒಟ್ಟಿಗೆ ಔತಣಕೂಟದಲ್ಲಿ ಭಾಗವಹಿಸಿದ್ದರು. ಅಮೆರಿಕ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ನಡೆಸಿದೆ ಎಂಬ ಆರೋಪದಿಂದಾಗಿ ಉಭಯ ದೇಶಗಳ ಮಧ್ಯದ ಸಂಬಂಧ ಹಳಸಿತ್ತು. ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ