ಡ್ರೋನ್ನಿಂದ ವೆನೆಜುವೆಲಾ ಅಧ್ಯಕ್ಷ ಮಡುರೊ ಹತ್ಯೆ ಯತ್ನ
Team Udayavani, Aug 6, 2018, 10:07 AM IST
ಸೇನಾ ಸಮಾರಂಭದಲ್ಲಿ ಭಾಗಿಯಾಗಿದ್ದಾಗ ಬಾಂಬ್ ದಾಳಿ
ಅಧ್ಯಕ್ಷ ಮಡುರೊ ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರು
ಕರಾಕಸ್: ಡ್ರೋನ್ ಮೂಲಕ ಬಾಂಬ್ ಸ್ಫೋಟಿಸಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಹತ್ಯೆಗೈಯ್ಯುವ ಸಂಚೊಂದು ವಿಫಲ ಗೊಂಡಿದ್ದು, ದೇಶದೆಲ್ಲೆಡೆ ಕಂಪನ ಸೃಷ್ಟಿಸಿದೆ. ಕರಾಕಸ್ನ ಕೇಂದ್ರ ಭಾಗದಲ್ಲಿ ಆಯೋಜಿಸಲಾಗಿದ್ದ ಸೇನೆಯ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನಿಕೋಲಸ್, ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಾಗ, ಸ್ಫೋಟಕ ಹೊತ್ತಿದ್ದ ಡ್ರೋನ್ ಒಂದು ಏಕಾಏಕಿ ಎಲ್ಲಿಂದಲೋ ಹಾರಿ ಬಂದು ವೇದಿಕೆ ಮುಂದೆ ಬಂದು ನಿಂತು ಸ್ಫೋಟಗೊಂಡಿದೆ. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಆದರೆ ಸುಮಾರು 12 ಮಂದಿ ಯೋಧರು ಗಾಯ ಗೊಂಡಿದ್ದಾರೆ. ಡ್ರೋನ್ ಸ್ಫೋಟಗೊಂಡ ಕೂಡಲೇ ಭದ್ರತಾ ಸಿಬ್ಬಂದಿಯು ಅಧ್ಯಕ್ಷರನ್ನು ಸ್ಯೂಟ್ಕೇಸ್ ಮಾದರಿಯ ರಕ್ಷಾಕವಚದ ಮೂಲಕ ರಕ್ಷಿಸಿದ ವೀಡಿಯೋ ಕೂಡ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ.
ಘಟನೆಯ ಅನಂತರ, ರಾಷ್ಟ್ರೀಯ ಬಾನುಲಿ ಕೇಂದ್ರದ ಮೂಲಕ ಮಾತನಾಡಿದ ನಿಕೋ ಲಸ್, “”ನನ್ನನ್ನು ಡ್ರೋನ್ ಮೂಲಕ ಕೊಲ್ಲಲು ಸಂಚು ರೂಪಿಸಿದ್ದರು. ಇದಕ್ಕೆ ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನುಯೆಲ್ ಸ್ಯಾಟೋ ಸ್ ಅವರೇ ಕಾರಣ” ಎಂದು ಆರೋಪಿಸಿದ್ದಾರೆ. ಆದರೆ, ಸರಕಾರಿ ಮೂಲಗಳು ಬಂಡುಕೋರರ ಕೈವಾಡವಿರಬಹುದೆಂದು ಹೇಳಿವೆ. ತನಿಖೆಗೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ