ಬಾಂಗ್ಲಾದಲ್ಲಿ ಇರಿದು ಪತ್ರಕರ್ತೆ ಹತ್ಯೆ
Team Udayavani, Aug 30, 2018, 9:44 AM IST
ಢಾಕಾ: ಬಾಂಗ್ಲಾದೇಶದ ಟಿವಿ ವಾಹಿನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತೆ ಸುಬರ್ಣ ಅಕ್ತರ್ ನೋದಿ(32) ಎಂಬವರನ್ನು ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಇರಿದು ಹತ್ಯೆಗೈದಿದ್ದಾರೆ. 10-12 ಜನರ ಗುಂಪು ಈ ಕೃತ್ಯ ಎಸಗಿದೆ.
ವಾಹಿನಿಯಲ್ಲಿ ವೃತ್ತಿ ನಿರ್ವಹಣೆಯ ಜೊತೆಗೆ, ಡೈಲಿ ಜಾಗ್ರೋತೊ ಬಾಂಗ್ಲಾ ಎಂಬ ಪತ್ರಿಕೆಯಲ್ಲೂ ಕೆಲಸ ಮಾಡುತ್ತಿದ್ದರು. ಅವರಿಗೆ 9 ವರ್ಷ ವಯಸ್ಸಿನ ಮಗಳಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಕುಟುಂಬ ಮೂಲಗಳು ಹೇಳಿವೆ. ಇದಕ್ಕೂ ಮೊದಲು ತನ್ನ ಪರಿತ್ಯಕ್ತ ಪತಿ ತನ್ನ ಮೇಲೆ ದಾಳಿಗೆ ಯತ್ನಿಸಿದ್ದಾಗಿ ಆಕೆ ಹೇಳಿದ್ದರು ಎಂದು ಅವರ ತಾಯಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ