ಸಾರ್ಕ್‌ ಸಭೆ ಮಧ್ಯೆ ಎದ್ದು ಬಂದ ಸುಷ್ಮಾ


Team Udayavani, Sep 29, 2018, 6:00 AM IST

s-2.jpg

ನ್ಯೂಯಾರ್ಕ್‌: ಸಾರ್ಕ್‌ ದೇಶಗಳ ವಿದೇಶಾಂಗ ಸಚಿವರ ಅನೌಪಚಾರಿಕ ಸಭೆಯ ಮಧ್ಯೆಯೇ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಎದ್ದು ಬರುವ ಮೂಲಕ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ. ಈ ಸಭೆಯಲ್ಲಿ ಪಾಕ್‌ ವಿದೇಶಾಂಗ ಸಚಿವ ಷಾ ಮೆಹಮೂದ್‌ ಖುರೇಶಿ ಕೂಡ ಭಾಗವಹಿಸಿದ್ದರು.

ವಿಶ್ವಸಂಸ್ಥೆ ಮಹಾಅಧಿವೇಶನದ ವೇಳೆ ನಡೆದ ಈ ಸಭೆಯಲ್ಲಿ ಸುಷ್ಮಾ, ತಮ್ಮ ಭಾಷಣ ಮುಗಿದ ನಂತರ ಇತರ ಕಾರ್ಯಕ್ರಮಗಳಿಗಾಗಿ ತೆರಳಿದ್ದಾರೆ. ಆದರೆ ಭಾರತದ ರಾಜತಾಂತ್ರಿಕ ಮೂಲಗಳ ಪ್ರಕಾರ ಇಂತಹ ಸಭೆಯಲ್ಲಿ ತಮ್ಮ ಭಾಷಣವನ್ನು ಮುಗಿಸಿದ ಬಳಿಕ ಹೊರನಡೆಯುವುದು ಸಹಜವಾಗಿದೆ. ಅಲ್ಲದೆ, ಸುಷ್ಮಾರಿಗಿಂತ ಮೊದಲು ಅಫ್ಘಾನಿ ಸ್ತಾನ ಮತ್ತು ಬಾಂಗ್ಲಾದೇಶದ ಪ್ರತಿನಿಧಿಗಳು ಹೊರನಡೆದಿದ್ದರು. ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಸಭೆ ಮುಗಿಯುವ ತನಕವೂ ಹಾಜರಿದ್ದರು. ಇನ್ನೊಂದೆಡೆ ಭಾರತದ ಈ ವರ್ತನೆಯೇ ಸಂಬಂಧ ಸುಧಾರಣೆಗೆ ಅಡ್ಡಿಯಾಗಿದೆ ಎಂದು ಖುರೇಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ವಿರುದ್ಧ ಒಗ್ಗಟ್ಟು: ವಿಶ್ವಸಂಸ್ಥೆಯಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿ ದಂತೆ ಬದ್ಧತೆ ವ್ಯಕ್ತಪಡಿಸಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್‌ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 48 ವಿಶ್ವ ನಾಯಕರು ಬೆಂಬಲಿಸಿ ದ್ದಾರೆ. ಕಳೆದ ಕೆಲವು ವರ್ಷಗಳಿಂದ ವಿಶ್ವಸಂಸ್ಥೆಯ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬರುತ್ತಿವೆ. ಲೈಂಗಿಕ ದೌರ್ಜನ್ಯ ತಡೆಗಾಗಿ 2017ರಲ್ಲಿ ಆಂಟೋನಿಯೋ ಅಭಿಯಾನವೊಂದನ್ನು ಆರಂಭಿಸಿದ್ದರು.

ಕೊರಿಯಾ ನಿರ್ಣಯ ಪಾಕ್‌ಗೂ ಅನ್ವಯಿಸಲಿ!
ಕೊರಿಯಾ ದೇಶಗಳ ಅಣ್ವಸ್ತ್ರ ನಿಶ್ಶಸ್ತ್ರೀಕರಣ ಪ್ರಕ್ರಿಯೆಯಲ್ಲಿ ಕೈಗೊಳ್ಳುವ ನಿರ್ಧಾರಗಳು ಭಾರತದ ನೆರೆ ದೇಶಗಳಿಗೂ ಅನ್ವಯಿಸಬೇಕಿದೆ ಮತ್ತು ಇದು ಭಾರತ ತನ್ನ ನೆರೆಯ ಬಗ್ಗೆ ಹೊಂದಿರುವ ಆಕ್ಷೇಪಗಳನ್ನೂ ಪರಿಹರಿಸಬೇಕಿದೆ ಎಂದು ನ್ಯೂಯಾರ್ಕ್‌ನಲ್ಲಿ ನಡೆದ ಬ್ರಿಕ್ಸ್‌ ರಾಷ್ಟ್ರಗಳ ಸಭೆಯಲ್ಲಿ ಸಚಿವೆ ಸುಷ್ಮಾ ಹೇಳಿದ್ದಾರೆ. ಹಿಂದಿನಿಂದಲೂ ಉತ್ತರ ಕೊರಿಯಾ ಮತ್ತು ಪಾಕಿಸ್ತಾನ ಅಣ್ವಸ್ತ್ರ ವಿಷಯದಲ್ಲಿ ಸಹಭಾಗಿತ್ವ ಸಾಧಿಸಿರುವುದರಿಂದಾಗಿ, ಪಾಕಿಸ್ತಾನದ ವಿಷಯವನ್ನು ಪರೋಕ್ಷವಾಗಿ ಸುಷ್ಮಾ ಪ್ರಸ್ತಾಪಿಸಿದ್ದಾರೆ. ಅಲ್ಲದೆ ವಿಶ್ವಸಂಸ್ಥೆಯಲ್ಲಿ ಕೈಗೊಂಡ ನಿರ್ಣಯಗಳು ಬ್ರಿಕ್ಸ್‌ ದೇಶಗಳನ್ನು ವಿಮುಖವಾಗಿಸಬಾರದು ಎಂದೂ ಹೇಳಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಭಾರತದ ಸೇರ್ಪಡೆಗೆ ಕುರಿತ ವಿಚಾರದಲ್ಲಿ ಚೀನಾ ಅಡ್ಡಗಾಲು ಹಾಕುತ್ತಿದ್ದು, ಇದರ ವ್ಯತಿರಿಕ್ತ ಪರಿಣಾಮ ಬ್ರಿಕ್ಸ್‌ ಸಭೆಗೂ ವ್ಯಾಪಿಸಬಾರದು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.