ಅಮೆರಿಕದ ರೋಮಿಯೋ ಖರೀದಿಸಲು ನಿರ್ಧಾರ
Team Udayavani, Nov 18, 2018, 6:00 AM IST
ವಾಷಿಂಗ್ಟನ್: ಅಮೆರಿಕದಿಂದ ಸಬ್ಮರೀನ್ ಪತ್ತೆ ಮಾಡುವ ಹೆಲಿಕಾಪ್ಟರ್ ರೋಮಿಯೋ ಖರೀದಿಸಲು ಭಾರತ ಪ್ರಸ್ತಾವನೆ ಮಂಡಿಸಿದೆ. ಇದು 200 ಕೋಟಿ ಡಾಲರ್ (14 ಸಾವಿರ ಕೋಟಿ ರೂ.) ಮೌಲ್ಯದ ಒಪ್ಪಂದವಾಗಿರಲಿದ್ದು, 24 ಹೆಲಿಕಾಪ್ಟರ್ಗಳನ್ನು ಖರಿದಿಸಲಾಗುತ್ತದೆ. ಮುಂದಿನ ಕೆಲವೇ ತಿಂಗಳುಗಳಲ್ಲಿ ಒಪ್ಪಂದ ಅಂತಿಮಗೊಳ್ಳಲಿದೆ. ಅಮೆರಿಕ ಹಾಗೂ ಭಾರ ತದ ಮಧ್ಯೆ ಕಳೆದ ಕೆಲವು ತಿಂಗಳಿಂದ ರಕ್ಷಣಾ ಒಪ್ಪಂದಗಳಲ್ಲಿ ಹೆಚ್ಚಳವಾಗಿದ್ದು, ತನ್ನ ಅತ್ಯಾಧು ನಿಕ ಶಸ್ತ್ರಾಸ್ತ್ರಗಳನ್ನು ಭಾರತಕ್ಕೆ ಒದಗಿಸಲು ಅಮೆರಿಕ ಮುಂದಾಗಿದೆ. ಕೆಲವೇ ದಿನಗಳ ಹಿಂದೆ ಸಿಂಗಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಮಾತು ಕತೆ ಬೆನ್ನಲ್ಲೇ ಈ ಒಪ್ಪಂದಕ್ಕೆ ಸಂಬಂಧಿಸಿ ವಿನಂತಿ ಪತ್ರ ಕಳುಹಿಸಲಾಗಿದೆ. ತುರ್ತಾಗಿ 24 ಹೆಲಿಕಾಪ್ಟರುಗಳನ್ನು ಖರೀದಿಸಿ, ಮುಂದಿನ ದಿನಗಳಲ್ಲಿ 123 ಹೆಲಿಕಾಪ್ಟರುಗಳನ್ನು ಭಾರತದಲ್ಲೇ ತಯಾರಿಸುವ ಯೋಜನೆ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…