ಉಗ್ರ ನಿಗ್ರಹದಲ್ಲಿ ಪಾಕ್ ವಿಫಲ; ಸೇನಾ ನೆರವು ಅಮಾನತು: ಟ್ರಂಪ್
Team Udayavani, Nov 20, 2018, 11:27 AM IST
ವಾಷಿಂಗ್ಟನ್ : ‘ಪಾಕಿಸ್ಥಾನ ತನ್ನ ನೆಲದಲ್ಲಿ ಉಗ್ರರು ಹೊಂದಿರುವ ಸುರಕ್ಷಿತ ತಾಣಗಳನ್ನು ನಾಶ ಮಾಡುವಲ್ಲಿ ಯಾವುದೇ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿಲ್ಲ: ಅಮೆರಿಕದ ನಿರೀಕ್ಷೆಯ ಮಟ್ಟದಲ್ಲಿ ಉಗ್ರ ನಿಗ್ರಹ ಮಾಡುವಲ್ಲಿ ಪಾಕಿಸ್ಥಾನ ವಿಫಲವಾಗಿದೆ; ಹಾಗಾಗಿ ನಾವು ಪಾಕಿಸ್ಥಾನಕ್ಕೆ ನೀಡುತ್ತಿದ್ದ ಸೇನಾ ನೆರವನ್ನು ಅಮಾನತುಗೊಳಿಸಿದ್ದೇವೆ’ ಎಂದು ಟ್ರಂಪ್ ಆಡಳಿತೆ ಹೇಳಿದೆ.
ಉಗ್ರ ನಿಗ್ರಹಕ್ಕಾಗಿ ಅಮೆರಿಕದ ನಿರೀಕ್ಷೆಯ ಮಟ್ಟದಲ್ಲಿ ಪಾಕಿಸ್ಥಾನ ಏನನ್ನೂ ಮಾಡಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದನ್ನು ಅನುಸರಿಸಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಸುಧಾರಣೆ ಕಂಡು ಬಂದಿಲ್ಲ. ಟ್ರಂಪ್ ಮತ್ತು ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ನಡುವೆ ಮುಖಾಮುಖೀ ಭೇಟಿಗೆ ಇದುವೇ ದೊಡ್ಡ ಅಡೆತಡೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಅಮೆರಿಕದ ಕ್ರಮಕ್ಕೆ ಪ್ರತಿಯಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು, “ಉಗ್ರ ನಿಗ್ರಹಕ್ಕಾಗಿ ನಮ್ಮಿಂದ ಏನು ಸಾಧ್ಯವೋ ಅದನ್ನು ಮಾಡಿದ್ದೇವೆ. ಆದರೆ ಇನ್ನು ಮುಂದೆ ನಾವು ನಮಗೆ ಮತ್ತು ನಮ್ಮ ದೇಶದ ಜನರಿಗೆ ಏನು ಬೇಕೋ ಅದನ್ನು ಮಾಡುವೆವು ಹೊರತು ಅಮೆರಿಕಕ್ಕೆ ಏನು ಬೇಕೋ ಅದನ್ನಲ್ಲ’ ಎಂದು ಖಂಡತುಂಡವಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ