ಪಾಕ್ಗೆ 11 ಸಾವಿರ ಕೋಟಿ ರೂ. ನೆರವು ಬಂದ್!
Team Udayavani, Nov 22, 2018, 6:00 AM IST
ವಾಷಿಂಗ್ಟನ್: ಭಯೋತ್ಪಾದಕರನ್ನು ಪೋಷಿಸುತ್ತಾ ಬಂದಿರುವ ಹಾಗೂ ದಿವಾಳಿ ಅಂಚಿನಲ್ಲಿರುವ ಪಾಕಿಸ್ಥಾನಕ್ಕೆ ಅಮೆರಿಕ ಈಗ ಇನ್ನೊಂದು ಆಘಾತ ನೀಡಿದೆ. ಪಾಕ್ಗೆ 11 ಸಾವಿರ ಕೋಟಿ ರೂ. ಭದ್ರತಾ ನೆರವನ್ನು ನೀಡುವ ಪ್ರಸ್ತಾವನೆಯನ್ನು ಅಮೆರಿಕ ರದ್ದುಗೊಳಿಸಿದೆ.
ಅಮೆರಿಕಕ್ಕೆ ಪಾಕ್ ಏನೂ ಮಾಡಿಲ್ಲ. ಹೀಗಾಗಿ ನಾವು ಪಾಕ್ಗೆ ಹಣ ನೀಡಲಾಗದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕೆಲವೇ ದಿನಗಳ ಹಿಂದಷ್ಟೇ ಪಾಕ್ ವಿರುದ್ಧ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದರು. ಅಲ್ಖೈದಾ ಉಗ್ರ ಒಸಾಮಾ ಬಿನ್ ಲಾಡೆನ್ನನ್ನು ಪಾಕಿಸ್ಥಾನ ರಕ್ಷಿಸಿತ್ತು ಎಂದು ಟ್ರಂಪ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆಯ ವಕ್ತಾರ ಕರ್ನಲ್ ರಾಬ್ ಮ್ಯಾನಿಂಗ್, ಪಾಕ್ಗೆ ಆರ್ಥಿಕ ನೆರವು ತಡೆ ಹಿಡಿದಿರುವ ಘೋಷಣೆ ಮಾಡಿದ್ದಾರೆ.
ಟ್ರಂಪ್ ಅಧಿಕಾರಕ್ಕೆ ಬಂದ ಅನಂತರದಲ್ಲಿ ಪಾಕ್ಗೆ ನೀಡಲಾಗುತ್ತಿರುವ ಬಹುತೇಕ ಆರ್ಥಿಕ ನೆರವನ್ನು ಅಮೆರಿಕ ರದ್ದುಗೊಳಿಸಿದೆ. ಕಳೆದ ಸೆಪ್ಟಂಬರ್ನಲ್ಲಿ 2 ಸಾವಿರ ಕೋಟಿ ರೂ. ಸೇನಾ ನೆರವನ್ನು ನಿರಾಕರಿಸಲಾಗಿತ್ತು. ಆಗಲೂ ಉಗ್ರರ ವಿರುದ್ಧ ಕಠಿನ ಕ್ರಮ ಕೈಗೊಳ್ಳದಿದ್ದರೆ ಆರ್ಥಿಕ ನೆರವು ನೀಡಲಾಗದು ಎಂದು ಟ್ರಂಪ್ ಗುಡುಗಿದ್ದರು. ಅಷ್ಟೇ ಅಲ್ಲ, ಯುದ್ಧ ವಿಮಾನ ಖರೀದಿಗೆ ನೀಡಲಾಗು ತ್ತಿದ್ದ ಆರ್ಥಿಕ ನೆರವನ್ನೂ ರದ್ದು ಗೊಳಿಸಲಾಗಿತ್ತು. ಇನ್ನೊಂದೆಡೆ ಪಾಕಿಸ್ಥಾನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ಚೀನದಿಂದ ಸಾಲಕ್ಕಾಗಿ ಎದುರು ನೋಡುತ್ತಿದೆ. ಅಮೆರಿಕದಲ್ಲಿ ಟ್ರಂಪ್ ಅಧಿಕಾರಕ್ಕೇರುತ್ತಿದ್ದಂತೆ ಪಾಕ್ ವಿರೋಧಿ ನೀತಿ ತಳೆದಿದ್ದರಿಂದ ಸಂಬಂಧ ಹದಗೆಟ್ಟಲಾರಂಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ