ಕೋಮಾದಲ್ಲಿದ್ದವಳಿಗೆ ಹೆರಿಗೆ!
Team Udayavani, Jan 7, 2019, 12:30 AM IST
ಫೊನಿಕ್ಸ್: ಕೋಮಾದಲ್ಲಿರುವ ಮಹಿಳೆ ಎಂದಾ ದರೂ ಮಗುವಿಗೆ ಜನ್ಮ ನೀಡಿದ್ದನ್ನು ಕೇಳಿದ್ದೀರಾ? ಇಂಥದ್ದೊಂದು ಅಚ್ಚರಿಯ ಘಟನೆ ಅಮೆರಿಕದ ಅರಿಜೋನಾದ ಫೊನಿಕ್ಸ್ ನಲ್ಲಿ ನಡೆದಿದೆ.
ಕಳೆದ 10 ವರ್ಷಗಳಿಂದಲೂ ಆಸ್ಪತ್ರೆಯಲ್ಲಿ ನಿಶ್ಚಲ ಸ್ಥಿತಿಯಲ್ಲಿ ಮಲಗಿರುವ ಮಹಿಳೆಯೊಬ್ಬರು ಕೋಮಾ ಸ್ಥಿತಿಯಲ್ಲಿಯೇ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಅಚ್ಚರಿ ಹಾಗೂ ಆತಂಕಕ್ಕೆ ನೂಕಿದೆ. ಕೋಮಾದಲ್ಲಿರುವ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತೇ ಎಂಬ ಶಂಕೆ ಬಲವಾಗಿದ್ದು, ಈ ಕುರಿತು ತನಿಖೆ ಆರಂಭಿಸಲಾಗಿದೆ.
10 ವರ್ಷಗಳ ಹಿಂದೆ ನೀರಿನಲ್ಲಿ ಮುಳುಗಡೆಯಾದ ಘಟನೆಯ ಬಳಿಕ ಕೋಮಾ ಸ್ಥಿತಿಗೆ ತಲುಪಿದ್ದ ಮಹಿಳೆ ಇಲ್ಲಿನ ಹೇಸಿಯೆಂಡಾ ಹೆಲ್ತ್ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಕೆ ಗರ್ಭ ಧರಿಸಿದ ವಿಚಾರ ಯಾರೊಬ್ಬರಿಗೂ ಗೊತ್ತಿರಲಿಲ್ಲ. ಕಳೆದ ಡಿ. 29ರಂದು ಆಕೆ ಏಕಾಏಕಿ ನರಳಲು ಆರಂಭಿಸಿದ್ದು, ಕೂಡಲೇ ಎಚ್ಚೆತ್ತ ವೈದ್ಯರು, ಆಕೆಯನ್ನು ಪರಿಶೀಲಿಸಿದಾಗ ಹೆರಿಗೆ ನೋವು ಆರಂಭವಾಗಿದ್ದು ತಿಳಿದುಬಂತು. ನಂತರ ಶಸ್ತ್ರಚಿಕಿತ್ಸೆ ನಡೆಸಿ, ಹೆರಿಗೆ ಮಾಡಿಸಲಾಯಿತು.
ಈ ಘಟನೆ ಈಗ ಆಕ್ರೋಶಕ್ಕೆ ಕಾರಣವಾಗಿದ್ದು, ಆಸ್ಪತ್ರೆಯಲ್ಲೇ ಯಾರೋ ಆಕೆಯ ಮೇಲೆ ಅತ್ಯಾಚಾರ ಎಸಗಿರಬಹುದು ಎಂಬ ಅನುಮಾನ ಮೂಡಿದೆ. ಜತೆಗೆ, ಆಸ್ಪತ್ರೆಯಲ್ಲಿ ರೋಗಿಗಳ ಸುರಕ್ಷತೆಯ ಬಗ್ಗೆಯೂ ತೀವ್ರ ಕಳವಳ ವ್ಯಕ್ತವಾಗಿದೆ. ಸಂತ್ರಸ್ತೆಯ ಪರ ವಕೀಲೆ ತಾಷಾ ಮನೇಕರ್ ಅವರು, ಆಸ್ಪತ್ರೆಯ ಎಲ್ಲ ಸಿಬ್ಬಂದಿಯ ಡಿಎನ್ಎ ಪರೀಕ್ಷೆ ನಡೆಸಿ, ಮಗು ವಿನ ತಂದೆ ಹಾಗೂ ಅಪರಾಧಿ ಯಾರು ಎಂಬು ದನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ