CONNECT WITH US  

ಅಲ್ಪಸಂಖ್ಯಾತ ಇಲಾಖೆ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ 

ಯಾದಗಿರಿ: ಇಲ್ಲಿನ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯದಲ್ಲಿ  ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ.

ಮಲ್ಲಿಕಾ ಪದವಿ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಇಮಾಂಬಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಲಬುರಗಿಯ ಸೇಡಂನ ನಾಚಾವಾರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. 

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ನಗರ ಮಹಿಳಾ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 


Trending videos

Back to Top