ಚುನಾವಣಾ ಕಾರ್ಯ ನಿಷ್ಪಕ್ಷಪಾತವಾಗಿ ನಿರ್ವಹಿಸಿ

Team Udayavani, Aug 25, 2018, 2:29 PM IST

yad-1.jpg

ಯಾದಗಿರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಮತದಾನ ಪ್ರಕ್ರಿಯೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಿರ್ವಹಿಸಬೇಕು ಎಂದು ಸಹಾಯಕ ಆಯುಕ್ತ ಡಾ| ಬಿ.ಎಸ್‌. ಮಂಜುನಾಥಸ್ವಾಮಿ ಸೂಚಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ, ಮತಗಟ್ಟೆ ಸಹಾಯಕ ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮತಗಟ್ಟೆ ಅಧಿಕಾರಿಗಳು ಚುನಾವಣಾ ತರಬೇತಿಯಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಿ ಚುನಾವಣಾ ಆಯೋಗದ ಸೂಚನೆಗಳನ್ನು ಸರಿಯಾಗಿ ಅಥೈಸಿಕೊಳ್ಳಬೇಕು. ಮತದಾರರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಎಲ್ಲಾ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳೊಡನೆ ಸಮನಾಗಿ ವ್ಯವಹರಿಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಣಮಂತ ಎಸ್‌. ಪೂಜಾರಿ ಕಾರ್ಯಾಗಾರದಲ್ಲಿ ತರಬೇತಿ ನೀಡಿ, ಚುನಾವಣಾ ಆಯೋಗದ ಸೂಚನೆಯ ಪ್ರಕಾರ ಮತಗಟ್ಟೆ ಒಳಗೆ ಮತ್ತು ಮತಗಟ್ಟೆಯ ಹೊರಗೆ 100 ಮೀಟರ್‌ ವ್ಯಾಪ್ತಿಯಲ್ಲಿ ಸೆಲ್ಯೂಲರ್‌ ಫೋನ್‌ಗಳು, ಕಾರ್ಡ್‌ಲೆಸ್‌ ಫೋನ್‌ಗಳು, ವೈರ್‌ಲೆಸ್‌ ಸೆಟ್‌ಗಳ ಬಳಕೆ ನಿಷೇಧಿ ಸಲಾಗಿದೆ. ಸದರಿ ಚುನಾವಣೆಯಲ್ಲಿ ಮತದಾರರ ಎಡಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಬೇಕು ಎಂದು ತಿಳಿಸಿದರು.

ಆಗಸ್ಟ್‌ 31ರಂದು ಬೆಳಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆವರೆಗೆ ಮತದಾನ ನಡೆಯಲಿದ್ದು, ಮತದಾನ ಆರಂಭದ ಪೂರ್ವದಲ್ಲಿ ಅಣುಕು ಮತದಾನ ನಡೆಸಿ, ವಿದ್ಯುನ್ಮಾನ ಮತಯಂತ್ರಗಳ ಕಾರ್ಯಕ್ಷಮತೆ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಮತದಾನ ಮುಕ್ತಾಯದ ಸಂದರ್ಭದಲ್ಲಿ ಸಂಜೆ 5:00 ಗಂಟೆಯೊಳಗೆ ಸರದಿಯಲ್ಲಿ ನಿಂತಿರುವ ಕೊನೆಯ ಮತದಾರನಿಗೆ 1ನೇ ಅಂಕಿಯ ಚೀಟಿಯಂತೆ ಎಲ್ಲರಿಗೂ ಚೀಟಿಗಳನ್ನು ವಿತರಿಸಬೇಕು. ಕೊನೆಯ 1ನೇ ಅಂಕಿಯ ಮತದಾರನ ಮತದಾನದ ಬಳಿಕ ಮತದಾನವನ್ನು
ಅಧಿಕೃತವಾಗಿ ಮುಕ್ತಾಯಗೊಳಿಸಬೇಕು ಎಂದು ತಿಳಿಸಿದರು. ಚುನಾವಣಾ ವೀಕ್ಷಕರಾದ ಜಿ.ಎಂ. ಪಾಟೀಲ, ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿ ಉಪಸಿತರಿ¨

ಅನ್ಯರಿಗೆ ಮತಗಟ್ಟೆ ಪ್ರವೇಶವಿಲ್ಲ ಪೋಲಿಂಗ್‌ ಅಧಿಕಾರಿಗಳು, ಅಭ್ಯರ್ಥಿ/ ಚುನಾವಣಾ ಏಜೆಂಟ್‌/ಪ್ರತಿ ಅಭ್ಯರ್ಥಿಗೆ ಒಬ್ಬ ಏಜೆಂಟ್‌, ಚುನಾವಣಾ ಆಯೋಗ ಅನುಮತಿ ನೀಡಿದ ವ್ಯಕ್ತಿಗಳು, ಕರ್ತವ್ಯನಿರತ ಸರಕಾರಿ ನೌಕರರು, ಸಹಾಯವಿಲ್ಲದೆ ನಡೆದಾಡಲಾಗದ/ಮತಚಲಾಯಿಸಲಾಗದ ನೇತ್ರಹೀನ/ಅಶಕ್ತ ಮತದಾರರ ಜೊತೆಗೆ ಬಂದ ವ್ಯಕ್ತಿ ಮಾತ್ರ ಮತಗಟ್ಟೆಯನ್ನು ಪ್ರವೇಶಿಸಬಹುದು. ಇವರನ್ನು ಹೊರತು ಪಡಿಸಿ ಅನ್ಯರ ಮತಗಟ್ಟೆ ಪ್ರವೇಶವಿಲ್ಲ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.