ವಿಶ್ವೇಶ್ವರಯ್ಯ ಜಯಂತಿ ಆಚರಣೆ

Team Udayavani, Sep 16, 2018, 3:21 PM IST

yad-1.jpg

ಯಾದಗಿರಿ: ಉತ್ತರ ಆರೋಗ್ಯಕಾಪಾಡುವುದಕ್ಕೆ ವೈದ್ಯರ ಪಾತ್ರದಂತೆ ಬಲಿಷ್ಠ ದೇಶದ ನಿರ್ಮಾಣದಲ್ಲಿ ಇಂಜಿನಿಯರ್‌ಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸರ್‌ ಎಂ. ವಿಶ್ವೇಶ್ವರಯ್ಯನವರ 158ನೇ ಜನ್ಮ ದಿನಾಚರಣೆ ಅಂಗವಾಗಿ ಸಿವಿಲ್‌ ಇಂಜಿನಿಯರ್ ಅಸೋಸಿಯೇಶನ್‌ ಮತ್ತು ಶ್ರೀಲಕ್ಷ್ಮೀ ಟ್ರೇಡರ್ ವತಿಯಿಂದ ಆಯೋಜಿಸಲಾಗಿದ್ದ ಇಂಜಿನಿಯರ್ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶಕ್ಕೆ ವಿಶ್ವೇಶ್ವರಯ್ಯನವರ ಕೊಡುಗೆ ಅವಿಸ್ಮರಣೀಯವಾಗಿದೆ. ಅವರು ಯಾವತ್ತು ಹಣ, ಆಸ್ತಿ ಸಂಪಾದಿಸಬೇಕು ಎಂದು ಕನಸೂ ಕಂಡವರಲ್ಲ ಎಂಬುದನ್ನು ಇತಿಹಾಸ ಮೆಲುಕು ಹಾಕಿದಾಗ ಗೊತ್ತಾಗುತ್ತದೆ. ಅವರ ಸೇವೆಗೆ ಸಾಕಷ್ಟು ಪ್ರಶಸ್ತಿಗಳು ಅವರ ಬೆನ್ನತ್ತಿ ಬಂದಿವೆ. ಅಗ್ರಗಣ್ಯವಾದ ಭಾರತ ರತ್ನ ಪ್ರಶಸ್ತಿ ವಿಶ್ವೇಶ್ವರಯ್ಯ ಪಡೆದಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ಅಸೋಸೊಯೇಶನ್‌ ಅಧ್ಯಕ್ಷ ಭೀಮನಗೌಡ ಕ್ಯಾತನಾಳ ಮಾತನಾಡಿ, ಇಂಜಿನಿಯರ್‌ಗಳ ಸೇವೆ ಅಮೋಘವಾಗಿದೆ. ಸರ್‌ ಎಂ.ವಿ. ಅವರು ಮಹಾನ್‌ ಸಾಧಕರು ಎಂದು ವರ್ಣಿಸಿದರು. ಒಬ್ಬ ಇಂಜಿನಿಯರ್‌ ತಪ್ಪು ಮಾಡಿದರೆ ಸಾಕಷ್ಟು
ಅವಾಂತರಗಳು ಸೃಷ್ಟಿಯಾಗುತ್ತದೆ. ಹಾಗಾಗಿ ಸಾಕಷ್ಟು ಒತ್ತಡಗಳಲ್ಲೂ ಜವಾಬ್ದಾರಿಯಿಂದ ಕಾರ್ಯ ಯೋಜನೆ ರೂಪಿಸಬೇಕಾಗುತ್ತದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಇಂಜಿನಿಯರ್‌ ಗಳಿಗಾಗಿ ಭವನ ನಿರ್ಮಾಣಕ್ಕೆ ನಿವೇಶನ
ಒದಗಿಸಿ ಅನುಕೂಲ ಮಾಡಿಕೊಡುವಂತೆ ಶಾಸಕರಿಗೆ ಬೇಡಿಕೆ ಸಲ್ಲಿಸಲಾಯಿತು.

ರೋಟರಿ ಕ್ಲಬ್‌ ಅಧ್ಯಕ್ಷ ಭಾವರಿಲಾಲ್‌ ಧೋಖಾ, ಲೋಕೋಪಯೋಗಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಚನ್ನಬಸ್ಸಪ್ಪ ಮೆಕಾಲೆ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಇಂದುಧರ ಸಿನ್ನೂರ್‌, ಜಿಪಂ ಸದಸ್ಯ ಭೀಮನಗೌಡ ಕೂಡ್ಮೂರ ಇದ್ದರು. ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ದೇವಜೀ, ಮಲ್ಲಿಕಾರ್ಜುನ ಪಾಂಚಾಳ ಸೇರಿದಂತೆ ಇಂಜಿನಿಯರ್‌ಗಳು ಭಾಗವಹಿಸಿದ್ದರು

ಎಂವಿ ಸಮಾಜ ಸೇವೆ ಜಗತ್ತಿಗೆ ಮಾದರಿ: ಮೇಸಿ 
ಸೈದಾಪುರ: ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಸರ್‌ ಮೋಕ್ಷಗೊಂಡಂ ವಿಶ್ವೇಶ್ವರಯ್ಯನವರು ತಮ್ಮ ಬುದ್ದಿಶಕ್ತಿ, ಶಿಸ್ತು, ಸಮಾಜ ಸೇವೆಯಿಂದಾಗಿ ಇಡೀ ಜಗತ್ತೇ ಮೆಚ್ಚುವಂತಹ ಸಾಧನೆ ಮಾಡಿದ್ದಾರೆ. ಅಂತಹ ಮಹಾನ್‌ ವ್ಯಕ್ತಿಯ ಜೀವನ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸರ್‌. ಎಂ.ವಿ. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಪ್ಪ ಮೇಸ್ತ್ರಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಮಾಧ್ವಾರ ಗ್ರಾಮದ ಸರ್‌ ಎಂ. ವಿಶ್ವೇಶ್ವರಯ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಇಂಜಿನಿಯರ್‌ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಮುದ್ದೇನಹಳ್ಳಿ ಎಂಬ ಗ್ರಾಮದಲ್ಲಿ
ಜನಿಸಿದ ಸರ್‌ ಎಂ.ವಿ. ಆರಂಭದಲ್ಲಿ ಬಿಎ ಪದವಿ ಪಡೆದು ನಂತರ ಪುಣೆ ವಿಜ್ಞಾನ ಕಾಲೇಜಿನಿಂದ ಇಂಜಿನಿಯರ್‌ ಪದವಿ ಪಡೆದರು. ಮೈಸೂರು ಸಂಸ್ಥಾನದ ದಿವಾನರಾಗಿ ಕಾರ್ಯನಿರ್ವಹಿಸಿ ಕಾವೇರಿ ನದಿಗೆ ಕೃಷ್ಣರಾಜ ಸಾಗರ ಅಣೆಕಟ್ಟು ನಿರ್ಮಿಸುವ ಮೂಲಕ ಅಲ್ಲಿನ ಜನರಿಗೆ ನೀರಾವರಿ ಸೌಲಭ್ಯ ಒದಗಿಸಿಕೊಟ್ಟರು. ಕೇವಲ ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಅವರ ಹಲವು ಸಾಧನೆ ಮಾಡಿದ್ದಾರೆ. ಅವರ ಬುದ್ದಿವಂತಿಕೆಗೆ ಮೆಚ್ಚಿದ ಬ್ರಿಟನ್‌ ಸರಕಾರ ಅವರಿಗೆ ಸರ್‌ ಎಂಬ ಗೌರವ ನೀಡಿತು.

1955ರಲ್ಲಿ ಭಾರತ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿ ನೀಡಿತು. ನಾವೆಲ್ಲರೂ ಸರ್‌ ಎಂ.ವಿ. ಆದರ್ಶಗಳನ್ನು ಪಾಲಿಸಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು. ಮುಖ್ಯಶಿಕ್ಷಕ ಶ್ರೀನಿವಾಸ ಕಲಾಲ, ಶಿಕ್ಷಕರಾದ ಶಶಿಕಲಾ, ಚನ್ನಪ್ಪ, ಉಷಾದೇವಿ, ದೇವಪ್ಪ, ಶಾಂತರಾಜ, ಜಾನುಕುಮಾರ, ಅಂಬಿಕಾ, ರೇಣುಕಾ, ಅಶ್ವಿ‌ನಿ, ರಾಚಮ್ಮ
ಇದ್ದರು. 

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.