CONNECT WITH US  

ಮತ್ತೆ ಬಂದ್ರು ಜಲೀಲಾ: ರೆಬಲ್ ಸಾಂಗ್ ವೀಕ್ಷಿಸಿ

ಸುದೀಪ್‌ ಅವರ ಬ್ಯಾನರ್‌ನಲ್ಲಿ ತಯಾರಾಗಿರುವ "ಅಂಬಿ ನಿಂಗೆ ವಯಸ್ಸಾಯ್ತೋ' ಚಿತ್ರದ ಟೀಸರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಹಿಟ್ ಆಗಿದ್ದು, ಇತ್ತ ಚಿತ್ರತಂಡ ಚಿತ್ರದ "ಹೇ ಜಲೀಲಾ' ಎಂಬ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದೆ. ಅಂಬರೀಶ್ ಆ್ಯಂಗ್ರಿ ಯಂಗ್ ಮ್ಯಾನ್ ಲುಕ್‍ನಲ್ಲಿ ಮಿಂಚಿದ್ದು, ಇದೀಗ ಹಾಡು ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಹಿಟ್ ಆಗಿದೆ. ಇಲ್ಲಿವರೆಗೂ 5 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಾಡಿಗೆ ಸಾಹಿತ್ಯವನ್ನು ಜೋಗಿ ಪ್ರೇಮ್ ಬರೆದಿದ್ದು, ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ. ಚಿತ್ರವನ್ನು ಗುರುದತ್‌ ಗಾಣಿಗ ನಿರ್ದೇಶಿಸುತ್ತಿದ್ದು, ಸುದೀಪ್‌ ಜೊತೆ ಸಹಾಯಕರಾಗಿದ್ದ ಅವರಿಗೆ ಇದು ಮೊದಲ ಸಿನಿಮಾ. ಚಿತ್ರಕ್ಕೆ ಸುದೀಪ್‌ ಅವರ ಚಿತ್ರಕಥೆ ಇದೆ. ಜಾಕ್‌ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಅಂಬರೀಶ್‌ ಜೋಡಿಯಾಗಿ ಸುಹಾಸಿನಿ ನಟಿಸುತ್ತಿದ್ದಾರೆ. ಅಂದಹಾಗೆ, "ಅಂಬಿ ನಿಂಗೆ ವಯಸ್ಸಾಯ್ತೋ' ತಮಿಳಿನ "ಪಾ ಪಾಂಡಿ' ಚಿತ್ರದ ರೀಮೇಕ್‌. ಅಲ್ಲಿ ರಾಜ್‌ಕಿರಣ್‌ ಮಾಡಿದ ಪಾತ್ರವನ್ನು ಇಲ್ಲಿ ಅಂಬರೀಶ್‌ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಂಬರೀಶ್‌ ಅವರ ಯೌವ್ವನದ ದಿನಗಳ ಪಾತ್ರದಲ್ಲಿ ಸುದೀಪ್‌ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ, ಜೆಬಿನ್‌ ಜಾಕೋಬ್‌ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ರೆಬಲ್ ಸಾಂಗ್ ವೀಕ್ಷಿಸಿ.

Back to Top