“ಗುಂಪಲ್ಲಿದ್ರೂ ಗುರ್ತಿಡಿಯೋ ಹೈಟು’ ಎಂದ “ಅಯೋಗ್ಯ’: ಮಾಸ್ ಟೀಸರ್ ವೀಕ್ಷಿಸಿ
Team Udayavani, Mar 19, 2018, 4:31 PM IST
“ಗುಂಪಲ್ಲಿದ್ರೂ ಗುರ್ತಿಡಿಯೋ ಹೈಟು, ಕಬ್ಬಿಣದ ಮೈಕಟ್ಟು, ಹುರಿ ಮೀಸೆ, ಹದ್ದಿನ ಕಣ್ಣು, ಸೊಗಡು ತುಂಬಿರೋ ರಗಡು ಬಾಡಿ, ಮೈ ನೇಮ್ ಈಸ್’…. ಎಂಬ ಡೈಲಾಗ್ನಿಂದ ಮಾಸ್ ಎಂಟ್ರಿ ಕೊಟ್ಟಿರುವ ಸತೀಶ್ ನೀನಾಸಂ ಅಭಿನಯದ ಬಹುನಿರೀಕ್ಷಿತ “ಅಯೋಗ್ಯ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಕ್ಕತ್ ರಗಡ್ ಲುಕ್’ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಈ ಟೀಸರ್ನಿಂದಾಗಿ ಸಿನಿಮಾದ ಮೇಲೆ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ. ಇನ್ನು ಈ ಚಿತ್ರದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಪಾತ್ರದಲ್ಲಿ ಸತೀಶ್ ನೀನಾಸಂ ಕಾಣಿಸಿಕೊಂಡಿದ್ದು, ರಚಿತಾ ರಾಮ್ ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ಮಿಂಚಿದ್ದಾರೆ. ಖಡಕ್ ವಿಲನ್ ಬಚ್ಚೇಗೌಡನಾಗಿ ರವಿಶಂಕರ್ ನಟಿಸಿದ್ದಾರೆ. ಚಿತ್ರಕ್ಕೆ ಯೋಗರಾಜ್ ಭಟ್ ಶಿಷ್ಯ ಮಹೇಶ್ ಕುಮಾರ್ ಕಥೆ ಬರೆದು ನಿರ್ದೇಶಿಸಿದರೆ, ಟಿ.ಆರ್. ಚಂದ್ರಶೇಖರ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಲ್ಲದೇ ಶರತ್ ಚಕ್ರವರ್ತಿ ಸಂಭಾಷಣೆ, ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದ್ದು, ಪ್ರೀತಮ್ ತೆಗ್ಗಿನಮನೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ, ಸರಿತ, ರವಿಶಂಕರ್, ರಂಗಾಯಣ ರಘು, ತಬಲಾ ನಾಣಿ, ಸಾಧು ಕೋಕಿಲ, ಬುಲೆಟ್ ಪ್ರಕಾಶ್, ಕುರಿ ಪ್ರತಾಪ್ ಸೇರಿದಂತೆ ನಟಿಸಿದ್ದಾರೆ. ಚಿತ್ರದ ಮಾಸ್ ಟೀಸರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ