CONNECT WITH US  

ಸುನಿ ಬೆಟ್ಟಿಂಗ್ "ಬಜಾರ್‌': ಆ್ಯಕ್ಷನ್ ಟ್ರೈಲರ್ ವೀಕ್ಷಿಸಿ

"ಚಮಕ್‌' ನಂತರ "ಬಜಾರ್‌' ಎಂಬ ಹೊಸ ಚಿತ್ರವನ್ನು ಸುನಿ ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಅಲ್ಲದೇ ಚಿತ್ರದ ಪೋಸ್ಟರ್, ಹಾಡುಗಳು ಹಾಗೂ ಟ್ರೈಲರ್ ಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದ್ದು, ಇದೀಗ ಚಿತ್ರತಂಡ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆ ಮಾಡಿದೆ. ಅಲ್ಲದೆ ಟ್ರೈಲರ್ ನೋಡಿದ ಸಿನಿರಸಿಕರಿಂದ ಬೊಂಬಾಟ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೌದು, "ಪಾರಿವಾಳ ಪ್ರೀತಿಯ ಸಂಕೇತ, ಪಾರಿವಾಳ ಶಾಂತಿಯ ಪ್ರತೀಕ. ಆದರೆ ನಿಮಗೆ ಗೊತ್ತಿಲ್ಲದ ಬೇರೆ ಪಾರಿವಾಳದ ಲೋಕವೊಂದಿದೆ' ಎನ್ನುವ ಡೈಲಾಗ್​ ಮೂಲಕ ಟ್ರೈಲರ್ ಆರಂಭವಾಗುತ್ತದೆ. ನೋಡಲು ಪಕ್ಕಾ ಕಮರ್ಷಿಯಲ್ ಸಿನಿಮಾದಂತೆ ಕಾಣಿಸುತ್ತಿರುವ "ಬಜಾರ್' ಸಿನಿಮಾ ಅಂಡರ್ ವರ್ಲ್ಡ್ ಕಥಾಹಂದರವನ್ನೊಳಗೊಂಡಿದ್ದು, ಈ ಚಿತ್ರದಲ್ಲಿ ಪ್ರೇಮ ಸಂದೇಶ ಸಾರುವ ಪಾರಿವಾಳಕ್ಕೂ ಪ್ರಮುಖ ಪಾತ್ರವಿದೆ. ಪಾರಿವಾಳಗಳ ಬೆಟ್ಟಿಂಗ್‍ನಲ್ಲಿ ನಡೆಯುವ ಪ್ರೇಮಕಥೆಯನ್ನು ನಿರ್ದೇಶಕರು ಹೇಳಲು ಹೊರಟಿದ್ದಾರೆ. "ಬಜಾರ್‌' ಚಿತ್ರದ ಮೂಲಕ ಧನ್‌ವೀರ್‌ ಎಂಬ ಹೊಸ ನಟನನ್ನು ಸುನಿ ಕನ್ನಡಕ್ಕೆ ಪರಿಚಯಿಸುತ್ತಿದ್ದು, ಧನ್‌ವೀರ್‌ ಎದುರು ನಾಯಕಿಯಾಗಿ "ಧೈರ್ಯಂ'ನ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. "ಬಜಾರ್‌' ಚಿತ್ರವನ್ನು ಭಾರತಿ ಫಿಲಂ ಪ್ರೊಡಕ್ಷನ್ಸ್‌ನಡಿ ತಿಮ್ಮೇಗೌಡ ನಿರ್ಮಿಸುತ್ತಿದ್ದು, ಎಂ.ಎಲ್‌. ಪ್ರಸನ್ನ ಅವರ ಕಥೆಗೆ ಸುನಿ ಚಿತ್ರಕಥೆ ರಚಿಸಿದ್ದಾರೆ. ಸುನಿ ಮತ್ತು "ಮೃಗಶಿರ' ಶ್ರೀಕಾಂತ್‌ ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಸಂತೋಷ್‌ ರೈ ಪಾತಾಜೆ ಅವರ ಛಾಯಾಗ್ರಹಣವಿದ್ದು, ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಇನ್ನು ನಟ ಶಿವಧ್ವಜ್‌, ಚಿತ್ರದ ಪ್ರೊಡಕ್ಷನ್‌ ಡಿಸೈನರ್‌ ಆಗಿ ಕೆಲಸ ಮಾಡುತ್ತಿದ್ದು, ಜನವರಿ 11ರಂದು ಚಿತ್ರ ತೆರೆಗೆ ಬರಲಿದೆ. ಚಿತ್ರದ ಆ್ಯಕ್ಷನ್ ಟ್ರೈಲರ್ ವೀಕ್ಷಿಸಿ.

Back to Top