“ಭರಾಟೆ’ ಲುಕ್ನಲ್ಲಿ ಶ್ರೀಮುರಳಿ: ಮಾಸ್ ಟೀಸರ್ ವೀಕ್ಷಿಸಿ
Team Udayavani, Dec 18, 2018, 3:02 PM IST
ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ “ಕಿಸ್’ ಶ್ರೀಲೀಲಾ ಅಭಿನಯಿಸುತ್ತಿರುವ “ಭರಾಟೆ’ ಚಿತ್ರದ ಟೀಸರ್ ನಿನ್ನೆಯಷ್ಟೇ ಬಿಡುಗಡೆಯಾಗಿದ್ದು, ಯೂಟ್ಯೂಬ್ ಟ್ರೆಂಡಿಂಗ್ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಶ್ರೀ ಮುರಳಿ ನಿನ್ನೆಯಷ್ಟೇ 37ನೇ ವಸಂತಕ್ಕೆ ಕಾಲಿಟ್ಟಿದ್ದು, ಅದೇ ವೇಳೆ ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ “ಭರಾಟೆ’ ಸಿನಿಮಾದ ಟೀಸರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡು ಮಾಡುತ್ತಿರುವ ಟೀಸರ್ ನಲ್ಲಿ ಶ್ರೀ ಮುರಳಿಯ ಮಾಸ್ ಲುಕ್, ಖಡಕ್ ಡೈಲಾಗ್ ಹಾಗೂ ರಾಜಸ್ಥಾನದ ದೃಶ್ಯಗಳ ಜೊತೆಗೆ ಹೊಡೆದಾಟದ ಸೀನ್ಗಳನ್ನು ನೋಡಿ ಸಿನಿಪ್ರಿಯರು ಫಿದಾ ಆಗಿದ್ದಾರೆ. ಇನ್ನು ಚಿತ್ರಕ್ಕೆ “ಭರ್ಜರಿ’ ಚೇತನ್ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ರಚಿಸಿದ್ದಾರೆ. ಈಗಾಗಲೇ ಚೇತನ್ “ಭರ್ಜರಿ’, “ಬಹದ್ದೂರ್’ ಚಿತ್ರಗಳ ಮೂಲಕ ಸಿನಿ ಪ್ರಿಯರಿಗೆ ಭರ್ಜರಿ ರಸದೌತಣವನ್ನು ನೀಡಿದ್ದಾರೆ. ಅಲ್ಲದೇ ಈ ಚಿತ್ರದ ಮೂಲಕ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದಾರೆ. ಈ ಚಿತ್ರವನ್ನು ಸುಪ್ರೀತ್ ನಿರ್ಮಿಸುತ್ತಿದ್ದು, ಭುವನ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಚಿತ್ರದ ಮಾಸ್ ಟೀಸರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್