"ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾದ ಹಾಸ್ಯಭರಿತ ಮೇಕಿಂಗ್ ವೀಡಿಯೋ
ಈಗಾಗಲೇ "ಜಾನಿ ಜಾನಿ ಎಸ್ ಪಪ್ಪಾ' ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿಸುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿದ್ದು, ನೋಡುಗರ ಮೊಗದಲ್ಲಿ ಮಂದಹಾಸವನ್ನು ತರಿಸುತ್ತಿದೆ. ಇನ್ನು ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ಹಾಗೂ ಅವರ ಎದುರಿಗೆ ನಾಯಕಿಯಾಗಿ ರಚಿತಾರಾಮ್ ನಟಿಸಿದ್ದಾರೆ. ಚಿತ್ರಕ್ಕೆ ಪ್ರೀತಂ ಗುಬ್ಬಿ ನಿರ್ದೇಶನವಿದೆ. ಇನ್ನು ಚಿತ್ರದಲ್ಲಿ ರಂಗಾಯಣ ರಘು, ಸಾಧುಕೋಕಿಲ, ದತ್ತಣ್ಣ ಸೇರಿದಂತೆ ಅನೇಕರ ತಾರಾಬಳಗವಿದೆ. ಚಿತ್ರದ ಬೊಂಬಾಟ್ ಮೇಕಿಂಗ್ ವೀಡಿಯೋ ವೀಕ್ಷಿಸಿ.