“ಜಾನಿ ಜಾನಿ ಯೆಸ್ ಪಪ್ಪಾ’ ಸಿನಿಮಾದ ಸೂಪರ್ ಪ್ರೋಮೋ ವೀಡಿಯೋ
Team Udayavani, Mar 30, 2018, 4:19 PM IST
ದುನಿಯಾ ವಿಜಯ್ ತಮ್ಮ ದುನಿಯಾ ಟಾಕೀಸ್ ಬ್ಯಾನರ್ನಡಿ ನಿರ್ಮಿಸಿ, ನಾಯಕರಾಗಿ ನಟಿಸಿರುವ “ಜಾನಿ ಜಾನಿ ಯೆಸ್ ಪಪ್ಪಾ’ ಚಿತ್ರ ಇಂದು ರಾಜ್ಯಾದ್ಯಂತ ತೆರೆಕಾಣುತ್ತಿದ್ದು, ಈಗಾಗಲೇ ಚಿತ್ರದ ಫಸ್ಟ್ ಲುಕ್ ಟೀಸರ್ಗಳು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿಸುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಪ್ರೋಮೋ ವೀಡಿಯೋ ಬಿಡುಗಡೆ ಮಾಡಿದ್ದು, ನೋಡುಗರ ಮೊಗದಲ್ಲಿ ಮಂದಹಾಸವನ್ನು ತರಿಸುತ್ತಿದೆ. ಇನ್ನು ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ಹಾಗೂ ಅವರ ಎದುರಿಗೆ ನಾಯಕಿಯಾಗಿ ರಚಿತಾರಾಮ್ ನಟಿಸಿದ್ದಾರೆ. ಚಿತ್ರಕ್ಕೆ ಪ್ರೀತಂ ಗುಬ್ಬಿ ನಿರ್ದೇಶನವಿದೆ. ಇನ್ನು ಚಿತ್ರದಲ್ಲಿ ರಂಗಾಯಣ ರಘು, ಸಾಧುಕೋಕಿಲ, ದತ್ತಣ್ಣ ಸೇರಿದಂತೆ ಅನೇಕರ ತಾರಾಬಳಗವಿದೆ. ಚಿತ್ರದ ಸೂಪರ್ ಪ್ರೋಮೋ ವೀಡಿಯೋ ವೀಕ್ಷಿಸಿ.