“ಕುರುಕ್ಷೇತ್ರ’ದ ಮೇಕಿಂಗ್ ದರ್ಶನ: ಜಬರ್ದಸ್ತ್ ವಿಡಿಯೋ ವೀಕ್ಷಿಸಿ
Team Udayavani, Apr 15, 2018, 4:11 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್, ದುರ್ಯೋಧನನಾಗಿ ಅಭಿನಯಿಸುತ್ತಿರುವ ಮುನಿರತ್ನ ನಿರ್ಮಾಣದ ಬಹುಕೋಟಿ ಬಜೆಟಿನ ನಿರೀಕ್ಷಿತ ಚಿತ್ರ “ಕುರುಕ್ಷೇತ್ರ’ ಟೀಸರ್’ಗಳು ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡುತ್ತಿದ್ದರೆ, ಇದೀಗ ಚಿತ್ರತಂಡ ಮತ್ತೊಂದು ಮೇಕಿಂಗ್ ವಿಡಿಯೋ ರಿಲೀಸ್ ಮಾಡಿದ್ದು, ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೇ ಮೇಕಿಂಗ್ ವಿಡಿಯೋದಲ್ಲಿ ಚಿತ್ರದ ಪ್ರಮುಖ ಪಾತ್ರಗಳ ಲುಕ್ ರಿವೀಲ್ ಮಾಡಿದೆ. ಚಿತ್ರದಲ್ಲಿ ಕೃಷ್ಣನಾಗಿ ರವಿಚಂದ್ರನ್, ಭೀಷ್ಮನಾಗಿ ಅಂಬರೀಶ್, ಅರ್ಜುನ್ ಸರ್ಜಾ ಕರ್ಣನಾಗಿ, ಭಾನುಮತಿಯಾಗಿ ಮೇಘನಾ ರಾಜ್, ಅರ್ಜುನನ ಪಾತ್ರದಲ್ಲಿ ಸೋನುಸೂದ್ ಕಾಣಿಸಿಕೊಂಡರೆ ಶಕುನಿಯಾಗಿ ರವಿಶಂಕರ್ ನಟಿಸಿದ್ದಾರೆ. ಅಲ್ಲದೇ ಈ ಹಿಂದೆ ಕುರುಕ್ಷೇತ್ರ ಚಿತ್ರತಂಡ ದುರ್ಯೋಧನ ಹಾಗೂ ಅಭಿಮನ್ಯುವಿನ ಟೀಸರ್ ಬಿಡುಗಡೆ ಮಾಡಿ ಸಿನಿಪ್ರಿಯರಿಂದ ಮೆಚ್ಚುಗೆ ಪಡೆದಿತ್ತು. ಇನ್ನು ಚಿತ್ರಕ್ಕೆ ಹೆಸರಾಂತ ತಂತ್ರಜ್ಞರ ತಂಡವನ್ನು ಕಲೆ ಹಾಕಲಾಗಿದ್ದು, ಜಯನನ್ ವಿನ್ಸೆಂಟ್ ಛಾಯಾಗ್ರಹಣ, “ಕಿಂಗ್ ಸಾಲೋಮನ್’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಿರಿಯ ನಿರ್ದೇಶಕ ನಾಗಣ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಜಬರ್ದಸ್ತ್ ಮೇಕಿಂಗ್ ವಿಡಿಯೋ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್