CONNECT WITH US  

ಗೋಲ್ಡನ್ ಸ್ಟಾರ್ "ಆರೆಂಜ್' ಉತ್ಸವ: ಗೋಲ್ಡನ್ ಟೀಸರ್ ವೀಕ್ಷಿಸಿ

ಗೋಲ್ಡನ್ ಸ್ಟಾರ್ ಗಣೇಶ್ ಅವರ ಬಹುನಿರೀಕ್ಷಿತ "ಆರೆಂಜ್' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಕತ್ ಸೌಂಡು ಮಾಡುತ್ತಿದೆ. ಅಲ್ಲದೇ ಚಿತ್ರತಂಡ ಗಣೇಶ್ ಹುಟ್ಟುಹಬ್ಬಕ್ಕೆ ಟೀಸರ್ ನ್ನು ಬಿಡುಗಡೆ ಮಾಡುವ ಮೂಲಕ ಗಿಫ್ಟ್ ಕೊಟ್ಟಿದೆ. "ಜೂಮ್' ನಿರ್ದೇಶಕ ಪ್ರಶಾಂತ್ ರಾಜ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಗಣೇಶ್ ಜೊತೆಗೆ ಇದು ಎರಡನೇ ಸಿನಿಮಾ. ಅಲ್ಲದೇ "ಜೂಮ್' ಚಿತ್ರಕ್ಕೆ ಸಂಗೀತ ನೀಡಿದ್ದ ತಮನ್ ಅವರೇ ಈ ಚಿತ್ರಕ್ಕೆ ಮ್ಯೂಸಿಕ್ ಸಂಯೋಜಿಸಿದ್ದು. ನವಿನ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಚಿತ್ರದಲ್ಲಿ ಗಣೇಶ್ ಎದುರಿಗೆ "ರಾಜಕುಮಾರ' ಚಿತ್ರದ ಪ್ರಿಯಾ ಆನಂದ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ ಚಿತ್ರದ ಟೀಸರ್ ಅನ್ನು ಯೂಟ್ಯೂಬ್‍ನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದ ಗೋಲ್ಡನ್ ಟೀಸರ್ ವೀಕ್ಷಿಸಿ.

Back to Top