ಗೋಲ್ಡನ್ “ಆರೆಂಜ್’ನಲ್ಲಿ ಗಣೇಶ್: ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Dec 6, 2018, 3:11 PM IST
ಗೋಲ್ಡನ್ ಸ್ಟಾರ್ ಗಣೇಶ್ ಅವರ ಬಹುನಿರೀಕ್ಷಿತ “ಆರೆಂಜ್’ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಹಾಡುಗಳು ಬಿಡುಗಡೆಯಾಗಿ, ಸಾಮಾಜಿಕ ಜಾಲತಾಣದಲ್ಲಿ ಸಕತ್ ಸೌಂಡು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದೆ. ಈಗಾಗಲೇ ಚಿತ್ರದ ಟ್ರೈಲರ್ ಸೋಷಿಯಲ್ ಮೀಡಿಯಾದಲ್ಲಿ ಭರ್ಜರಿ ಹವಾ ಎಬ್ಬಿಸಿದ್ದು, ಸಿನಿಪ್ರಿಯರ ಮನಸ್ಸನ್ನು ಸೆಳೆಯುತ್ತಿದೆ. “ಜೂಮ್’ ನಿರ್ದೇಶಕ ಪ್ರಶಾಂತ್ ರಾಜ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಗಣೇಶ್ ಜೊತೆಗೆ ಇದು ಎರಡನೇ ಸಿನಿಮಾ. ಅಲ್ಲದೇ “ಜೂಮ್’ ಚಿತ್ರಕ್ಕೆ ಸಂಗೀತ ನೀಡಿದ್ದ ತಮನ್ ಅವರೇ ಈ ಚಿತ್ರಕ್ಕೆ ಮ್ಯೂಸಿಕ್ ಸಂಯೋಜಿಸಿದ್ದು. ನವೀನ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಚಿತ್ರದಲ್ಲಿ ಗಣೇಶ್ ಎದುರಿಗೆ “ರಾಜಕುಮಾರ’ ಚಿತ್ರದ ಪ್ರಿಯಾ ಆನಂದ ನಾಯಕಿಯಾಗಿ ಅಭಿನಯಿಸಿದ್ದಾರೆ. ಅಲ್ಲದೇ ಚಿತ್ರವು ಡಿಸೆಂಬರ್ 7ರಂದು ತೆರೆಗೆ ಬರಲಿದೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್