ಬಂದ್ರಪ್ಪ “ಪುಣ್ಯಾತ್ಗಿತ್ತೀರು’: ಭರ್ಜರಿ ಫಸ್ಟ್ ಲುಕ್ ವೀಕ್ಷಿಸಿ
Team Udayavani, Oct 30, 2018, 3:37 PM IST
ನಾಲ್ವರು ಬಿಂದಾಸ್ ಹುಡುಗಿಯರೇ ಮುಖ್ಯಭೂಮಿಕೆಯಲ್ಲಿರುವ “ಪುಣ್ಯಾತ್ಗಿತ್ತೀರು’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಫೇಮಸ್ ಆಗಿದೆ. ಅರಾನಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿತೇಶ್ ಬಾಲ್ಡಾ ನಿರ್ಮಾಣದ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಇಲ್ಲಿಯವರೆಗೂ ಯೂಟ್ಯೂಬ್ನಲ್ಲಿ ಐವತ್ತು ಸಾವಿರಕ್ಕೂ ಹೆಚ್ಚಿನ ವೀಕ್ಷಣೆ ಪಡೆಯುವ ಮೂಲಕ ಟಾಕ್ ಕ್ರಿಯೇಟ್ ಮಾಡುವಲ್ಲಿ ಯಶಸ್ಸು ಕಂಡಿದೆ.ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರೋ ಈ ಚಿತ್ರದಲ್ಲಿ ಮಮತಾ ರಾವುತ್, ವಿದ್ಯಾ ಮೂಡಿಗೆರೆ, ಐಶ್ವರ್ಯ ಮತ್ತು ವಿದ್ಯಾಶ್ರೀ ಬೋಲ್ಡ್ ಹುಡುಗಿಯರಾಗಿ ಕಾಣಿಸಿಕೊಂಡಿದ್ದಾರೆ. ಟೀಸರ್ನ ಮೂಲಕವೇ ಸಖತ್ ಹವಾ ಕ್ರಿಯೇಟ್ ಮಾಡಿರೋ ಈ ಚಿತ್ರದ ಫಸ್ಟ್ ಲುಕ್ನಲ್ಲಿ ಈ ನಾಲ್ಕು ಹುಡುಗೀರು ಸಖತ್ ಬೋಲ್ಡ್ ಆಗಿ ನಟಿಸಿದ್ದು, ಪಡ್ಡೆ ಹುಡುಗರಿಗೆ ಕಚಗುಳಿ ಇಟ್ಟಿದ್ದಾರೆ. ಈ ಚಿತ್ರದಲ್ಲಿ ಕುರಿ ರಂಗ ಮುಂತಾದವರು ಪುಣ್ಯಾತ್ಗಿತ್ತೀರಿಗೆ ಸಾಥ್ ನೀಡಿದ್ದಾರೆ. ಇನ್ನುಳಿದಂತೆ ರಾಮಾನುಜಂ ಸಂಗೀತ, ಶರತ್ ಕುಮಾರ್ ಜಿ ಛಾಯಾಗ್ರಹಣ, ಶಿವಶಂಕರ್ ಸಂಕಲನ, ಸಂದೀಪ್ ಕನಬಕಪಯರ ಸಂಭಾಷಣೆ, ತ್ರಿಭುವನ್ ನೃತ್ಯ ನಿರ್ದೇಶನ ಮತ್ತು ಡಾ.ವಿ ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯವಿದೆ. ಚಿತ್ರದ ಭರ್ಜರಿ ಫಸ್ಟ್ ಲುಕ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ