“ರ್ಯಾಂಬೋ 2ನ “ಧಮ್ ಮಾರೋ ಧಮ್’ ಹಾಡಿನ ಲಿರಿಕಲ್ ವೀಡಿಯೋ
Team Udayavani, Feb 12, 2018, 3:49 PM IST
ಶರಣ್ ಅಭಿನಯದ “ರ್ಯಾಂಬೋ 2′ ಚಿತ್ರದ ಮೂಲಕ ಕನ್ನಡಕ್ಕೆ ಹೊಸ ಗಾಯಕಿಯ ಪರಿಚಯವಾಗುತ್ತಿದೆ. ಆ ಗಾಯಕಿ ಯಾರು ಗೊತ್ತಾ? ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ ಅವರ ಮುದ್ದಿನ ಮಗಳು ಅದಿತಿ. 15 ವರ್ಷದ ಅದಿತಿ ಈಗ “ರ್ಯಾಂಬೋ 2′ ಚಿತ್ರದಲ್ಲಿ ಹಿನ್ನೆಲೆ ಗಾಯಕಿಯಾಗಿ ಪರಿಚಿತರಾಗಿದ್ದಾರೆ. ಈ ಚಿತ್ರಕ್ಕಾಗಿ ಅದಿತಿ ಅವರಿಂದ “ಧಮ್ ಮಾರೋ ಧಮ್ …’ ಎಂಬ ಹಾಡನ್ನು ಹಾಡಿಸಿದ್ದಾರೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ. ಈ ಹಾಡು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಿತ್ತು. ಈಗ ಹಾಡಿನ ಲಿರಿಕಲ್ ವೀಡಿಯೋ ಸಹ ಬಿಡುಗಡೆಯಾಗಿದೆ. ಶರಣ್ ತಮ್ಮ ಲಡ್ಡು ಸಿನಿಮಾ ಬ್ಯಾನರ್ನಡಿ ಈ “ರ್ಯಾಂಬೋ 2′ ಚಿತ್ರವು ಬಿಡುಗಡೆಯಾಗುತ್ತಿದ್ದು, ಚಿತ್ರದ ನಿರ್ಮಾಣದಲ್ಲಿ ಅಟ್ಲಾಂಟ ನಾಗೇಂದ್ರ ಹಾಗೂ ಚಿತ್ರಕ್ಕೆ ಕೆಲಸ ಮಾಡುವ ತಂತ್ರಜ್ಞರು ಕೈ ಜೋಡಿಸಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಛಾಯಾಗ್ರಾಹಕ ಸುಧಾಕರ್ ರಾಜ್, ಸಂಕಲನಕಾರ ಕೆ.ಎಂ. ಪ್ರಕಾಶ್, ಕಲಾ ನಿರ್ದೇಶಕ ಮೋಹನ್ ಬಿ ಕೆರೆ, ಕ್ರಿಯೇಟಿವ್ ಹೆಡ್ ತರುಣ್ ಸುಧೀರ್ ಇವರೆಲ್ಲಾ ವರ್ಕಿಂಗ್ ಪಾಟ್ನರ್ಗಳಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರದಿಂದ ಬಂದ ಲಾಭದಲ್ಲಿ ಎಲ್ಲರಿಗೂ ಶೇರ್ ಸಿಗಲಿದೆಯಂತೆ. ಈ ಹಿಂದೆ “ದಿಲ್ವಾಲ’ ಚಿತ್ರ ಮಾಡಿದ್ದ ಅನಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶರಣ್ಗೆ ನಾಯಕಿಯಾಗಿ ಆಶಿಕಾ ನಟಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ