ಅಪ್ಪಿ ತಪ್ಪಿ ಮಾತಲ್ಲೇ “ರಾಜರಥ’: ಮೆಲೋಡಿ ಸಾಂಗ್ ವೀಕ್ಷಿಸಿ
Team Udayavani, Mar 22, 2018, 5:44 PM IST
ಸಿನಿಪ್ರಿಯರಲ್ಲಿ ಸಖತ್ ಕ್ರೇಜ್ ಹುಟ್ಟುಹಾಕಿರುವ “ರಾಜರಥ’ ಚಿತ್ರದ ಟ್ರೈಲರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರೆ, ಇತ್ತ ಚಿತ್ರತಂಡ ಚಿತ್ರದ “ಅಪ್ಪಿ ತಪ್ಪಿ’ ಲಿರಿಕ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದೆ. ಇನ್ನು ಈ ಹಾಡು ಮನಸಿಗೆ ಮುದ ನೀಡುವಂತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಕ್ಕತ್ ರೆಸ್ಪಾನ್ಸ್ ಸಿಕ್ಕಿದೆ. ಕನ್ನಡ ಮತ್ತು ತೆಲುಗೂ ಭಾಷೆಯಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದಲ್ಲಿ ರಂಗಿ ತರಂಗ ಚಿತ್ರ ಖ್ಯಾತಿಯ ನಿರೂಪ್ ಭಂಡಾರಿ ಮತ್ತು ಆವಂತಿಕಾ ಶೆಟ್ಟಿ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ರವಿಶಂಕರ್ ಅವರು ವಿಭಿನ್ನ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರಕ್ಕೆ ಅನೂಪ್ ಭಂಡಾರಿ ಸಂಗೀತ ಒದಗಿಸಿದ್ದು ಹಿನ್ನೆಲೆ ಸಂಗೀತ ಅಜನೀಶ್ ಲೋಕನಾಥ್ ನೀಡಿದ್ದಾರೆ. ಸಿನಿಮಾಕ್ಕೆ ವಿಲಿಯಮ್ ಡೇವಿಡ್ ಅವರ ಛಾಯಾಗ್ರಹಣವಿದೆ. ಅಲ್ಲದೇ ಚಿತ್ರವು ಮಾರ್ಚ್.23ರಂದು ಬಿಡುಗಡೆಯಾಗಲಿದೆ. ಚಿತ್ರದ ಬೊಂಬಾಟ್ ಮೆಲೋಡಿ ಸಾಂಗ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ