“ಟಗರು ಬಂತು ಟಗರು’ ಹಾಡಿನ ಬೊಂಬಾಟ್ ಮೇಕಿಂಗ್ ವೀಡಿಯೋ
Team Udayavani, Feb 12, 2018, 12:27 PM IST
ಶಿವರಾಜಕುಮಾರ್ ಅಭಿನಯದ “ಟಗರು’ ಇದೇ ತಿಂಗಳ 23ರಂದು ಬಿಡುಗಡೆಯಾಗುತ್ತಿದೆ. ಚಿತ್ರದ “ಟಗರು ಬಂತು ಟಗರು’ ಹಾಡು ಸಿಕ್ಕಾಪಟ್ಟೆ ಹಿಟ್ ಆಗಿದೆ. ತಮಿಳು ಗಾಯಕ ಆ್ಯಂಟೋನಿ ದಾಸನ್ ಹಾಡಿರುವ ಈ ಹಾಡು ಎಲ್ಲಾ ಕಡೆ ಭಾರೀ ಜನಪ್ರಿಯವಾಗಿದ್ದು, ಈಗ ಚಿತ್ರತಂಡದವರು ಆ ಹಾಡಿನ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿದ್ದಾರೆ. “ಟಗರು’ ಚಿತ್ರವನ್ನು “ದುನಿಯಾ’ ಸೂರಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಅವರದ್ದೇ. ಮಹೇಂದ್ರ ಸಿಂಹ ಛಾಯಾಗ್ರಹಣ ಮಾಡಿದರೆ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಚರಣ್ರಾಜ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಶಿವರಾಜಕುಮಾರ್ ಅವರ ಜೊತೆಗೆ ಮಾನ್ವಿತಾ, ಭಾವನಾ ಮೆನನ್, ದೇವರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ವಿಲನ್ ಆಗಿ ಧನಂಜಯ್ ಮತ್ತು ವಸಿಷ್ಠ ಸಿಂಹಾ ಕಾಣಿಸಿಕೊಳ್ಳುತ್ತಿರುವುದು ವಿಶೇಷ.